ಬೂದಿಮುಚ್ಚಿದ ಕೆಂಡದಂತೆ ಭಾರತ – ಯುಪಿಯಲ್ಲಿ 250ಕ್ಕೂ ಗಲಭೆಕೋರರು ಅರೆಸ್ಟ್

- ರಾಂಚಿಯಲ್ಲಿ ನಿಷೇಧಾಜ್ಞೆ ಕಂಟಿನ್ಯೂ

Advertisements

ನವದೆಹಲಿ: ಪ್ರವಾದಿ ಮುಹಮ್ಮದ್ ಪೈಗಂಬರ್ ಬಗ್ಗೆ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರು ನೀಡಿದ್ದ ವಿವಾದತ್ಮಕ ಹೇಳಿಕೆ ಖಂಡಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಳೆದ ಎರಡು ದಿನಗಳಿಂದ ದೇಶದ ವಿವಿಧೆಡೆ ಹೊತ್ತಿ ಉರಿದಿದ್ದ ಪ್ರದೇಶಗಳಲ್ಲಿ ಪರಿಸ್ಥಿತಿ ಇನ್ನೂ ಬೂದಿ ಮುಚ್ಚಿದ ಕೆಂಡದಂತೆ ಇದೆ.

ರಾಂಚಿಯಲ್ಲಿ ಹಿಂದೂ ಸಂಘಟನೆಗಳು ಕರೆ ನೀಡಿದ್ದ ಬಂದ್ ಶಾಂತಿಯುತವಾಗಿ ಮುಗಿದಿದೆ. ಮುಂಜಾಗ್ರತಾ ಕ್ರಮವಾಗಿ ಸೋರೆನ್ ಸರ್ಕಾರ ರಾಂಚಿಯಲ್ಲಿ ಕಫ್ರ್ಯೂ ವಿಧಿಸಿ, ಇಂಟರ್‌ನೆಟ್‌ ಸೇವೆ ಬಂದ್ ಮಾಡಿತ್ತು. ಮೊನ್ನೆಯ ಗಲಭೆಯಲ್ಲಿ ಪೊಲೀಸರ ಗುಂಡಿಗೆ ಇಬ್ಬರು ಬಲಿಯಾಗಿದ್ದು, 8 ಮಂದಿ ಐಸಿಯುವಿನಲ್ಲಿದ್ದಾರೆ. ಮೃತರ ಸಂಖ್ಯೆ ಕೂಡ ಹೆಚ್ಚಾಗುವ ಸಾಧ್ಯತೆ ಇದೆ. ಗಲಭೆ ಸಂಬಂಧ ಎರಡು ಎಫ್‍ಐಆರ್ ದಾಖಲಿಸಿರುವ ಪೊಲೀಸರು ಈವರೆಗೂ ಒಬ್ಬರನ್ನೂ ಬಂಧಿಸಿಲ್ಲ. ಉತ್ತರ ಪ್ರದೇಶದ ವಿವಿಧೆಡೆ 250ಕ್ಕೂ ಹೆಚ್ಚು ಮಂದಿ ಗಲಭೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಕ್ಷಮೆ ಕೇಳುವ ಅಗತ್ಯವಿಲ್ಲ, ನೂಪುರ್ ಶರ್ಮಾರನ್ನು ಕಾನೂನಿನ ಪ್ರಕಾರ ಬಂಧಿಸಿ: ಓವೈಸಿ

Advertisements

ಉತ್ತರ ಪ್ರದೇಶ, ದೆಹಲಿ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಜಾರ್ಖಂಡ್ ಸೇರಿ ಹಲವು ರಾಜ್ಯಗಳಲ್ಲಿ ಗಲಭೆಕೋರರ ವಿರುದ್ಧ ಕಠಿಣ ಸೆಕ್ಷನ್‍ಗಳ ಅನ್ವಯ ಕೇಸ್ ದಾಖಲಿಸಲಾಗಿದೆ. ಉತ್ತರ ಪ್ರದೇಶದ ಕಾನ್ಪುರ ಮತ್ತು ಸಹರಾನ್‍ಪುರದಲ್ಲಿ ಬುಲ್ಡೋಜರ್‌ಗೆ ಯೋಗಿ ಸರ್ಕಾರ ಕೆಲಸ ಕೊಟ್ಟಿದೆ. ಶವಿವಾರ ಕೂಡ ಗಲಭೆಗೆ ಸಾಕ್ಷಿಯಾಗಿದ್ದ ಪಶ್ಚಿಮ ಬಂಗಾಳದ ಹೌರಾದಲ್ಲಿ ನಾಳೆಯವರೆಗೂ ಇಂಟರ್‌ನೆಟ್‌ ಸೇವೆ ಬಂದ್ ಮಾಡಲಾಗಿದೆ. ಜೂನ್ 15ವರೆಗೂ ನಿಷೇಧಾಜ್ಞೆ ಜಾರಿಗೊಳಿಸಲಿದೆ. ಇದನ್ನೂ ಓದಿ: ಪ್ರವಾದಿ ವಿರುದ್ಧ ಅವಹೇಳನ – ಮುಸ್ಲಿಂ ಸಂಘಟನೆಗಳ ಪ್ರತಿಭಟನೆಗೆ ವಿಹೆಚ್‌ಪಿ ತೀವ್ರ ಖಂಡನೆ 

Advertisements
Advertisements
Exit mobile version