ರಾಯಚೂರು: ನಗರದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು ಪ್ರಕರಣದ ಹಿನ್ನೆಲೆಯಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ ರಾಯಚೂರಿನಲ್ಲಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ನಗರದ ಮಾಣಿಕ ಪ್ರಭು ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆದಿದ್ದು, ಪ್ರತಿಭಟನೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು. ವಿದ್ಯಾರ್ಥಿನಿ ಶವ ದೊರೆತ ಸ್ಥಳ ದೇವಸ್ಥಾನದ ಹಿಂಭಾಗದಿಂದ ಆರಂಭವಾದ ಮೆರವಣಿಗೆಯಲ್ಲಿ ವಿವಿಧ ಸ್ವಾಮಿಜಿಗಳು ಸಹ ಭಾಗವಹಿಸಿದ್ದಾರೆ. ಸಿನಿಮಾ ನಟಿ ಹರ್ಷಿಕಾ ಪೂಣಚ್ಚ, ನಟ ಭುವನ್ ಭಾಗವಹಿಸಿ ಸಾಥ್ ನೀಡಿದರು.
Advertisement
Advertisement
ರಾಯಚೂರು ನವೋದಯ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಪ್ರಕರಣದ ಕುರಿತು ಕಾಲೇಜು ಮುಖ್ಯಸ್ಥ ಎಸ್‍ಆರ್ ರೆಡ್ಡಿ ಪುತ್ರಿ ನಂದಿಕಾ ಸುಂಕಿ ರೆಡ್ಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ತಮ್ಮ ಸ್ಟೇಟಸ್ ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
Advertisement
ವಿದ್ಯಾರ್ಥಿನಿ ಮೇಲೆ ಅತ್ಯಾಚಾರವಾಗಿಲ್ಲ, ಸುಟ್ಟಿಲ್ಲ, ಅದು ಕೊಲೆ ಅಲ್ಲ ಎಂದು ಹರಿಬಿಟ್ಟಿರುವ ಸಂದೇಶಕ್ಕೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂದಿಕಾ ಸುಂಕಿ ರೆಡ್ಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಸಂದೇಶದಿಂದ ನವೋದಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಎಷ್ಟು ಸುರಕ್ಷತೆಯಿದೆ ಎನ್ನುವುದು ಅರ್ಥವಾಗುತ್ತಿದೆ. ಇದು ಮುಂದುವರಿದರೆ ಕಾಲೇಜಿನ ಮುಂದೆಯೇ ಅವರ ವಿರುದ್ಧ ಪ್ರತಿಭಟನೆ ಮಾಡುತ್ತೇವೆ ಎಂದು ಪ್ರತಿಭಟನಾ ನಿರತರು ಎಚ್ಚರಿಕೆ ನೀಡಿದ್ದಾರೆ.