ಹೈದರಾಬಾದ್: ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನ ಮಾಡಿದ ಆರೋಪದಲ್ಲಿ ಮಂಗಳವಾರ ಬಂಧನವಾಗಿದ್ದ ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರಿಗೆ ಕೆಲವೇ ಗಂಟೆಗಳಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯ ರಾಜಾ ಸಿಂಗ್ ಅವರ ಬಿಡುಗಡೆಗೆ ಆದೇಶಿಸಿದೆ.
ರಾಜಾ ಸಿಂಗ್ ಬಂಧನದ ಸಂದರ್ಭದಲ್ಲಿ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ(ಸಿಆರ್‌ಪಿಸಿ) ಸೆಕ್ಷನ್ 41 ಅನ್ನು ಅನುಸರಿಸಿಲ್ಲ ಎಂಬುದನ್ನು ಗಮನಿಸಿದ ಬಳಿಕ ನ್ಯಾಯಾಲಯ ಅವರನ್ನು ಬಿಡುಗಡೆ ಮಾಡಲು ಆದೇಶಿಸಿದೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ – ಸತ್ಯೇಂದ್ರ ಜೈನ್ ಪತ್ನಿಗೆ ಜಾಮೀನು ಮಂಜೂರು
Advertisement
Advertisement
ಸೋಮವಾರ, ರಾಜಾ ಸಿಂಗ್ ಇತ್ತೀಚೆಗೆ ನಗರದಲ್ಲಿ ಪ್ರದರ್ಶನ ನೀಡಿದ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮುನಾವರ್ ಫರುಕಿ ಅವರನ್ನು ಟೀಕಿಸುವ ವೀಡಿಯೊವನ್ನು ಬಿಡುಗಡೆ ಮಾಡಿದ್ದರು. ಸಿಂಗ್ ಅವರು ಅದರಲ್ಲಿ ಇಸ್ಲಾಂ ಧರ್ಮದ ವಿರುದ್ಧ ಸ್ಪಷ್ಟವಾಗಿ ಕೆಲವು ಕಾಮೆಂಟ್‌ಗಳನ್ನು ಮಾಡಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಗೋವು ಕಳ್ಳಸಾಗಣೆ ಪ್ರಕರಣ – ಅನುಬ್ರತಾ ಮೊಂಡಲ್‌ಗೆ ಜಾಮೀನು ನೀಡಿ, ಇಲ್ಲವೇ..: ನ್ಯಾಯಾಧೀಶರಿಗೆ ಬೆದರಿಕೆ ಪತ್ರ
Advertisement
ಈ ಹಿನ್ನೆಲೆ ರಾಜಾ ಸಿಂಗ್ ವಿರುದ್ಧ ಐಪಿಸಿಯ ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ, ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಕಾನೂನಿನ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.