ಬೆಂಗಳೂರು: ಕಮಲ್ ಹಾಸನ್ (Kamal Haasan) ಕನ್ನಡ ವಿವಾದಕ್ಕೆ ಸಂಬಂಧಿಸಿದಂತೆ ಇದೀಗ ಆಕ್ರೋಶದ ಕಟ್ಟೆಯೊಡೆದಿದೆ. ನಟ ಕ್ಷಮೆ ಕೇಳಲ್ಲ ಎಂದು ಹೇಳಿದ ಬೆನ್ನಲ್ಲೇ ಅವರ ಭಾವಚಿತ್ರದ ಬ್ಯಾನರ್‌ಗೆ ಬೆಂಕಿ ಹಚ್ಚಿ ಕನ್ನಡಾಭಿಮಾನಿ ಪ್ರತಿಭಟಿಸಿದ್ದಾರೆ.
ನಗರದ ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪವಿತ್ರ ಪ್ಯಾರಡೈಸ್ ಸಿಗ್ನಲ್ ಬಳಿ ಈ ಘಟನೆ ನಡೆದಿದ್ದು, ರಾತ್ರೋ ರಾತ್ರಿ ಓರ್ವ ಕನ್ನಡಾಭಿಮಾನಿ ಕಮಲ್ ಹಾಸನ್ ಹೇಳಿಕೆಗೆ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಜೊತೆಗೆ ಕಮಲ್ ಹಾಸನ್ ಅವರ ಭಾವಚಿತ್ರದ ಬ್ಯಾನರ್‌ಗೆ ಬೆಂಕಿ ಹಚ್ಚಿ ಕಿಡಿಕಾರಿದ್ದಾರೆ.ಇದನ್ನೂ ಓದಿ: ಮತ್ತೆ ಕಮಲ್ ಹಾಸನ್ ಮೊಂಡಾಟ – ಕ್ಷಮೆ ಕೇಳಲ್ಲ ಎಂದ ನಟ
ಫೋಟೋಗೆ ಬೆಂಕಿ ಹಚ್ಚಿದ ಬೆನ್ನಲ್ಲೇ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ನೀರು ಹಾಕಿ ಬ್ಯಾನರ್‌ನ್ನು ರಸ್ತೆಯಿಂದ ತೆಗೆದು ಹಾಕಿದ್ದಾರೆ.
ಏನಿದು ವಿವಾದ?
ಮೇ 27ರಂದು `ಥಗ್ ಲೈಫ್’ ಸಿನಿಮಾದ ಪ್ರಚಾರಕ್ಕಾಗಿ ಚಿತ್ರತಂಡ ಬೆಂಗಳೂರಿಗೆ ಆಗಮಿಸಿತ್ತು. ಸಿನಿಮಾದ ನಾಯಕ ಕಾಲಿವುಡ್ ನಟ ಕಮಲ್ ಹಾಸನ್ ಅವರು ಕೂಡ ಆಗಮಿಸಿದ್ದರು. ಈ ವೇಳೆ ಕಮಲ್ ಹಾಸನ್ `ತಮಿಳಿನಿಂದ ಕನ್ನಡ ಹುಟ್ಟಿದ್ದು’ ಎಂದು ಹೇಳಿಕೆ ನೀಡುವ ಮೂಲಕ ವಿವಾದ ಹುಟ್ಟುಹಾಕಿದ್ದರು.ಇದನ್ನೂ ಓದಿ: ಕನ್ನಡದ ಬಗ್ಗೆ ಕಮಲ್ ಹಾಸನ್‌ಗೆ ಪ್ರೀತಿಯಿದೆ, ಯಾಕೆ ಅದನ್ನ ದೊಡ್ಡ ವಿಷಯ ಮಾಡ್ತೀರಾ?: ಶಿವಣ್ಣ