– ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರ ಆಕ್ರೋಶ
– ಆರೋಪಿ ಗಲ್ಲಿಗೇರಿಸುವಂತೆ ಒತ್ತಾಯಿಸಿ ಠಾಣೆ ಮುಂದೆ ಪ್ರತಿಭಟನೆ
ಹುಬ್ಬಳ್ಳಿ: ಸೈಕೋಪಾತ್ ಒಬ್ಬ 5 ವರ್ಷದ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿರುವ ಘಟನೆ ಅಶೋಕ್ ನಗರ ಪೊಲೀಸ್ ಠಾಣೆ (Ashok nagara Police Station) ವ್ಯಾಪ್ತಿಯಲ್ಲಿ ನಡೆದಿದೆ. ಹತ್ಯೆ ಖಂಡಿಸಿ ಪೋಷಕರು ಹಾಗೂ ಸಾರ್ವಜನಿಕರು ಪೊಲೀಸ್ ಠಾಣೆ ಎದುರು ತೀವ್ರ ಪ್ರತಿಭಟನೆ ನಡೆಸಿದರು.
ಬಿಹಾರ (Bihara) ಮೂಲದ ಸೈಕೋಪಾತ್, ಬಾಲಕಿಯನ್ನ ಶೆಡ್‌ಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ಚೀರಾಟ ಕೇಳಿ ಅಲ್ಲೇ ಇದ್ದ ಸ್ಥಳೀಯರು ಶೆಡ್‌ನತ್ತ ಬಂದಿದ್ದಾರೆ. ಜನ ಬರುತ್ತಿರುವುದನ್ನು ಕಂಡ ಸೈಕೋಪಾತ್ ಭಯದಿಂದ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿ, ಎಸ್ಕೇಪ್ ಆಗಿದ್ದಾನೆ. ಇದನ್ನೂ ಓದಿ: ಹುಬ್ಬಳ್ಳಿ | ಸೈಕೋಪಾತ್‌ನಿಂದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ
ಬಾಲಕಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಹಿನ್ನಲೆ ಭುಗಿಲೆದ್ದ ಜನರು ಮತ್ತು ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಅಶೋಕ ನಗರ ಪೊಲೀಸ್ ಠಾಣೆ ಎದುರು ಪ್ರತಿಭಟಿಸಿದ್ದು, ಆರೋಪಿಗೆ ತಕ್ಕ ಶಿಕ್ಷೆ ನೀಡುವಂತೆ ಒತ್ತಾಯಿಸಿದರು. ಸ್ಥಳಕ್ಕಾಗಮಿಸಿದ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರು. ಕಮಿಷನರ್ ಮಾತಿಗೆ ಒಪ್ಪದ ಪ್ರತಿಭಟನಾಕಾರರು ಠಾಣೆಯ ಮುಂದೆಯೇ ಕುಳಿತು ಆರೋಪಿಯ ಪತ್ತೆಗೆ ಆಗ್ರಹಿಸಿದರು. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಕೊಲೆ ಕೇಸ್ – ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು
ಪ್ರತಿಭಟನಾಕಾರರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆ ಎಲ್ಲರನ್ನೂ ಚದುರಿಸಲು ಪೊಲೀಸರು ಹರಸಾಹಸ ಪಟ್ಟರು. ಮತ್ತೊಂದೆಡೆ ಮಹಿಳೆಯರು ಹಾಗೂ ಪ್ರತಿಭಟನಾಕಾರರು ರಸ್ತೆಯಲ್ಲೇ ಕುಳಿತು ಶಾಂತ ಪ್ರತಿಭಟನೆ ನಡೆಸಿದರು. ಇದನ್ನೂ ಓದಿ: ಬಾಲಕಿ ಕೊಲೆ ಕೇಸ್ | ಆರೋಪಿ ಮೇಲೆ ಕಟ್ಟಿನಿಟ್ಟಿನ ಕ್ರಮ ಆಗಬೇಕು – ಪ್ರಹ್ಲಾದ್ ಜೋಶಿ
ಹತ್ಯೆ ಖಂಡಿಸಿ ಹುಬ್ಬಳ್ಳಿ ಕಿಮ್ಸ್ ಗೇಟ್ ಎದುರು ಕನ್ನಡಪರ ಸಂಘಟನೆಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಆರೋಪಿಯನ್ನು ಗಲ್ಲಿಗೆ ಏರಿಸಿ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಅಲ್ಲದೇ ಎಲ್ಲಿದ್ದಿರಪ್ಪಾ ಸಂಸದರೇ, ಶಾಸಕರೇ, ನೇಹಾ ಹತ್ಯೆ ವೇಳೆ ಮಾತಾಡುತ್ತಿದ್ದವರು ಈಗ ಎಲ್ಲಿ ಎಂದು ಪ್ರತಿಭಟನಾಕಾರರು ಜನಪ್ರತಿನಿಧಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ, ರಸ್ತೆ ತಡೆದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು. ಈ ವೇಳೆ ಪ್ರತಿಭಟನಾಕಾರರ ಬಳಿ ವಾಹನ ಓಡಾಟಕ್ಕೆ ಅನುವು ಮಾಡಿಕೊಡುವಂತೆ ಪೊಲೀಸರು ಮನವಿ ಮಾಡಿದರು.