Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿ: ಸಿದ್ದರಾಮಯ್ಯ

Bengaluru City

ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿ: ಸಿದ್ದರಾಮಯ್ಯ

Public TV
Last updated: September 15, 2025 5:25 pm
Public TV
Share
3 Min Read
Siddaramaiah 8
SHARE

ಬೆಂಗಳೂರು: ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ಪದೇ ನಿರ್ವಹಿಸಲೇಬೇಕು. ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದರು.

ವಿಧಾನಸೌಧದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ (Democracy Day) ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದಲ್ಲಿ ವಿವಿಧ ಜಾತಿಧರ್ಮಗಳ ವ್ಯವಸ್ಥೆಯಿದೆ. ಬಹುಸಂಸ್ಕೃತಿಯುಳ್ಳ ದೇಶದಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಕಾಪಾಡಲು ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ತರಲಾಗಿದೆ. ಜಾತಿವ್ಯವಸ್ಥೆಯಿಂದಾಗಿ ಅಸಮಾನತೆ ಉಂಟಾಗಿದೆ. ಆದ್ದರಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ಜಾರಿಗೊಂಡ ಸಂದರ್ಭದಲ್ಲಿ ವೈರುಧ್ಯತೆಯಿರುವ ಸಮಾಜಕ್ಕೆ ನಾವು ಕಾಲಿಡುತ್ತಿದ್ದು, ಸಾಮಾಜಿಕ, ರಾಜಕೀಯ, ಆರ್ಥಿಕ, ಶೈಕ್ಷಣಿಕ ಅಸಮಾನತೆಗಳಿವೆ. ದೇಶದಲ್ಲಿ ಜನರಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ವಾತಂತ್ರ‍್ಯ ಸಿಕ್ಕಾಗ ಮಾತ್ರ ಸ್ವಾತಂತ್ರ‍್ಯ ಯಶಸ್ವಿಯಾಗುತ್ತದೆ ಎಂದಿದ್ದರು.ಇದನ್ನೂ ಓದಿ: ವಿದ್ಯಾರ್ಥಿ, ಯುವಜನರಲ್ಲಿ ನಾಯಕತ್ವ ಗುಣ ಬೆಳೆಸಲು ‘ನನ್ನ ಮತ ನನ್ನ ಹಕ್ಕು’ ಕಾರ್ಯಕ್ರಮ: ಡಿಕೆಶಿ

12ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪಿಸಿ ಬಸವಣ್ಣನವರು ಪ್ರಜಾಪ್ರಭುತ್ವದ ಪರಿಕಲ್ಪನೆಗೆ ಜೀವ ತುಂಬಿದ್ದರು. ಅತ್ಯಂತ ತಳಸಮುದಾಯದವರಾದ ಅಲ್ಲಮ ಪ್ರಭು ಅವರನ್ನು ಅನುಭವ ಮಂಟಪದ ಅಧ್ಯಕ್ಷರಾಗಿಸಿದ್ದರು. ಇದರಲ್ಲಿ ಮಹಿಳೆಯರೂ ಸೇರಿದಂತೆ ಸಮಾಜದ ಎಲ್ಲ ವರ್ಗದವರೂ ಪ್ರಾತಿನಿಧ್ಯವನ್ನು ಹೊಂದಿದ್ದರು. ಯಾವ ಜಾಗದಲ್ಲಿ ಎಲ್ಲ ವರ್ಗದವರ ಅಭಿಪ್ರಾಯಕ್ಕೆ ಬೆಲೆ ದೊರಕುವುದೇ, ಅಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಸ್ಥಾಪಿತವಾಗಿದೆ ಎಂದು ಹೇಳಬಹುದು ಎಂದರು.

Siddaramaiah 1 2

ಇಂದಿನ ಪ್ರಜಾಪ್ರಭುತ್ವ ದಿನಾಚರಣೆಯ ಘೋಷವಾಕ್ಯ `ನನ್ನ ಮತ ನನ್ನ ಹಕ್ಕು’ ಈ ಶಕ್ತಿಯನ್ನು ದುರ್ಬಲಗೊಳಿಸುವ ಹುನ್ನಾರ ಪಟ್ಟಭದ್ರ ಹಿತಾಸಕ್ತಿಗಳಿಂದ ನಡೆದಿದೆ. ಶ್ರೀಮಂತರಿಗೆ ಅಧಿಕಾರ ದೊರೆಯುವ ಕಾಲವೊಂದಿತ್ತು. ಆದರೆ ಈಗ ಶ್ರೀಮಂತ, ಬಡವ, ಬಲ್ಲಿದ ಎಂಬ ಬೇಧವಿಲ್ಲದೇ, ಎಲ್ಲರಿಗೂ ಒಂದೇ ಮತದ ಅಧಿಕಾರ ನೀಡಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ ಎಂದರು. ಆದರೆ ಇದರ ದುರುಪಯೋಗಪಡಿಸಿಕೊಂಡು, ಸಂವಿಧಾನವನ್ನು ದುರ್ಬಲಗೊಳಿಸುವ ಕುತಂತ್ರ ನಡೆಯುತ್ತಿದ್ದು, ಇದನ್ನು ನಡೆಯದಂತೆ ನೋಡಿಕೊಳ್ಳಬೇಕಿದೆ. ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ಪದೇ ನಿರ್ವಹಿಸಲೇಬೇಕು. ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯವಾಗುತ್ತದೆ ಎಂದು ಹೇಳಿದರು.

ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ಪದೇ ನಿರ್ವಹಿಸಲೇಬೇಕು. ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ. ದೇಶದಲ್ಲಿ ವಿವಿಧ ಜಾತಿ, ಧರ್ಮಗಳ ವ್ಯವಸ್ಥೆಯಿದೆ. ಬಹುಸಂಸ್ಕೃತಿಯುಳ್ಳ ದೇಶದಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಕಾಪಾಡಲು ಪ್ರಜಾಪ್ರಭುತ್ವದ ವ್ಯವಸ್ಥೆ ಉಳಿಯಬೇಕಿದೆ.… pic.twitter.com/DTq449aWL2

— Siddaramaiah (@siddaramaiah) September 15, 2025

ನಮ್ಮ ಜಾತಿ ವ್ಯವಸ್ಥೆಗೆ ಚಲನೆಯಿಲ್ಲದೇ, ಸಮಾಜದಲ್ಲಿ ಆಳವಾಗಿ ಬೇರೂರಿದೆ. ಆರ್ಥಿಕ, ಸಾಮಾಜಿಕ ಸಮಾನತೆ ತರದೇ ಜಾತಿ ವ್ಯವಸ್ಥೆ ನಿರ್ಮೂಲಗೊಳಿಸಲು ಸಾಧ್ಯವಿಲ್ಲ. ಎಲ್ಲರಿಗೂ ಸಮಾನ ಅವಕಾಶಗಳು ದೊರೆತಾಗ ಮಾತ್ರ ಬದಲಾವಣೆ ಸಾಧ್ಯ. ಹಿಂದಿನಿಂದಿಲೂ ಮಹಿಳೆಯರು ಹಾಗೂ ಶೂದ್ರರು ಅಕ್ಷರ ಸಂಸ್ಕೃತಿ ಹಾಗೂ ಅವಕಾಶಗಳಿಂದ ವಂಚಿಕತರಾಗಿದ್ದ ಕಾರಣ ಅಸಮಾನತೆ ತಲೆದೋರಿದೆ. ಸಹಿಷ್ಣುತೆ ಹಾಗೂ ಸಹಬಾಳ್ವೆಯನ್ನು ಅಂಬೇಡ್ಕರ್ ಅವರು ಬೋಧಿಸಿದರು. ಸಮಾಜದಲ್ಲಿ ಬಹುಸಂಖ್ಯಾತರು ಎಚ್ಚರದಿಂದಿರಬೇಕು ಎಂದರು.ಇದನ್ನೂ ಓದಿ: ಪ್ರತಾಪ್ ಸಿಂಹ, ಬಿಜೆಪಿ ನಾಯಕರು ಮೊದಲು ಸಂವಿಧಾನ ಓದಿಕೊಳ್ಳಲಿ: ಡಿಕೆಶಿ

ಅಧಿಕಾರವನ್ನು ಉಳಿಸಿಕೊಳ್ಳಲು ಮತಗಳ್ಳತನದ ಹಾದಿಯನ್ನು ಹಿಡಿದಿದ್ದಾರೆ. ಆದ್ದರಿಂದ `ನನ್ನ ಮತ ನನ್ನ ಹಕ್ಕು’ ಎಂಬುದು ಇಂತಹ ಸನ್ನಿವೇಶದಲ್ಲಿ ಪ್ರಮುಖವಾಗಿದ್ದು, ಮತಗಳ ದುರುಪಯೋಗವಾಗಬಾರದು. ಮತಗಳ್ಳತನಕ್ಕೆ ಅವಕಾಶ ನೀಡಬೇಡಿ. ಪ್ರಜಾಪ್ರಭುತ್ವ ಉಳಿಸಿ, ಹಕ್ಕುಗಳನ್ನು ರಕ್ಷಿಸುವ ಪ್ರಮಾಣವನ್ನು ಸ್ವೀಕರಿಸಲಾಗಿದೆ. ಸಂವಿಧಾನ ನೀಡುವ ಹಕ್ಕು ಹಾಗೂ ಕರ್ತವ್ಯಗಳ ಪಾಲನೆಯಾಗಬೇಕು. ಪ್ರಜಾಪ್ರಭುತ್ವದಲ್ಲಿ ಎಲ್ಲಾ ಜಾತಿ, ಧರ್ಮವೂ ಸಮಾನವಾಗಿದೆ. ಇಂತಹ ಸಂವಿಧಾನಕ್ಕೆ ಧಕ್ಕೆ ತರುವ ಕೆಲಸವನ್ನು ಮನುವಾದಿಗಳು ಪ್ರಯತ್ನಿಸುತ್ತಿದ್ದಾರೆ. ಸ್ವಾತಂತ್ರ‍್ಯ ಬಂದಾಗಿನಿಂದಲೂ ಸಂವಿಧಾನ ವಿರೋಧಿಗಳು ಇದ್ದಾರೆ. ಅಸಮಾನತೆ ನಿವಾರಣೆಯಾದರೆ ಶೋಷಣೆ ಸಾಧ್ಯವಿಲ್ಲ ಎಂದು ತಿಳಿಸಿದರು.

Siddaramaiah 2 3

ಸಾಹಿತಿ ಬಾನು ಮುಷ್ತಾಕ್ ಅವರು ಅನ್ಯಧರ್ಮದವರೆಂದು ದಸರಾ ಉದ್ಘಾಟಿಸಬಾರದೆಂದು ವಿರೋಧ ವ್ಯಕ್ತಪಡಿಸಲಾಗುತ್ತಿದೆ. ಸಹಿಷ್ಣುತೆ ಹಾಗೂ ಸಹಬಾಳ್ವೆಯನ್ನು ಎಲ್ಲರೂ ರೂಢಿಸಿಕೊಳ್ಳಬೇಕು. ಜಾತಿಧರ್ಮ, ವರ್ಗವ್ಯವಸ್ಥೆಯನ್ನು ಮೀರಿ, ಸಮಾನತೆ ನೆಲೆಸಬೇಕೆಂದು ಸಂವಿಧಾನ ಸ್ಪಷ್ಟವಾಗಿ ಹೇಳಿದೆ. ಪಟ್ಟಭದ್ರ ಹಿತಾಸಕ್ತಿಗಳು, ಮತಾಂಧತೆಯ ವರ್ತನೆಯನ್ನು ಎಲ್ಲರೂ ಒಗ್ಗಟ್ಟಾಗಿ ಖಂಡಿಸಬೇಕು. ಚರ್ಚೆಯೇ ಪ್ರಜಾಪ್ರಭುತ್ವದ ಜೀವಾಳ. ಜನರನ್ನು ತಪ್ಪುದಾರಿಗೆಳೆಯುವ ಪ್ರಯತ್ನಗಳು ಖಂಡನೀಯ. ಆರ್ಥಿಕ ಅಸಮಾನತೆ ನಿವಾರಣೆಗಾಗಿ ಗ್ಯಾರಂಟಿ ಯೋಜನೆಗಳ ಮೂಲಕ 98,950 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದರು. ಸಂವಿಧಾನದ ಆಶಯಗಳ ಅರಿವು ಎಲ್ಲರೂ ಹೊಂದಬೇಕೆಂಬ ದೃಷ್ಟಿಯಿಂದ ಸರ್ಕಾರ, ಎಲ್ಲಾ ಶಾಲೆಗಳಲ್ಲಿ ಸಂವಿಧಾನ ಪೀಠಿಕೆಯನ್ನು ಓದಲು ಕ್ರಮ ಕೈಗೊಳ್ಳಲಾಗಿದೆ. ಸಂವಿಧಾನವನ್ನು ಪ್ರತಿಯೊಬ್ಬರು ಅರ್ಥೈಸಿಕೊಳ್ಳಬೇಕು ಎಂದು ವಿವರಿಸಿದರು.ಇದನ್ನೂ ಓದಿ: ರಿಲಯನ್ಸ್‌ ಫೌಂಡೇಶನ್‌ಗೆ ಬಿಗ್‌ ರಿಲೀಫ್‌ – ವನತಾರಾಗೆ ಸುಪ್ರೀಂನಿಂದ ಕ್ಲೀನ್‌ ಚಿಟ್‌

TAGGED:bengalurucongressDemocracy Daykarnatakasiddaramaiahಬೆಂಗಳೂರುಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

President Murmu In Siddaganga Mutt
Districts

ಸಾಧು ಪರಂಪರೆಯ ಆಧ್ಯಾತ್ಮಿಕತೆಯಲ್ಲಿ ಶಿವಕುಮಾರ ಶ್ರೀಗಳು ಮೇಲ್ಪಂಕ್ತಿಯಲ್ಲಿರುತ್ತಾರೆ – ರಾಷ್ಟ್ರಪತಿ ಮುರ್ಮು

Public TV
By Public TV
16 minutes ago
forest officer demanding bribe from farmer in aldur Chikkamagaluru video viral
Chikkamagaluru

ಖರ್ಚಿಗೇನಾದ್ರೂ ಕೊಡೋದಾದ್ರೆ ಹೆಚ್ಚು ಬರಿತೀನಿ ಇಲ್ದಿದ್ರೆ ಇಲ್ಲ – ರೈತನ ಬಳಿ ಲಂಚಕ್ಕೆ ಬೇಡಿಕೆಯಿಟ್ಟ ಅರಣ್ಯಾಧಿಕಾರಿ ವೀಡಿಯೋ ವೈರಲ್‌

Public TV
By Public TV
25 minutes ago
Haveri Bus Accident 1
Districts

ವೇಗವಾಗಿ ಬಂದು ಬೇಕರಿಗೆ ನುಗ್ಗಿದ ಬಸ್ – 2 ವರ್ಷದ ಮಗು ಸಾವು, ಎದೆ ಝಲ್ ಎನ್ನುವ ವಿಡಿಯೋ ವೈರಲ್

Public TV
By Public TV
35 minutes ago
Sunilkumar
Bagalkot

ಅಹಿಂದಕ್ಕೆ ಅನ್ಯಾಯ ಎಸಗಿದ ಕಾಂಗ್ರೆಸ್‌ ಸರ್ಕಾರವನ್ನು ತಿರಸ್ಕರಿಸಿ: ಸುನಿಲ್‌ ಕುಮಾರ್‌

Public TV
By Public TV
1 hour ago
Shreyas Iyer
Cricket

IPL 2026 | ಜಿಟಿ ವಿರುದ್ಧ ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್‌ಗೆ 12 ಲಕ್ಷ ದಂಡ

Public TV
By Public TV
1 hour ago
Digital Census India
31 Districts

Census 2027 | ಈ ಸುದ್ದಿ ಓದಿ ಮನೆಯಲ್ಲೇ ಕುಳಿತೇ 15 ನಿಮಿಷದ ಒಳಗಡೆ ನಿಮ್ಮ ವಿವರವನ್ನು ಭರ್ತಿ ಮಾಡಿ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?