ಬೆಳಗಾವಿ: ಕಬ್ಬಿನ ಬಾಕಿ ಪಾವತಿ, ದರ ನಿಗದಿಗೆ ಆಗ್ರಹಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ರೈತರಿಂದ ಅಹೋರಾತ್ರಿ ಧರಣಿ ತೀವ್ರವಾಗಿದೆ.
ರೈತರ ಸಮಸ್ಯೆಗಳಿಗೆ ಜಿಲ್ಲಾಡಳಿತ ಸರಿಯಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಹೋರಾಟ ತೀವ್ರವಾಗಿದೆ. ಅಲ್ಲದೇ ಉತ್ತರ ಕರ್ನಾಟಕ ಭಾಗದ ಎಲ್ಲಾ ರೈತರನ್ನು ಸೇರಿಸಿಕೊಂಡು ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ.
Advertisement
Advertisement
ಕಾರ್ಖಾನೆಗಳಿಂದ ಕಬ್ಬಿನ ಬಾಕಿ ಕೊಡಿಸುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ತಡರಾತ್ರಿ ಸಕ್ಕರೆ ಕಾರ್ಖಾನೆಗೆ ಕಬ್ಬು ತುಂಬಿಕೊಂಡು ಹೋಗ್ತಿದ್ದ ಟ್ರ್ಯಾಕ್ಟ ರನ್ನೂ ಕೂಡ ರೈತರು ತಡೆದಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕಬ್ಬಿನ ಬಾಕಿ ಪಾವತಿಗೆ ಆಗ್ರಹಿಸಿ ಇಂದು ಬಾಗಲಕೋಟೆಯ ಮುಧೋಳ ಬಂದ್‍ಗೆ ಕರೆ ನೀಡಲಾಗಿದೆ.
Advertisement
Advertisement
ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ರೈತರೊಬ್ಬರು ಮಾತನಾಡಿ, ಯಾವುದೂ ಗೊತ್ತಿಲ್ಲದ ಒಬ್ಬ ಜಿಲ್ಲಾಧಿಕಾರಿಯನ್ನು ಇಲ್ಲಿ ತಂದು ಹಾಕಿದ್ದಾರೆ. ಈ ಹಿಂದೆ ಸುವರ್ಣ ಸೌಧದಲ್ಲಿಯೂ ಪ್ರತಿಭಟನೆ ನಡೆಸಿದ್ದೆವು. ಈ ವೇಳೆ ಒಂದು ವಾರದೊಳಗೆ ಬಾಗಲಕೋಟೆ, ಬೆಳಗಾವಿಯ ಕಬ್ಬು ಬೆಳೆಗಾರರಿಗೆ ಬೆಲೆ ನಿಗದಿ ಮಾಡುತ್ತೇನೆ ಅಂತ ಭರವಸೆ ಕೊಟ್ಟಿದ್ದರು. ಆದ್ರೆ ಇದೀಗ ಸಿಎಂ ಭರವಸೆ ನೀಡಿ 2 ತಿಂಗಳಾದ್ರೂ ಎಲ್ಲಿ ಯಾವ ರೈತರಿಗೆ ತೊಂದ್ರೆಯಾಗುತ್ತದೆ ಎಂಬುದನ್ನು ನೋಡಿಲ್ಲ. ಹೀಗಾಗಿ ದಯವಿಟ್ಟು ರೈತರ ಕಷ್ಟವನ್ನು ಅರ್ಥ ಮಾಡಿಕೊಳ್ಳಿ ಅಂತ ಮನವಿ ಮಾಡಿಕೊಂಡರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews