ಬೆಂಗಳೂರು: ಮೇ 23ರಂದು ಲೋಕಸಭಾ ಚುನಾವಣಾ ಫಲಿತಾಂಶ ಹಿನ್ನೆಲೆಯಲ್ಲಿ ಬೆಂಗಳೂರು ಕಮೀಷನರೇಟ್‍ನಲ್ಲಿ ನಿಷೇಧಾಜ್ಞೆ ಜಾರಿ ಮಾಡುವಂತೆ ಆದೇಶ ಹೊರಡಿಸಲಾಗಿದೆ.
ಲೋಕಸಭಾ ಚುನಾವಣೆಯ ಫಲಿತಾಂಶ ಮೇ 23ರಂದು ಹೊರಬೀಳಲಿದೆ. ಆದ್ದರಿಂದ ಫಲಿತಾಂಶದ ದಿನ ಗಲಾಟೆ ಆಗುವ ಸಾಧ್ಯತೆಯಿದೆ ಎಂಬ ಮಾಹಿತಿ ಹಿನ್ನೆಲೆ ಬೆಂಗಳೂರು ಕಮೀಷನರೇಟ್‍ನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮೆ 23 ರಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.
Advertisement
Advertisement
ಚುನಾವಣಾ ಫಲಿತಾಂಶ ಬಂದ ಬಳಿಕ ಗೆದ್ದ ಖುಷಿಯಲ್ಲಿ, ನಿಷೇಧಾಜ್ಞೆ ಜಾರಿಯಲ್ಲಿರುವ ಸಮಯದಲ್ಲಿ ಯಾವುದೇ ಸಭೆ ಅಥವಾ ಮೆರವಣಿಗೆಯನ್ನು ಮಾಡುವಂತಿಲ್ಲ. ಪಟಾಕಿ ಸಿಡಿಸುವಂತಿಲ್ಲ, ಬಿತ್ತಿ ಪತ್ರ ಪ್ರದರ್ಶಿಸುವಂತಿಲ್ಲ ಎಂದು ಆದೇಶಿಸಲಾಗಿದೆ.