ಕೋಲ್ಕತ್ತಾ: ಅಮಾನತುಗೊಂಡ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾಗೆ ಕೋಲ್ಕತ್ತಾ ಪೊಲೀಸ್ ಠಾಣೆ ನೋಟಿಸ್ ಜಾರಿಗೊಳಿಸಿದ್ದು, ಇದಕ್ಕೆ ನೂಪುರ್ ಶರ್ಮಾ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಜೀವಕ್ಕೆ ಅಪಾಯವಿದೆ, ಪೊಲೀಸ್ ಠಾಣೆಗೆ ಹಾಜರಾಗಲು 4 ವಾರಗಳ ಕಾಲಾವಕಾಶ ನೀಡಿ ಎಂದು ಕೋರಿದ್ದಾರೆ.
ಕೋಲ್ಕತ್ತಾ ಪೊಲೀಸರ ನೋಟಿಸ್‌ಗೆ ಪ್ರತಿಕ್ರಿಯೆಯಾಗಿ ಇ-ಮೇಲ್ ಕಳುಹಿಸಿರುವ ನೂಪುರ್ ಶರ್ಮಾ, 4 ವಾರಗಳ ನಂತರ ಪೊಲೀಸ್ ಠಾಣೆಗೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ಯಾವ ದಿನಾಂಕದಂದು ಹಾಜರಾಗುತ್ತಾರೆ ಎಂದು ಸ್ಪಷ್ಟಪಡಿಸಿಲ್ಲ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕೊರೊನಾ
Advertisement
Advertisement
ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ದೇಶದ ವಿವಿಧ ಭಾಗಗಳಲ್ಲಿ ನೂಪುರ್ ವಿರುದ್ಧ ಬೆಂಕಿ ಹೊತ್ತಿಕೊಂಡಿತ್ತು. ಪಶ್ಚಿಮ ಬಂಗಾಳ, ಕೋಲ್ಕತ್ತಾ ಸೇರಿದಂತೆ ಹಲವೆಡೆ ನೂಪುರ್ ಹೆಸರಿನಲ್ಲಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಆಕ್ಸಿಜನ್ ಕೊಡೋಕೆ ಆಗದವರು ಈಗ ಯೋಗ ಮಾಡುವುದಕ್ಕೆ ಬಂದಿದ್ದಾರೆ: ಸಿದ್ದರಾಮಯ್ಯ
Advertisement
ನೂಪುರ್ ವಿರುದ್ಧದ ದೂರಿನ ಆಧಾರದ ಮೇಲೆ ಕೋಲ್ಕತ್ತಾದ ನರಕೊಂಡ ಪೊಲೀಸ್ ಠಾಣೆ ನೂಪುರ್‌ಗೆ ಜೂನ್ 20ರ ಒಳಗಾಗಿ ಹಾಜರಾಗುವಂತೆ ನೋಟಿಸ್ ಕಳುಹಿಸಿತ್ತು. ಆದರೆ ಇದನ್ನು ಮುಂದೂಡುವಂತೆ ನೂಪುರ್ ಮನವಿ ಮಾಡಿದ್ದಾರೆ.