ಬೆಂಗಳೂರು: ಕಾಂಗ್ರೆಸ್ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಜಾರಿ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದೆ. ಬೇನಾಮಿ ಆಸ್ತಿ ಸುಳಿಯಲ್ಲಿ ಸಿಲುಕಿರುವ ಡಿಕೆಶಿಗೆ ನೋಟಿಸ್ ಮೇಲೆ ನೋಟಿಸ್ ನೀಡುತ್ತಿರುವ ಇಡಿ ಜೊತೆಗೆ ಈಗ ಐಟಿ ಪ್ರಪಾರ್ಟಿ ಅಟ್ಯಾಚ್‍ಮೆಂಟ್ ನೋಟಿಸ್ ನೀಡಿದೆ.
ಬೇನಾಮಿ ಆಸ್ತಿ ಬಗ್ಗೆ ತನಿಖೆ ನಡೆಸುತ್ತಿರುವ ಐಟಿ 15 ದಿನಗಳ ಒಳಗಡೆ ಉತ್ತರ ನೀಡುವಂತೆ ಡಿಕೆಶಿಗೆ ಸೂಚಿಸಿದೆ. ಒಂದು ವೇಳೆ ಈ ನೋಟಿಸಿಗೆ ಸರಿಯಾದ ಉತ್ತರ ನೀಡದೇ ಇದ್ದಲ್ಲಿ ಡಿಕೆ ಶಿವಕುಮಾರ್ ಆಸ್ತಿ ಜಪ್ತಿಯಾಗುವ ಸಾಧ್ಯತೆಯಿದೆ.
Advertisement
Advertisement
ಐಟಿ ವಿಚಾರಣೆಯ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅಧಿಕಾರಿಗಳ ಪ್ರಶ್ನೆಗೆ ಹಾರಿಕೆಯ ಉತ್ತರ ನೀಡುತ್ತಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿತ್ತು. ಈಗಾಗಲೇ ಐಟಿ ಎರಡು ಬಾರಿ ನೋಟಿಸ್ ನೀಡಿದ್ದು ಈಗ ಉತ್ತರ ನೀಡದೇ ಇದ್ದರೆ ಡಿಕೆಶಿಗೆ ಸಂಕಷ್ಟವಾಗುವ ಸಾಧ್ಯತೆಯಿದೆ.
Advertisement
Advertisement
ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದ ಐಟಿ:
2008 ರಲ್ಲಿ 75 ಕೋಟಿ ರೂ. 2013 ರಲ್ಲಿ 251 ಕೋಟಿ ರೂ. ಆದಾಯವನ್ನು ಡಿಕೆ ಶಿವಕುಮಾರ್ ಘೋಷಿಸಿದ್ದರೆ, 2018ರ ವಿಧಾನಸಭಾ ಚುನಾವಣೆ ವೇಳೆ 840 ಕೋಟಿ ರೂ. ಆಸ್ತಿ ಹೊಂದಿರುವುದಾಗಿ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದಾರೆ. ಸಚಿವರ ಆದಾಯ ಪ್ರತಿ 5 ವರ್ಷಗಳಿಗೊಮ್ಮೆ ಶೇ.230 ರಷ್ಟು ಹೆಚ್ಚಳ ಕಂಡಿದೆ. ಶಿವಕುಮಾರ್ ಅವರ ಸಂಪಾದನೆಗೂ ಅವರಲ್ಲಿರುವ ಆದಾಯಕ್ಕೆ ತಾಳೆ ಆಗುತ್ತಿಲ್ಲ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಚುನಾವಣಾ ಆಯೋಗಕ್ಕೆ ಈ ಹಿಂದೆ ಐಟಿ ಪತ್ರ ಬರೆದಿತ್ತು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv