ಢಾಕಾ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂ ಸಮುದಾಯದ ಮೇಲಿನ ದಾಳಿಯನ್ನು ವಿರೋಧಿಸಿ ವಿವಿಧ ಸಂಘಟನೆಗಳು ದೇಶದಾದ್ಯಂತ ಪ್ರತಿಭಟನೆ ನಡೆಸಿದವು.
ಹಿಂದೂ ಸಮುದಾಯದ ಮೇಲಿನ ದಾಳಿ ಮತ್ತು ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂ ಶಿಕ್ಷಕರ ಹತ್ಯೆ ಮತ್ತು ಹಿಂದೂ ಮಹಿಳೆಯರ ಅತ್ಯಾಚಾರದ ವಿರುದ್ಧ ಚಿತ್ತಗಾಂಗ್‍ನಲ್ಲಿ ಪ್ರತಿಭಟನೆ ನಡೆಸಿದರು.
Advertisement
Advertisement
ಈ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಗೃಹ ಸಚಿವ ಅಸಾದುಝಮಾನ್ ಖಾನ್ ಅವರು ದೇಶದಲ್ಲಿ ಕೋಮು ಸೌಹಾರ್ದತೆಯನ್ನು ಕದಡುವ ಜನರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು. ಇದನ್ನೂ ಓದಿ: ಭೀಕರ ಅಪಘಾತದಲ್ಲಿ ಪೊಲೀಸ್ ಸಿಬ್ಬಂದಿ ದುರ್ಮರಣ- ಗೃಹ ಸಚಿವರು ಕಂಬನಿ
Advertisement
ನರೈಲ್‍ನ ಲೋಹಗರದ ಸಹಪಾರ ಪ್ರದೇಶದಲ್ಲಿ ಜುಲೈ 15ರಂದು ಹಿಂದೂ ಅಲ್ಪಸಂಖ್ಯಾತರ ಮನೆಗಳಿಗೆ ಬೆಂಕಿ ಹಚ್ಚಲಾಗಿತ್ತು. 18 ವರ್ಷದ ಯುವಕನೊಬ್ಬ ಫೇಸ್‍ಬುಕ್‍ನಲ್ಲಿ ತಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾನೆ ಎಂದು ಗುಂಪೊಂದುದ ಕ್ರೋದಗೊಂಡು ಬೆಂಕಿ ಹಚ್ಚಿತ್ತು. ಇದನ್ನೂ ಓದಿ: ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತ – ಐವರು ದುರ್ಮರಣ