InternationalLatestMain Post

ಅಲ್ಪಸಂಖ್ಯಾತರ ಮೇಲಿನ ದಾಳಿ ವಿರೋಧಿಸಿ ಬಾಂಗ್ಲಾದಲ್ಲಿ ಪ್ರತಿಭಟನೆ

Advertisements

ಢಾಕಾ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂ ಸಮುದಾಯದ ಮೇಲಿನ ದಾಳಿಯನ್ನು ವಿರೋಧಿಸಿ ವಿವಿಧ ಸಂಘಟನೆಗಳು ದೇಶದಾದ್ಯಂತ ಪ್ರತಿಭಟನೆ ನಡೆಸಿದವು.

ಹಿಂದೂ ಸಮುದಾಯದ ಮೇಲಿನ ದಾಳಿ ಮತ್ತು ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂ ಶಿಕ್ಷಕರ ಹತ್ಯೆ ಮತ್ತು ಹಿಂದೂ ಮಹಿಳೆಯರ ಅತ್ಯಾಚಾರದ ವಿರುದ್ಧ ಚಿತ್ತಗಾಂಗ್‍ನಲ್ಲಿ ಪ್ರತಿಭಟನೆ ನಡೆಸಿದರು.

ಈ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಗೃಹ ಸಚಿವ ಅಸಾದುಝಮಾನ್ ಖಾನ್ ಅವರು ದೇಶದಲ್ಲಿ ಕೋಮು ಸೌಹಾರ್ದತೆಯನ್ನು ಕದಡುವ ಜನರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು. ಇದನ್ನೂ ಓದಿ: ಭೀಕರ ಅಪಘಾತದಲ್ಲಿ ಪೊಲೀಸ್ ಸಿಬ್ಬಂದಿ ದುರ್ಮರಣ- ಗೃಹ ಸಚಿವರು ಕಂಬನಿ

ನರೈಲ್‍ನ ಲೋಹಗರದ ಸಹಪಾರ ಪ್ರದೇಶದಲ್ಲಿ ಜುಲೈ 15ರಂದು ಹಿಂದೂ ಅಲ್ಪಸಂಖ್ಯಾತರ ಮನೆಗಳಿಗೆ ಬೆಂಕಿ ಹಚ್ಚಲಾಗಿತ್ತು. 18 ವರ್ಷದ ಯುವಕನೊಬ್ಬ ಫೇಸ್‍ಬುಕ್‍ನಲ್ಲಿ ತಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾನೆ ಎಂದು ಗುಂಪೊಂದುದ ಕ್ರೋದಗೊಂಡು ಬೆಂಕಿ ಹಚ್ಚಿತ್ತು. ಇದನ್ನೂ ಓದಿ: ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತ – ಐವರು ದುರ್ಮರಣ

Live Tv

Leave a Reply

Your email address will not be published.

Back to top button