LatestMain PostNational

ಮಾಲ್‍ನಲ್ಲಿ ನಮಾಜ್- ಭಜರಂಗದಳದಿಂದ ಹನುಮಾನ್ ಚಾಲೀಸಾ ಪಠಿಸಿ ಪ್ರತಿಭಟನೆ

ಭೋಪಾಲ್: ಮಾಲ್‍ವೊಂದರಲ್ಲಿ ಕೆಲವು ಸಿಬ್ಬಂದಿ ನಮಾಜ್ ಮಾಡುವುದನ್ನು ವಿರೋಧಿಸಿ ಭಜರಂಗದಳದ ಗುಂಪೊಂದು ಹನುಮಾನ್ ಚಾಲೀಸಾವನ್ನು ಪಠಿಸಿ ಪ್ರತಿಭಟನೆ ನಡೆಸಿದ ಘಟನೆ ಭೋಪಾಲ್‍ನಲ್ಲಿ ನಡೆದಿದೆ.

ಭೋಪಾಲ್‍ನ ಡಿಬಿ ಮಾಲ್‌ನಲ್ಲಿ ಈ ಘಟನೆ ನಡೆಸಿದ್ದು, ಹನುಮಾನ್‌ ಚಾಲೀಸಾ ಪಠಣ ಹಾಗೂ ನಮಾಜ್‌ ಮಾಡುತ್ತಿರುವ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಈ ವೀಡಿಯೋದಲ್ಲಿ ಭಜರಂಗದಳದ ಕಾರ್ಯಕರ್ತರು ಮೊದಲು ಮುಸ್ಲಿಂ ಸಿಬ್ಬಂದಿ ಪ್ರಾರ್ಥನೆ ಸಲ್ಲಿಸುತ್ತಿರುವ ಜಾಗಕ್ಕೆ ಹೋಗುತ್ತಾರೆ. ಅಲ್ಲಿ ಮುಸ್ಲಿಮರು ಪ್ರಾರ್ಥನೆ ಸಲ್ಲಿಸುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸಿ, ಈ ಮಾಲ್‍ನಲ್ಲಿ ನಮಾಜ್‍ನ್ನು ಗುಪ್ತವಾಗಿ ಮಾಡುತ್ತಿದ್ದಾರೆ ಎಂದು ಭಜರಂಗದಳ ಕಾರ್ಯಕರ್ತರು ಆರೋಪಿಸಿದರು. ಇದನ್ನೂ ಓದಿ: Hijab Row: ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ವಿಚಾರಣೆ

ಇದಾದ ಬಳಿಕ ಭಜರಂಗದಳ ಕಾರ್ಯಕರ್ತರು ಎಸ್ಕಲೇಟರ್ ಬಳಿ ನೆಲದ ಮೇಲೆ ಕುಳಿತು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿದರು. ಈ ವೇಳೆ ಮಾಲ್‌ನ ಆಡಳಿತ ಮಂಡಳಿ ಹಾಗೂ ಭಜರಂಗದಳ ಕಾರ್ಯಕರ್ತರ ನಡುವೆ ವಾಗ್ವಾದಗಳು ನಡೆಯುತ್ತವೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸರು ಮಾಲ್‍ಗೆ ತೆರಳಿ ಸೌಹಾರ್ದಯುತವಾಗಿ ಸಮಸ್ಯೆಯನ್ನು ಬಗೆಹರಿಸಿದರು. ಜೊತೆಗೆ ಈ ಘಟನೆ ಸಂಬಂಧಿಸಿ ಯಾವುದೇ ಧಾರ್ಮಿಕ ಚಟುವಟಿಕೆಗೆ ಅವಕಾಶ ನೀಡದಿರಲು ಮಾಲ್ ಆಡಳಿತ ಮಂಡಳಿ ನಿರ್ಧರಿಸಿದೆ ಎಂದು ತಿಳಿಸಿದರು. ಇದನ್ನೂ ಓದಿ: ಅಕ್ಟೋಬರ್ 17ಕ್ಕೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

Live Tv

Leave a Reply

Your email address will not be published.

Back to top button