ನವದೆಹಲಿ: ಬೆಲೆ ಏರಿಕೆ, ಜಿಎಸ್‍ಟಿ ಸೇರಿದಂತೆ ಹಲವಾರು ವಿಷಯಗಳ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪಾರ್ಲಿಮೆಂಟ್‍ನಿಂದ ವಿಜಯ್‍ಚೌಕ್‍ವರೆಗೆ ರಾಹುಲ್ ಗಾಂಧಿ ನೇತೃತ್ವದಲ್ಲಿ ರ‍್ಯಾಲಿ ಹಮ್ಮಿಕೊಳ್ಳಲಾಗಿತ್ತು. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ರಾಷ್ಟ್ರದಲ್ಲಿ ರಾಜಧಾನಿಯಲ್ಲಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಸುಮಾರು 30 ನಿಮಿಷಗಳ ಕಾಲ ನೂಕುನುಗ್ಗಲು ಉಂಟಾಗಿದೆ.
Advertisement
Advertisement
ಘಟನೆಗೆ ಸಂಬಂಧಿಸಿ ಪೊಲೀಸರು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೂ ಮುನ್ನ ಮಾತನಾಡಿದ ಅವರು, ಭಾರತ ಪೊಲೀಸ್ ರಾಷ್ಟ್ರ. ಅದಕ್ಕೆ ಮೋದಿ ಒಬ್ಬ ರಾಜ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬಾಯಿ ಬಡಿದುಕೊಂಡು ಸಾಕಾಗಿ ಕಾಂಗ್ರೆಸ್ಸಿಗರು ಇಂದು ಮೌನಕ್ಕೆ ಶರಣಾಗಿದ್ದಾರೆ: ಸುಧಾಕರ್ ವ್ಯಂಗ್ಯ
Advertisement
Advertisement
ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿ ಇಂದು ಸೋನಿಯಾ ಗಾಂಧಿಗೆ ಇಡಿ ವಿಚಾರಣೆ ನಡೆಸುತ್ತಿದೆ. ಸತತ 2 ಗಂಟೆಗಳಿಂದ ಸೋನಿಯಾ ಗಾಂಧಿ ಅವರನ್ನು ವಿಚಾರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಷ್ಟ್ರಾದ್ಯಂತ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಇದನ್ನೂ ಓದಿ: ಅಮೆರಿಕದಲ್ಲಿ ಆರ್ಥಿಕ ಹಿಂಜರಿತ? – ಉತ್ತರ ಕೊಟ್ಟ ಬೈಡನ್