– ಹುಟ್ಟು ಹಬ್ಬದ ದಿನವೇ ಸ್ಟೂಡಿಯೋ ಮಾಲೀಕರು-ವಿಷ್ಣು ಫ್ಯಾನ್ಸ್‌ನಡುವೆ ಶೀತಲ ಸಮರ
ಬೆಂಗಳೂರು: ಅಭಿಮಾನ್ ಸ್ಟುಡಿಯೋದಲ್ಲಿರೋ ವಿಷ್ಣು ಸ್ಮಾರಕಕ್ಕೆ (Abhiman Studio Vishnuvardhan Memorial) ಪೂಜೆ ಸಲ್ಲಿಸದಂತೆ ನಟ ಬಾಲಣ್ಣ ಅವರ ಮಕ್ಕಳಿಂದ ತಡೆಯೊಡ್ಡಿದ ಹಿನ್ನೆಲೆ ಅಭಿಮಾನ್ ಸ್ಟುಡಿಯೋ ಮುಂದೆ ದಿ. ಡಾ.ವಿಷ್ಣುವರ್ಧನ್ ಅಭಿಮಾನಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ.
ದಿ. ಡಾ.ವಿಷ್ಣುವರ್ಧನ್ ಅವರ 74ನೇ ಜನ್ಮದಿನದ ಅಂಗವಾಗಿ ಸಾವಿರಾರು ಅಭಿಮಾನಿಗಳು (Vishnu Fans) ಬೆಂಗಳೂರಿನ ಅಭಿಮಾನ್ ಸ್ಟುಡಿಯೋ ಸ್ಮಾರಕಕ್ಕೆ ಪೂಜೆ ಸಲ್ಲಿಸಲು ಆಗಮಿಸಿದ್ದಾರೆ. ದೂರದೂರುಗಳಿಂದ ಬೆಳ್ಳಂಬೆಳಗ್ಗೆಯೇ ಬಂದು ಸಾಲುಗಟ್ಟಿ ನಿಂತಿದ್ದಾರೆ. ಆದ್ರೆ ವಿಷ್ಣು ಸ್ಮಾರಕಕ್ಕೆ ಪೂಜೆ ಸಲ್ಲಿಸದಂತೆ ನಟ ಬಾಲಣ್ಣ ಅವರ ಮಕ್ಕಳು ತಡೆಯೊಡ್ಡಿದ್ದಾರೆ. ಸ್ಟುಡಿಯೋ ಗೇಟ್ ಬೀಗ ಹಾಕಿ ಸ್ಮಾರಕ ಮೈಸೂರಿನಲ್ಲಿ ಆಗಿರುವುದರಿಂದ ಅಲ್ಲಿಗೇ ಹೋಗಿ ಪೂಜೆ ಮಾಡುವಂತೆ ಖಾರವಾಗಿ ಹೇಳಿದ್ದಾರೆ. ಇದರಿಂದ ಆಕ್ರೋಶಗೊಂಡ ಅಭಿಮಾನಿಗಳು ಸ್ಮಾರಕದ ಗೇಟ್ ಬಳಿ ಪ್ರತಿಭಟನೆಗೆ ನಿರ್ಧರಿಸಿದ್ದಾರೆ. ಇದನ್ನೂ ಓದಿ: ಹಾಳಾಗುತ್ತಿದೆ ಯುವಜನತೆಯ ಆರೋಗ್ಯ – 60 ಅಲ್ಲ 30 ರಲ್ಲೇ ಬೈಪಾಸ್ ಸರ್ಜರಿ
ವಿಷ್ಣುವರ್ಧನ್ ಹೆಸರಿನಲ್ಲಿ ಅಭಿಮಾನಿ ಸ್ಟುಡಿಯೋದಲ್ಲಿ ಯಾವುದೇ ಕಾರ್ಯಕ್ರಮ, ಸಂಭ್ರಮಾಚಾರಣೆ ಮಾಡದಂತೆ ನಟ ಬಾಲಣ್ಣ ಅವರ ಮಕ್ಕಳು ಕೋರ್ಟಿನಿಂದ ತಡೆಯಾಜ್ಞೆ ತಂದಿದ್ದಾರೆ. ಆದ್ರೆ ಅಭಿಮಾನಿಗಳು ಪೂಜೆ ಸಲ್ಲಿಸೋಕೆ ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ. ಇದರ ಹೊರತಾಗಿಯೂ ಕೋರ್ಟ್ ತಡೆಯಾಜ್ಞೆ ನೆಪ ಹೇಳಿ ಕೆಂಗೇರಿ ಪೋಲಿಸರು ಅನುಮತಿಗೆ ನಿರಾಕರಿಸಿದ್ದಾರೆ. ಇದನ್ನೂ ಓದಿ: PUBLiC TV Impact | ಮೆಟ್ರೋ ನಿಲ್ದಾಣದಲ್ಲಿ ಆರೈಕೆ ಕೇಂದ್ರ ಸ್ಥಾಪಿಸುವಂತೆ BMRCLಗೆ ಮಹಿಳಾ ಆಯೋಗ ಪತ್ರ
ಇದರಿಂದ ಅಸಮಾಧಾನಗೊಂಡ ನೂರಾರು ಸಂಖ್ಯೆಯ ವಿಷ್ಣುವರ್ಧನ್ ಅಭಿಮಾನಿಗಳು ಅಭಿಮಾನ್ ಸ್ಟುಡಿಯೋ ಗೇಟ್ ಬಳಿಯೇ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರಿಂದ ಹುಟ್ಟು ಹಬ್ಬದ ದಿನವೇ ಅಭಿಮಾನ್ ಸ್ಟೂಡಿಯೋ ಮಾಲೀಕರು ಮತ್ತು ವಿಷ್ಣು ಫ್ಯಾನ್ಸ್‌ನಡುವೆ ಶೀತಲ ಸಮರ ಮುಂದುವರಿದಿದೆ. ಇದನ್ನೂ ಓದಿ: ಜಮ್ಮು-ಕಾಶ್ಮೀರ: ದಶಕದ ಮೊದಲ ವಿಧಾನಸಭಾ ಚುನಾವಣೆಗೆ ಇಂದು ಮತದಾನ