ರಾಂಚಿ: ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ನೀಡಿದ್ದ ಹೇಳಿಕೆಯನ್ನು ವಿರೋಧಿಸಿ ರಾಂಚಿಯಲ್ಲಿ ಮುಸ್ಲಿಮರು ನಡೆಸಿದ ಪ್ರತಿಭಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹತ್ತು ಮಂದಿ ಗಾಯಗೊಂಡಿದ್ದಾರೆ.
ಪೊಲೀಸರು ಮತ್ತು ಪ್ರತಿಭಟನಾನಿರತರ ನಡುವೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ಕರೆತರಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಸಾವನ್ನಪ್ಪಿದ್ದಾರೆ. ಹತ್ತು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರವಾದಿ ವಿರುದ್ಧ ಅವಹೇಳನ – ಕ್ರಮಕ್ಕೆ ಆಗ್ರಹಿಸಿ ದೇಶಾದ್ಯಂತ ಮುಸ್ಲಿಮರ ಪ್ರತಿಭಟನೆ, ಬುರ್ಕಾ ಧರಿಸಿ ಬೀದಿಗಿಳಿದ ಮಹಿಳೆಯರು
Advertisement
Prophet remarks row: Two dead in protest in Jharkhand’s Ranchi
Read @ANI Story | https://t.co/dJqJsEvKMb#ProphetMuhammad #ProphetRemarkRow #Nupur_Sharma #RanchiProtest #NaveenJindal pic.twitter.com/nGBmCXYTEN
— ANI Digital (@ani_digital) June 11, 2022
Advertisement
ಶನಿವಾರ ನಡೆದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ಸಂಭವಿಸಿದೆ. ಈ ವೇಳೆ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಪ್ರತಿಭಟನಾಕಾರರು ಹಾಗೂ ಪೊಲೀಸರು ಇಬ್ಬರು ಗುಂಡು ಹಾರಿಸಿದರ ಪರಿಣಾಮ ಹಲವರು ಗಾಯಗೊಂಡಿದ್ದಾರೆ. ಇದೀಗ ಜಾರ್ಖಂಡ್‍ನ ರಾಜಧಾನಿಯ ಹಲವು ಭಾಗಗಳಲ್ಲಿ ಕಫ್ರ್ಯೂ ವಿಧಿಸಲಾಗಿದೆ.
Advertisement
Advertisement
ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ವಿರುದ್ಧ ಹೇಳಿಕೆ ನೀಡಿ ಬಿರುಗಾಳಿ ಎಬ್ಬಿಸಿದ ನೂಪುರ್ ಶರ್ಮಾ ಅವರನ್ನು ಬಂಧಿಸುವಂತೆ ಆಗ್ರಹಿಸಲಾಗಿದೆ. ಇದನ್ನೂ ಓದಿ: ಕೋಮು ದ್ವೇಷಭಾಷಣ – ಓವೈಸಿ, ನೂಪುರ್ ಶರ್ಮಾ ವಿರುದ್ಧ FIR