ಮಂಗಳೂರು: ಕರಾವಳಿಯಲ್ಲಿ ಮತ್ತೆ ವ್ಯಾಪಾರ ಧರ್ಮ ದಂಗಲ್ ಆರಂಭವಾಗಿದೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ದೇವಸ್ಥಾನದಲ್ಲಿ ವ್ಯಾಪಾರ ಧರ್ಮ ದಂಗಲ್ ಮುಂದುವರಿದಿದೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ (Kukke Subramanya Temple) ಅನ್ಯಮತೀಯರ ವ್ಯಾಪಾರಕ್ಕೆ ಬಹಿಷ್ಕಾರ ಹಾಕಿದ್ದಾರೆ. ಡಿ.18 ರಂದು ಕುಕ್ಕೆಯಲ್ಲಿ ಚಂಪಾ ಷಷ್ಠಿ ನಡೆಯಲಿದ್ದು, ಈ ಸಂದರ್ಭದಲ್ಲಿ ಅನ್ಯಮತೀಯರ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂ ಸಂಘಟನೆಗಳು ಒತ್ತಾಯ ಮಾಡಿವೆ. ಅಲ್ಲದೆ ಈ ಸಂಬಂಧ ಹಿಂದೂ ಸಂಘಟನೆ ಮುಖಂಡರು ದೇವಳದ ಕಾರ್ಯನಿರ್ವಹಣಾಧಿಕಾರಿಯವರಿಗೆ ಮನವಿ ಕೂಡ ಸಲ್ಲಿಸಿದ್ದಾರೆ.
ಇತ್ತ ಸುಬ್ರಹ್ಮಣ್ಯದ ಕುಮಾರಧಾರ ಬಳಿ ಬ್ಯಾನರ್ ಕೂಡ ಹಾಕಿದ್ದಾರೆ. ಹಿಂದೂ ಹಿತರಕ್ಷಣಾ ವೇದಿಕೆ ಸುಬ್ರಹ್ಮಣ್ಯ ಅನ್ನೋ ಹೆಸರಲ್ಲಿ ಬ್ಯಾನರ್ ಹಾಕಲಾಗಿದೆ. ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಚಂಪಾಷಷ್ಠಿಯ ಸಂದರ್ಭದಲ್ಲಿ ಈ ಪರಿಸರದಲ್ಲಿ ಅನ್ಯಮತೀಯ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ ಅಂತ ಬ್ಯಾನರ್ ನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಸಿಪಿವೈ ಬಾವ ಮಹದೇವಯ್ಯ ಹತ್ಯೆ ಕೇಸ್ – ತಮಿಳುನಾಡು ಮೂಲದ ಓರ್ವ ಅರೆಸ್ಟ್
ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನವು ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ್ದಾಗಿದೆ.