ಬೆಂಗಳೂರು: ಕಾಂಗ್ರೆಸ್ (Congress) ಪಕ್ಷ ನೀಡಿದ್ದ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ವಿಧಾನಸೌಧದ ಮುಂದೆ ಗಾಂಧಿ ಪ್ರತಿಮೆ ಬಳಿಯಲ್ಲಿ ಜುಲೈ 4ರಂದು ನಮ್ಮ ನೂರಾರು ಕಾರ್ಯಕರ್ತರು ಬೆಳಗ್ಗಿನಿಂದ ಸಂಜೆವರೆಗೆ ಒಂದು ದಿನ ಧರಣಿ ಸತ್ಯಾಗ್ರಹ ಮಾಡಲಿದ್ದಾರೆ. ಬಿಜೆಪಿ ಚುನಾಯಿತ ಪ್ರತಿನಿಧಿಗಳು ಸದನದ ಒಳಗೂ ಹೋರಾಟ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ (B.S Yediyurappa) ಅವರು ತಿಳಿಸಿದರು.
Advertisement
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲಿ (Bengaluru BJP Office) ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಮನೆಮನೆಗೆ ಹೋಗಿ ಸಿದ್ದರಾಮಯ್ಯ, ಶಿವಕುಮಾರ್ ಅವರು ಸಹಿ ಮಾಡಿ ಕೊಟ್ಟ ಗ್ಯಾರಂಟಿ ಕಾರ್ಡಿನ ಅಂಶಗಳನ್ನು ಚಾಚೂ ತಪ್ಪದೆ ಅನುಷ್ಠಾನಕ್ಕೆ ತರಲು ಅವರು ಆಗ್ರಹಿಸಿದರು. ಈ ಕುರಿತು ಪಕ್ಷದ ಮುಖಂಡರ ಸಭೆಯಲ್ಲಿ ಚರ್ಚಿಸಿದ್ದಾಗಿ ವಿವರಿಸಿದರು.
Advertisement
ಅವರು ಭರವಸೆ ಕೊಟ್ಟಂತೆ 10 ಕೆಜಿ ಅಕ್ಕಿ ಕೊಡಬೇಕು, ಎಲ್ಲ ಪದವೀಧರ ನಿರುದ್ಯೋಗಿಗಳಿಗೆ 3 ಸಾವಿರ ಭತ್ಯೆ, ಡಿಪ್ಲೊಮಾ ಮಾಡಿ ನಿರುದ್ಯೋಗಿ ಆಗಿರುವವರಿಗೆ 1500 ರೂ. ಕೊಡಬೇಕು, 200 ಯೂನಿಟ್ ಕರೆಂಟ್ ಕೊಡಲೇಬೇಕು, 80 ಯೂನಿಟ್ ಎಂಬ ಕಂಡಿಷನ್ ರದ್ದು ಮಾಡಬೇಕೆಂದು ಆಗ್ರಹಿಸಿದರು. ಇದನ್ನೂ ಓದಿ: 3 ವಲಯ, 3 ಪ್ರತ್ಯೇಕ ಸಭೆ – ಲೋಕಸಭಾ ಚುನಾವಣೆಗೆ ತಯಾರಾದ ಬಿಜೆಪಿ
Advertisement
Advertisement
ಅವರೇ ಭರವಸೆ ನೀಡಿದಂತೆ ಎಲ್ಲ ಮಹಿಳೆಯರಿಗೆ 2 ಸಾವಿರ ರೂ. ಕೊಡಬೇಕು. ಕರೆಂಟ್ ಬಿಲ್ (Electricity Bill) ತೀವ್ರವಾಗಿ ಹೆಚ್ಚಾಗಿದ್ದು, ದರ ಏರಿಕೆಯನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸುವುದಾಗಿ ತಿಳಿಸಿದರು. ಜುಲೈ 4ರಂದು ಸದನದ ಒಳಗೆ ಮತ್ತು ಹೊರಗಡೆ ನಾನು ಮತ್ತು ಪಕ್ಷದ ಪ್ರಮುಖರು ಧರಣಿ ನಡೆಸಲಿದ್ದೇವೆ ಎಂದು ವಿವರಿಸಿದರು.
Web Stories