ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ (Valmiki Corporation scam) ಹಾಗೂ ಮುಡಾ ಅವ್ಯವಹಾರ (Mysuru Muda) ಖಂಡಿಸಿ ಸಿಎಂ ರಾಜೀನಾಮೆಗೆ ಆಗ್ರಹಿಸಿ ಅವರ ಮನೆಗೆ ಮುತ್ತಿಗೆ ಹಾಕಲು ಹೊರಟಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y Vijayendra) ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನೇತೃತ್ವದಲ್ಲಿ ಕಾಲ್ನಡಿಗೆ ಮೂಲಕ ಕುಮಾರಕೃಪಾ ವಸತಿ ಗೃಹದಿಂದ ಹೊರಟು ಸಿಎಂ ಸಿದ್ದರಾಮಯ್ಯ (Siddaramaiah) ಅವರ ಮನೆಗೆ ಮುತ್ತಿಗೆ ಹಾಕಲು ಸಿದ್ಧತೆ ನಡೆಸಲಾಗಿತ್ತು. ಅದರಂತೆ, ಶಾಸಕರು, ಮೇಲ್ಮನೆ ಸದಸ್ಯರು, ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸೇರಿದ್ದರು. ವಿಜಯೇಂದ್ರ, ಆರ್.ಅಶೋಕ್ ಅವರ ನೇತೃತ್ವದಲ್ಲಿ ಶಾಸಕರು ಹೊರಬರುತ್ತಿದ್ದಂತೆ ತಡೆದ ಪೆÇಲೀಸರು ಎಲ್ಲರನ್ನೂ ವಶಕ್ಕೆ ಪಡೆದಿದ್ದರು. ಬಳಿಕ ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ: ವೈಜಾಗ್ ಉಕ್ಕು ಕಾರ್ಖಾನೆ ಪುನಶ್ಚೇತನ ಉನ್ನತ ಅಧಿಕಾರಿಗಳೊಂದಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಭೆ
Advertisement
Advertisement
ಈ ವೇಳೆ ಬಿಜೆಪಿ ಮುಖಂಡರು ಮತ್ತು ಪೊಲೀಸ್ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಶಾಸಕರು `ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ’ ಕೂಗಿದರು. ಇದೇ ವೇಳೆ ಆರ್.ಅಶೋಕ್ ಅವರು, `ಈ ಸರ್ಕಾರದ ದೌರ್ಜನ್ಯವನ್ನು ಖಂಡಿಸುತ್ತೇನೆ. ಪ್ರತಿಭಟನೆಗೆ ಅವಕಾಶ ಕೊಡುತ್ತಿಲ್ಲ’ ಎಂದು ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಿಬಿಐ ಬಂಧನ- ಜಾಮೀನು ಕೋರಿ ಕೇಜ್ರಿವಾಲ್ ಅರ್ಜಿ