ಚಾಮರಾಜನಗರ: ಜಿಲ್ಲೆಯ ಕುದೇರು ಗ್ರಾಮದ ಚಾಮರಾಜನಗರ ಹಾಲು ಒಕ್ಕೂಟ(ಚಾಮುಲ್)ದಲ್ಲಿ ಅಕ್ರಮ ನೇಮಕಾತಿ ನಡೆದಿದೆ ಎಂದು ಆರೋಪಿಸಿ ಇಂದು ವಿವಿಧ ಪ್ರಗತಿ ಪರ ಸಂಘಟನೆಗಳಿಂದ ಸಂತೇಮರಹಳ್ಳಿ ಬಂದ್ ಮಾಡಲಾಗಿದೆ.
ಪ್ರತಿಭಟನೆ ನಿರತರ ಧರಣಿ ಐದನೇ ದಿನಕ್ಕೆ ಕಾಲಿಟ್ಟಿದ್ದು, ಅಕ್ರಮ ನೇಮಕಾತಿ ವಿರೋಧಿಸಿ ಇಂದು ಬಂದ್ ಮೂಲಕ ಆಡಳಿತ ಮಂಡಳಿಗೆ ಎಚ್ಚರಿಕೆ ನೀಡುವ ಕೆಲಸಕ್ಕೆ ಪ್ರತಿಭಟನಾಕಾರರು ಮುಂದಾಗಿದ್ದಾರೆ.
ಚಾಮರಾಜನಗರ ಹಾಲು ಒಕ್ಕೂಟಕ್ಕೆ ಇತ್ತೀಚೆಗಷ್ಟೆ 72 ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆದಿತ್ತು. ಈ ನೇಮಕಾತಿ ಪಾರದರ್ಶಕವಾಗಿ ನಡೆದಿಲ್ಲ. ಮತ್ತೊಮ್ಮೆ ನೇಮಕಾತಿ ಪ್ರಕ್ರಿಯೆ ನಡೆಯಬೇಕೆಂದು ಆಗ್ರಹಿಸಿ ಸಂತೇಮರಹಳ್ಳಿ ಬಂದ್ ಮಾಡಲಾಗಿದೆ. ಅರ್ಹ ಅಭ್ಯರ್ಥಿಗಳು ಕೆಲಸದಿಂದ ವಂಚಿತರಾಗಿದ್ದಾರೆ. ನ್ಯಾಯ ಸಿಗುವವರೆಗೂ ಹೋರಾಟ ಮಾಡ್ತೇವೆ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.
ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಅನ್ನೋ ಆರೋಪ ಕೇಳಿಬಂದಿದೆ. ಹೀಗಾಗಿ ಸಮಗ್ರ ತನಿಖೆಗೆ ಆಗ್ರಹಿಸಿ ಇಂದು ಸಂತೇಮರಹಳ್ಳಿ ಬಂದ್ ಮಾಡಲಾಗ್ತಿದೆ. ಭ್ರಷ್ಟಾಚಾರ ವಿರೋಧಿ ಆಂದೋಲನ ವೇದಿಕೆ, ಜಿಲ್ಲಾಭಿವೃದ್ದಿ ಹೋರಾಟ ಸಮಿತಿ, ಕರ್ನಾಟಕ ಪ್ರಾಂತ್ಯ ರೈತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆ, ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರಿಂದ ಧರಣಿ ಹಾಗೂ ಬಂದ್ ಮಾಡಲಾಗಿದೆ.