ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಮತ್ತೊಂದು ಕರ್ಮಕಾಂಡ ಬೆಳಕಿಗೆ ಬಂದಿದೆ. ವಿವಿಯ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಉಮೇಶ್ ನಾಯ್ಕ್ ವಿದ್ಯಾರ್ಥಿಗಳಿಗೆ ಲೈಂಗಿಕ ಮತ್ತು ಮಾನಸಿಕ ದೌರ್ಜನ್ಯ ನೀಡುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಲೆಕ್ಚರರ್ ಬಗ್ಗೆ ವಿದ್ಯಾರ್ಥಿನಿಯರು ವಿಶ್ವವಿದ್ಯಾನಿಲಯದ ಉಪಕುಲಪತಿ, ರಿಜಿಸ್ಟ್ರಾರ್ ಮತ್ತು ಸ್ಪರ್ಶ್ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಸಾಕಷ್ಟು ಬಾರಿ ದೂರು ನೀಡಿದ್ದರೂ ವಿದ್ಯಾರ್ಥಿಗಳಿಗೆ ಆಡಳಿತ ತನಿಖೆ ನಡೆಸಲಿಲ್ಲ. ಈಗ ಕಾಮುಕ ಪ್ರಾಧ್ಯಾಪಕನ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.
Advertisement
ಕ್ಲಾಸ್ ನಲ್ಲಿ ಹಿಡನ್ ಕ್ಯಾಮೆರಾ ಇಟ್ಟಿದ್ದೇನೆಂದು ಪಾಧ್ಯಾಪಕ ಬೆದರಿಸುತ್ತಿದ್ದು, ದೂರು ನೀಡಿದರೆ ದಲಿತ ದೌರ್ಜನ್ಯ ಕೇಸ್ ದಾಖಲಿಸುತ್ತೇನೆಂದು ಬೆದರಿಕೆ ಹಾಕುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.
Advertisement
ಲೈಬ್ರರಿ ಮತ್ತು ಲ್ಯಾಬ್ ಗಳಲ್ಲಿ ಉಮೇಶ್ ವಿದ್ಯಾರ್ಥಿನಿಯರ ಮೈ, ಕೈ ಮುಟ್ಟಿ ಲೈಂಗಿಕ ದೌರ್ಜನ್ಯ ನೀಡಿದ್ದು, ವಿಶ್ವ ವಿದ್ಯಾಲಯ ಮಾತ್ರ ಜಾಣ ಮೌನ ವಹಿಸಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ದೂರು ಕೊಡಲು ಮುಂದಾದ ವಿದ್ಯಾರ್ಥಿನಿಯರಿಗೆ ಡಾ. ಉಮೇಶ್ ಕಾಲ್ ಮಾಡಿ ಬೆದರಿಕೆ ಹಾಕಿದ್ದು, ಬೆದರಿಕೆಯ ಆಡಿಯೋಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.