ಬೆಂಗಳೂರು: ಉಪಚುನಾವಣೆಗೆ (By Election) ಸಮಸ್ಯೆ ಮಾಡುವುದಕ್ಕೆ ಬಿಜೆಪಿ ಅವರು ವಕ್ಫ್ ವಿಚಾರದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ (CM Siddaramaiah) ವಾಗ್ದಾಳಿ ನಡೆಸಿದ್ದಾರೆ.
ವಕ್ಫ್ ವಿಚಾರವಾಗಿ ಬಿಜೆಪಿ (BJP) ಪ್ರತಿಭಟನೆ ಮಾಡುತ್ತಿರುವ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಅವರು ರಾಜಕೀಯ ಮಾಡುವುದಕ್ಕೆ ಹೊರಟಿದ್ದಾರೆ. ಈಗ ಯಾವುದೇ ಸಮಸ್ಯೆ ಇಲ್ಲ. ಹೀಗಾಗಿ ಬಿಜೆಪಿ ಅವರು ಸಮಸ್ಯೆ ಮಾಡುವುದಕ್ಕೆ ಹೊರಟಿದ್ದಾರೆ. ಉಪಚುನಾವಣೆ ಇರುವುದಕ್ಕಾಗಿ ಹೀಗೆಲ್ಲ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಜೈಲಿನಿಂದ ರಿಲೀಸ್
ವಕ್ಫ್ ಬೋರ್ಡ್‌ನಿಂದ ರೈತರಿಗೆ ನೋಟಿಸ್ ನೀಡಿರುವ ವಿಚಾರವಾಗಿ ಸಂಸದ ತೇಜಸ್ವಿ ಸೂರ್ಯರಿಂದ ಜೆಪಿಸಿಗೆ ಪತ್ರ ಬರೆದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ನಾನು ಈ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ. ಬಿಜೆಪಿ ಅವರು ಈ ವಿಚಾರವಾಗಿ ರಾಜಕೀಯ ಮಾಡುತ್ತಿದ್ದಾರೆ. ರೈತರ ಜಮೀನು ಯಾವುದೇ ಕಾರಣಕ್ಕೂ ವಾಪಸ್ ಪಡೆಯುವುದಿಲ್ಲ. ಯಾವುದೇ ರೈತರನ್ನ ಒಕ್ಕಲೆಬ್ಬಿಸೋದಿಲ್ಲ. ಈಗ ಯಾರ ಜಮೀನು ರೈತರ ಬಳಿ ಇದೆಯೋ ಆ ಜಮೀನು ರೈತರ ಬಳಿಯೇ ಉಳಿಯಲಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಒಳಮೀಸಲಾತಿ ಜಾರಿಗೆ ನಾವು ವಿರುದ್ಧವಾಗಿಲ್ಲ, ಸೋಷಿಯಲ್ ಮೀಡಿಯಾದಲ್ಲಿ ಕಿಡಿಗೇಡಿಗಳ ಮಾತು ಸತ್ಯಕ್ಕೆ ದೂರ: ಪರಮೇಶ್ವರ್