ಕೋಲಾರ: ರಾಜ್ಯದಲ್ಲಿ ಹಿಜಾಬ್ ಹಾಗೂ ಕೇಸರಿ ವಿವಾದ ನಡೆಯುತ್ತಿದರೆ ಇಲ್ಲೊಂದು ಶಾಲೆಯ ಮಕ್ಕಳು ಶೌಚಾಲಯ ಕಟ್ಟಡ ನಿರ್ಮಾಣ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.
ನಗರದ ಬಂಗಾರಪೇಟೆ ತಾಲ್ಲೂಕು ಚತ್ತಗುಟ್ಟಹಳ್ಳಿ ಶಾಲೆಯ ಮಕ್ಕಳು ಶೌಚಾಲಯಕ್ಕಾಗಿ ಪ್ರತಿಭಟನೆ ಮಾಡಿದ್ದಾರೆ. ಗಡಿ ಭಾಗದ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯ ಮಕ್ಕಳು ಶಾಲೆಗೆ ಹಾಜರಾಗುತ್ತಿದ್ದು, ಮಕ್ಕಳಿಗೆ ಶಾಲೆಯಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನೂ ಓದಿ: ಕೇಸರಿ ಶಾಲು, ಹಿಜಬ್ ಧರಿಸುವಂತಿಲ್ಲ : ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಏನಿದೆ?
ಹಲವು ವರ್ಷಗಳಿಂದ ಶಾಲೆಯಲ್ಲಿ ಶೌಚಾಲಯ ಕಟ್ಟಡ ನಿರ್ಮಾಣ ಕಾಮಗಾರಿ ಶುರುವಾಗಿದೆ. ಆದರೆ ಶಾಲೆ ಶುರುವಾಗಿ 2 ವರ್ಷ ಕಳೆದರೂ ಕಾಮಗಾರಿ ಪೂರ್ಣವಾಗದ ಹಿನ್ನೆಲೆ ವಿದ್ಯಾರ್ಥಿಗಳು ಇಂದು ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಆದಷ್ಟೂ ಬೇಗ ಶೌಚಾಲಯ ನಿರ್ಮಾಣ ಮಾಡಿಕೊಂಡುವಂತೆ ಒತ್ತಾಯಿಸಿದ್ದಾರೆ.