ನವದೆಹಲಿ: ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ (Rahul Gandhi) ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿ ಅವರು ಚಿನ್ನ ಖರೀದಿಸಬೇಡಿ, ವಿದೇಶ ಪ್ರವಾಸ ಮಾಡಬೇಡಿ, ಕಡಿಮೆ ಪೆಟ್ರೋಲ್ ಬಳಸಿ ಎಂದು ಸಲಹೆ ನೀಡಿದ್ದನ್ನು ಪ್ರಸ್ತಾಪಿಸಿ ಕೇಂದ್ರ ಸರ್ಕಾರದ ವಿರುದ್ಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಕಿಡಿಕಾರಿದ್ದಾರೆ. ಇದನ್ನೂ ಓದಿ: ಚಿನ್ನ ಖರೀದಿಸಬೇಡಿ – ಮೋದಿ ಕರೆಯ ಬೆನ್ನಲ್ಲೇ ಹಳದಿ ಲೋಹದ ಬೆಲೆ ಭಾರೀ ಇಳಿಕೆ!
मोदी जी ने कल जनता से त्याग मांगे – सोना मत ख़रीदो, विदेश मत जाओ, पेट्रोल कम जलाओ, खाद और खाने का तेल कम करो, मेट्रो में चलो, घर से काम करो।
ये उपदेश नहीं – ये नाकामी के सबूत हैं।
12 साल में देश को इस मुक़ाम पर ला दिया है कि जनता को बताना पड़ रहा है – क्या ख़रीदे, क्या न…
— Rahul Gandhi (@RahulGandhi) May 11, 2026
ಪೋಸ್ಟ್‌ನಲ್ಲಿ ಏನಿದೆ?
ರಸಗೊಬ್ಬರ ಮತ್ತು ಅಡುಗೆ ಎಣ್ಣೆಯನ್ನು ಕಡಿಮೆ ಮಾಡಿ, ಮೆಟ್ರೋದಲ್ಲಿ ಪ್ರಯಾಣಿಸಿ, ಮತ್ತು ಮನೆಯಿಂದಲೇ ಕೆಲಸ ಮಾಡಿ ಎಂದು ಧರ್ಮೋಪದೇಶ ನೀಡಿದ್ದಾರೆ. ಇದು ಧರ್ಮೋಪದೇಶವಲ್ಲ. ಇವು ಕೇಂದ್ರ ಸರ್ಕಾರದ ವೈಫಲ್ಯದ ಪುರಾವೆಗಳು. ಇದನ್ನೂ ಓದಿ: ತೈಲ ಕಂಪನಿಗಳಿಗೆ 1 ಲಕ್ಷ ಕೋಟಿ ನಷ್ಟ – ಶೀಘ್ರವೇ ದರ ಏರಿಕೆ?

