ಹಾಸನ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರ ಸಾವಿನ ಬಗ್ಗೆ ಮಾತನಾಡಿದ್ದಾರೆ ಎನ್ನಲಾದ ಶಾಸಕ ಪ್ರೀತಂಗೌಡ ಮನೆ ಮೇಲೆ ಕಲ್ಲು ತೂರಾಟ ನಡೆದಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಇದನ್ನು ಓದಿ: ಹಾಸನ ಬಿಜೆಪಿ ಕಾರ್ಯಕರ್ತನ ಮೇಲೆ ಕಲ್ಲೆಸೆತ ಪ್ರಕರಣ – 8 ಮಂದಿ ವಿರುದ್ಧ ಎಫ್‍ಐಆರ್ ದಾಖಲು
ಜೆಡಿಎಸ್ ದೌರ್ಜನ್ಯ ನಡೆಸಿದೆ ಎಂದು ಆರೋಪಿಸಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಅಲ್ಲದೇ ಬೆಳಗ್ಗೆ 10.30ಕ್ಕೆ ರಾಜ್ಯಪಾಲರನ್ನು ಭೇಟಿಯಾಗಿ ದೂರು ನೀಡಲು ಸಹ ಬಿಎಸ್‍ವೈ ಮುಂದಾಗಿದ್ದಾರೆ. ಈ ಸಂಬಂಧ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೂ ವರದಿ ನೀಡಲು ಬಿಎಸ್‍ವೈ ಚಿಂತನೆ ನಡೆಸಿದ್ದಾರೆ. ಇದನ್ನು ಓದಿ: ಮುಖ್ಯಮಂತ್ರಿಗಳೇ ಗೂಂಡಾಗಳನ್ನ ನಮ್ಮ ಮನೆಗೆ ಕಳುಹಿಸಿದ್ದು: ಪ್ರೀತಂ ಗೌಡ
Advertisement
Advertisement
ಬುಧವಾರ ನಡೆದ ಘಟನೆಯಲ್ಲಿ ಓರ್ವ ಬೆಂಬಲಿಗ ಗಂಭೀರವಾಗಿ ಗಾಯಗೊಂಡಿದ್ದರು. ಇದನ್ನೇ ಬಿಜೆಪಿ ಪ್ರಬಲ ಅಸ್ತ್ರವಾಗಿಸಿಕೊಳ್ಳುವ ಮುನ್ಸೂಚನೆ ನೀಡಿದೆ. ಜಿಲ್ಲಾ ತಾಲೂಕು ಮಟ್ಟಗಳಲ್ಲಿಯೂ ಬೃಹತ್ ಪ್ರತಿಭಟನೆಗೆ ತೀರ್ಮಾನಿಸಿದೆ. ಘರ್ಷಣೆ ಸಂಬಂಧ ಜಿಲ್ಲಾ ಪಂಚಾಯತ್ ಸದಸ್ಯ ಸೇರಿದಂತೆ ಜೆಡಿಎಸ್‍ನ 8 ಕಾರ್ಯಕರ್ತರು ಹಾಗೂ ಬಿಜೆಪಿಯ ಐವರ ಮೇಲೆ ನಗರದ ಬಡಾವಣೆ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಇದನ್ನು ಓದಿ: ದೇವೇಗೌಡರ ವಿಕೆಟ್ ಉರುಳುತ್ತೆ ಎಂದ ಪ್ರೀತಮ್ ಗೌಡ ವಿರುದ್ಧ ಪ್ರತಿಭಟನೆ
Advertisement
https://www.youtube.com/watch?v=04N1B91E9yk
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv