Bengaluru City

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆ ಜಾರಿಗೆ ಚಿಂತನೆ ಮಾಡಲಾಗುತ್ತಿದೆ: ಅರಗ ಜ್ಞಾನೇಂದ್ರ

Published

on

Share this

ಬೆಂಗಳೂರು: ರಾಜ್ಯದಲ್ಲಿ ಬಲವಂತದ ಹಾಗೂ ಆಮಿಷವೊಡ್ಡಿ ಮತಾಂತರ ನಡೆಸುತ್ತಿರುವ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ‘ಮತಾಂತರ ನಿಷೇಧ’ ಕಾಯಿದೆಯೊಂದನ್ನು ತರುವ ಚಿಂತನೆ ಇದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ವಿಧಾನ ಸಭೆಯಲ್ಲಿ ಶೂನ್ಯ ವೇಳೆ ಬಿಜೆಪಿ ಸದಸ್ಯ ಗೂಳಿಹಟ್ಟಿ ಶೇಖರ್ ಅವರು, ತಮ್ಮ ಜಿಲ್ಲೆ ಹಾಗೂ ಮತಕ್ಷೇತ್ರದಲ್ಲಿ ಕೆಲವು ಕ್ರಿಶ್ಚಿಯನ್ ಮಿಷನರೀಸ್ ಹಾಗೂ ಸಂಘಟನೆಗಳು ವ್ಯಾಪಕವಾಗಿ ಬಲವಂತದ ಹಾಗೂ ಆಮಿಷಗಳನ್ನೊಡ್ಡಿ ಮುಗ್ಧ ಜನರನ್ನು ಮತಾಂತರಗೊಳಿಸುವ ಪ್ರಕ್ರಿಯೆಯಲ್ಲಿ ತೊಡಗಿದ್ದಾರೆ. ಈ ಹಿನ್ನೆಲೆ ಕೆಲವು ಕುಟುಂಬಗಳೇ ಮುರಿದು ಬಿದ್ದಿವೆ. ಇದನ್ನು ತಡೆಯಲು ಸರ್ಕಾರವು ತಕ್ಷಣ ಅಗತ್ಯ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು. ಇದನ್ನೂ ಓದಿ:  ಯುವತಿಯಿಂದ ಕಾರು ಚಾಲನೆ- ಆಟೋ ಸಂಪೂರ್ಣ ನಜ್ಜುಗುಜ್ಜು

ಶಾಸಕರು ಸ್ವತಃ ತಮ್ಮದೇ ಅನುಭವವನ್ನು ಸದನದಲ್ಲಿ ಹಂಚಿಕೊಂಡಿದ್ದು, ನನ್ನ ತಾಯಿಯನ್ನೇ ಅವರು ಮತಾಂತರಗೊಳಿಸಿದ್ದಾರೆ. ಈ ಪರಿಣಾಮ ಕುಟುಂಬದ ಸದಸ್ಯರಲ್ಲಿ ಕಳವಳವುಂಟಾಗಿದೆ ಎಂದು ಹೇಳಿದರು.

ಚಿತ್ರದುರ್ಗ ಜಿಲ್ಲೆಯಲ್ಲಿ ಸುಮಾರು ಹದಿನೈದರಿಂದ ಇಪ್ಪತ್ತು ಸಾವಿರ ಜನರನ್ನು ಮತಾಂತರಗೊಳಿಸಲಾಗಿದೆ. ಈ ಪ್ರಕ್ರಿಯೆಯಲ್ಲಿ ದಲಿತ, ಹಿಂದುಳಿದ ಹಾಗೂ ಮುಸ್ಲಿಂ ಸಮುದಾಯದ ಜನರೂ ಮತಾಂತರಗೊಂಡಿದ್ದಾರೆ. ಮತಾಂತರ ಪ್ರಕ್ರಿಯೆಯನ್ನು ವಿರೋಧಿಸುವವರಿಗೆ ಬೆದರಿಕೆ ಹಾಕಲಾಗುತ್ತಿದ್ದು, ಪೊಲೀಸರನ್ನು ಉಪಯೋಗಿಸಿ ಸುಳ್ಳು ಕೇಸುಗಳನ್ನು ಹಾಕಲಾಗುತ್ತಿದೆ ಎಂದೂ ಸದಸ್ಯರು ತಿಳಿಸಿದರು. ಇದನ್ನೂ ಓದಿ:  ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸಲು ಕ್ರಮವಹಿಸಬೇಕು: ಕಾರಜೋಳ

ಸದಸ್ಯರು ಪ್ರಸ್ತಾಪಿಸಿದ ವಿಷಯಕ್ಕೆ ಅರಗ ಜ್ಞಾನೇಂದ್ರ ಅವರು ಉತ್ತರ ನೀಡಿದ್ದು, ರಾಜ್ಯದಲ್ಲಿ ಬಲವಂತದ ಮತಾಂತರಕ್ಕೆ ಅವಕಾಶವಿಲ್ಲ. ಆಮಿಷವೊಡ್ಡಿ ಮತಾಂತರ ಮಾಡುವುದು ಕಾನೂನಿಗೆ ವಿರುದ್ಧವಾಗಿದೆ. ಪೊಲೀಸರಿಗೆ ಈ ಕುರಿತು ಸ್ಪಷ್ಟ ನಿರ್ದೇಶನ ನೀಡಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳಲು ತಿಳಿಸಲಾಗಿದೆ ಎಂದರು.

ಸೂಕ್ತ ಕಾನೂನನ್ನು ಜಾರಿಗೆ ತರಲು ಚಿಂತನೆ!

ಜನತೆಯ ಮುಗ್ಧತೆ ಅಥವಾ ಇನ್ನಿತರ ಸನ್ನಿವೇಶಗಳನ್ನು ಉಪಯೋಗಿಸಿಕೊಂಡು ಯಾವುದೇ ಸಂಘಟನೆ ಅಥವಾ ಸಂಸ್ಥೆಗಳು ಮತಾಂತರ ಮಾಡುವುದರಿಂದ, ಸಮಾಜದಲ್ಲಿ, ಶಾಂತಿ ಕದಡುವ ಸಂಭವವೂ ಇದೆ. ಈ ಕುರಿತು ರಾಜ್ಯ ಸರ್ಕಾರ ಸೂಕ್ತ ಕಾನೂನನ್ನು ಜಾರಿಗೆ ತರಲು ಚಿಂತನೆ ನಡೆಸಿದೆ ಎಂದು ಸದನಕ್ಕೆ ತಿಳಿಸಿದರು. ಇದನ್ನೂ ಓದಿ:  ಸರ್ಕಾರದ ಅವೈಜ್ಞಾನಿಕ ನೀತಿಗಳಿಂದ ಗಣಿಗಾರಿಕೆ ಪ್ರದೇಶದಲ್ಲಿ ಸ್ಪೋಟಕ್ಕೆ ಜೀವಗಳು ಬಲಿ

ಆಮಿಷ ನೀಡಿ ಜನರನ್ನು ಮತಾಂತರ ಗೊಳಿಸುವ ಪ್ರಕ್ರಿಯೆಯಲ್ಲಿ ಒಂದು ವ್ಯವಸ್ಥಿತ ಜಾಲವೇ ಇದೆ. ಅದನ್ನು ಯಾವ ರೀತಿ ತಡೆಗಟ್ಟಲು ಸಾಧ್ಯ ಎಂಬುದರ ಬಗ್ಗೆ ಚರ್ಚೆ ಆಗುತ್ತಿದೆ. ಮುಂದಿನ ದಿನಗಳಲ್ಲಿ ಸೂಕ್ತ ಕಾನೂನನ್ನು ತರಲಾಗುವುದು. ಶಾಂತಿ ಭಂಗಕ್ಕೆ ಕಾರಣವಾಗುವ ಯಾವುದೇ ಸಂಘಟನೆಗಳ ಅಥವಾ ವ್ಯಕ್ತಿಗಳ ವಿರುದ್ಧ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸದನಕ್ಕೆ ತಿಳಿಸಿದರು.

ಕಾಂಗ್ರೆಸ್ ಸದಸ್ಯ ಕೆ.ಜೆ.ಜಾರ್ಜ್ ಮಧ್ಯ ಪ್ರವೇಶಿಸಿ ಈ ಕುರಿತು ಮಾತನಾಡಿದ್ದು, ಬಲವಂತವಾಗಿ ಮತಾಂತರಿಸುವ ಯಾವುದೇ ಪ್ರಯತ್ನಕ್ಕೆ ನಮ್ಮ ವಿರೋಧವಿದೆ. ಆದರೆ ಯಾವೊದೋ ಒಂದು ಸಂಘಟನೆ ತಪ್ಪು ಮಾಡಿದರೆ ಅದನ್ನು ಸಾರ್ವತ್ರಿಕವಾಗಿ ದೂಷಿಸುವುದು ಸರಿಯಲ್ಲ ಎಂದು ಹೇಳಿದರು. ಇದನ್ನೂ ಓದಿ: ಭದ್ರಾವತಿ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡಿದ ಹೆಚ್‍ಡಿಕೆ 

ಈ ವೇಳೆ ಜೆಡಿಎಸ್ ಶಾಸಕ ದೇವಾನಂದ್ ಮಾತನಾಡಿ, ತಮ್ಮ ವಿಜಯಪುರ ಜಿಲ್ಲೆಯಲ್ಲಿಯೂ ಮತಾಂತರ ಹಾವಳಿ ಅವ್ಯಾಹತವಾಗಿದೆ. ಬಂಜಾರ ಸಮುದಾಯವನ್ನು ಗುರಿ ಮಾಡಿಕೊಂಡಿರುವ ಕೆಲವು ಸಂಘಟನೆಗಳು ಈ ಕೃತ್ಯ ಮಾಡುತ್ತಿದೆ. ಈ ಸಂಬಂಧ ಶಾಂತಿ ಹಾಗೂ ಕುಟುಂಬದ ಸದಸ್ಯರ ನಡುವೆಯೇ ಸಮನ್ವಯ ಕದಡಿ ಹೋಗಿದೆ. ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಬೇಕು ಎಂದು ಹೇಳಿದರು.

Click to comment

Leave a Reply

Your email address will not be published. Required fields are marked *

Advertisement
Advertisement
Public TV We would like to show you notifications for the latest news and updates.
Dismiss
Allow Notifications