ನವದೆಹಲಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಗಡಿ ವಿವಾದದ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡುವಂತೆ ಆಗ್ರಹಿಸಿ ಜಯಕರ್ನಾಟಕ ಜನಪರ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು. ಇಲ್ಲಿಯ ಜಂತರ್ ಮಂತರ್ ರಸ್ತೆಯಲ್ಲಿ ಕರ್ನಾಟಕದ ವಿವಿಧ ಭಾಗಗಳಿಂದ ಆಗಮಿಸಿದ ಐವತ್ತಕ್ಕೂ ಅಧಿಕ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದರು.
Advertisement
ಪ್ರತಿಭಟನೆಯ ಬಳಿಕ ಸಂಘಟನೆಯ ರಾಜ್ಯಾಧ್ಯಕ್ಷ ಆರ್. ಚಂದ್ರಪ್ಪ ನೇತೃತ್ವದಲ್ಲಿ ಗೃಹ ಇಲಾಖೆ ಮೂಲಕ ಸಚಿವ ಸಚಿವ ಅಮಿತ್ ಶಾ ಅವರಿಗೆ ಗಡಿ ಸಮಸ್ಯೆಗೆ ಸಂಬಂಧಿಸಿದ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ನೀಡಲಾಯಿತು. ಇದನ್ನೂ ಓದಿ: ಮದುವೆಯಾಗಲು ನಿರಾಕರಿಸಿದ್ದಕ್ಕೆ ವ್ಯಕ್ತಿಯ ಮನೆ, ಆಟೋಗೆ ಬೆಂಕಿ ಹಚ್ಚಿದ ಮಹಿಳೆ!
Advertisement
Advertisement
ಪ್ರತಿಭಟನೆ ಬಳಿಕ ಮಾತನಾಡಿದ ಆರ್. ಚಂದ್ರಪ್ಪ, ಕರ್ನಾಟಕ ಬಾವುಟವನ್ನು ಸುಟ್ಟ ಕಿಡಿಗೇಡಿಗಳ ವಿರುದ್ಧ ದೇಶದ್ರೋಹ ಕೇಸು ದಾಖಲಿಸಿ, ಫಾಸ್ಟ್ ಟ್ರ್ಯಾಕ್ ಕೋರ್ಟ್‍ಗಳ ಮೂಲಕ ವಿಚಾರಣೆ ನಡೆಸಿ ಜೈಲಿಗೆ ಕಳುಹಿಸಬೇಕು. ಗಡಿ ವಿವಾದವನ್ನು ಲಘುವಾಗಿ ಪರಿಗಣಿಸದೇ ಕೇಂದ್ರ ಗೃಹ ಇಲಾಖೆ ಕೂಡಲೇ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.
Advertisement
ಇದೇ ವೇಳೆ ಕರ್ನಾಟಕದ ಲೋಕಸಭೆ ಸಂಸದರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸಂಸತ್ ಅಧಿವೇಶನ ನಡೆಯುವ ಸಂದರ್ಭದಲ್ಲಿ ಈ ಘಟನೆಗಳು ನಡೆದರೂ ಯಾವೊಬ್ಬ ಸಂಸದರು ಧ್ವನಿ ಎತ್ತಿ ಮಾತನಾಡಿಲ್ಲ. ಇದೇ ರೀತಿ ಮುಂದುವರಿದರೆ ಸಂಸದರ ವಿರುದ್ಧವೂ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.