ನವದೆಹಲಿ: ಪ್ರವಾದಿ ಮೊಹಮ್ಮದ್ ಕುರಿತು ಅವಹೇಳನ ಮಾಡಿರುವ ನೂಪುರ್ ಶರ್ಮಾ ಅವರನ್ನು ಗಲ್ಲಿಗೇರಿಸಬೇಕು ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್(ಎಐಎಂಐಎಂ) ಸಂಸದ, ಮಾಜಿ ಪತ್ರಕರ್ತ ಇಮ್ತಿಯಾಜ್ ಜಲೀಲ್ ಹೇಳಿಕೆ ನೀಡಿದ್ದಾರೆ.
#WATCH Islam is a religion of peace, people are angry…Nupur Sharma should be hanged. If she’s allowed to let-go easily, then such things won’t stop. Law should be brought to take action against those who make such remarks against any religion, sect…: AIMIM MP Imtiaz Jaleel pic.twitter.com/jUKkmvDb4V
— ANI (@ANI) June 10, 2022
Advertisement
ನೂಪುರ್ ಶರ್ಮಾ ಅವರನ್ನು ಸುಮ್ಮನೆ ಹೋಗಲು ಬಿಟ್ಟರೆ ನಾವು ಪ್ರತಿಭಟಿಸುವುದು ಮುಂದುವರಿಸುತ್ತಲೇ ಇರುತ್ತೇವೆ. ಯಾವುದೇ ಧರ್ಮ ಅಥವಾ ಪಂಥದ ಬಗ್ಗೆ ಇಂತಹ ಟೀಕೆಗಳನ್ನು ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳುವ ಅಗತ್ಯವಿದೆ ಎಂದು ಆಗ್ರಹಿಸಿದರು. ಇದನ್ನೂ ಓದಿ: ಕಲ್ಲು ತೂರಿದವರಿಗೆ ಬುಲ್ಡೋಜರ್ ಶಾಕ್ ಕೊಟ್ಟ ಯೋಗಿ – ಅಕ್ರಮ ಕಟ್ಟಡಗಳು ಧ್ವಂಸ
Advertisement
Advertisement
ಮಾಜಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ಗೆ ಅವಹೇಳನ ಮಾಡಿರುವ ಹಿನ್ನೆಲೆಯಲ್ಲಿ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಜನರನ್ನು ಪ್ರಚೋದಿದುವ ಸಂದೇಶಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದರು. ಈ ಕಾರಣಕ್ಕೆ ಅವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಗುರುವಾರ ಸಂಸತ್ ಸ್ಟ್ರೀಟ್ ಪೊಲೀಸ್ ಠಾಣೆ ಹೊರಭಾಗ ಪ್ರತಿಭಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು 30 ಜನರನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ – ಇಂಟರ್ನೆಟ್ ಸ್ಥಗಿತ, 70 ಮಂದಿ ಅರೆಸ್ಟ್