ಬೆಂಗಳೂರು: ದೇಶದೇಲ್ಲಡೆ ಮುಸ್ಲಿಂ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆ ಬೆಂಗಳೂರು ಪೊಲೀಸರು ಅಲರ್ಟ್ ಆಗಿದ್ದಾರೆ.
ನಗರದ ಸೂಕ್ಷ್ಮಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದೆ. ಸ್ಥಳೀಯ ಪೊಲೀಸರ ಜೊತೆಗೆ ಕೆಎಸ್ಆರ್ಪಿ ತುಕಡಿಗಳ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಹಿಜಬ್ ಸಂಘರ್ಷ ಮಧ್ಯೆ ಸಾವರ್ಕರ್ ಫೋಟೋ ವಿವಾದ – ವಿದ್ಯಾರ್ಥಿಗಳ ಮೇಲೆ ಹಲ್ಲೆ
ನಗರದ ಯಶವಂತಪುರ ಸರ್ಕಲ್, ಗೋರಿಪಾಳ್ಯ, ಪಾದರಾಯನಪುರ, ಅಜಾದ್ ನಗರ, ಶಿವಾಜಿ ನಗರ, ನಿಲಸಂದ್ರ, ಬಕ್ಷಿ ಗಾರ್ಡನ್, ಕೆ.ಆರ್ ಮಾರ್ಕೆಟ್ ಸೇರಿದಂತೆ ಹಲವು ಕಡೆ ಬೀಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.
ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಪೊಲೀಸ್ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.