ಚಿಕ್ಕಮಗಳೂರು: ಕರ್ನಾಟಕ ಬಂದ್‍ಗೆ (Karnataka Bandh) ರಾಜ್ಯದ ವಿವಿಧ ಕಡೆಗಳಿಂದ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಆದ್ರೆ ಚಿಕ್ಕಮಗಳೂರಿನ (Chikkamagaluru) ಜಿಲ್ಲೆಯ ಕಳಸ ಪಟ್ಟಣದಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಕನ್ನಡಪರ ಹೋರಾಟಗಾರನೊಬ್ಬ ಕೈ ಕೊಯ್ದುಕೊಂಡು ರಕ್ತ ಕೊಡುತ್ತೇವೆಯೇ ಹೊರತು ನೀರು ಕೊಡುವುದಿಲ್ಲ ಎಂದು ಆಕ್ರೋಶ ಹೊರಹಾಕಿರುವ ಘಟನೆ ನಡೆದಿದೆ.
Advertisement
ಕನ್ನಡಪರ ಸಂಘಟನೆ ಕಾರ್ಯಕರ್ತ ರಾಜು ಪ್ರತಿಭಟನೆ ವೇಳೆ ಏಕಾಏಕಿ ಕೈ ಕೊಯ್ದುಕೊಂಡು ರಕ್ತ ನೆಲಕ್ಕೆ ಬೀಳಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಕರ್ನಾಟಕ ಬಂದ್ ಯಶಸ್ವಿಯಾಗಿ ಸಾಗಿದ್ದು, ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಜಿಲ್ಲೆಯ 103ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ಗೆ ಸಂಪೂರ್ಣ ಬೆಂಬಲ ಸೂಚಿಸಿವೆ. ಬೆಳಗ್ಗೆಯಿಂದಲೇ ಜಿಲ್ಲೆಯಲ್ಲಿ ಅಂಗಡಿ ಮುಂಗಟ್ಟುಗಳನ್ನ ಬಂದ್ ಮಾಡುವ ಮೂಲಕ ಸಾರ್ವಜನಿಕರೂ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಾವೇರಿ ಹೋರಾಟಕ್ಕೆ ಬೆಂಬಲ ನೀಡಲು ಬೈಕ್ ರ‍್ಯಾಲಿ – ಪ್ರತಿಭಟನೆಯಲ್ಲಿ ಭಾಗಿಯಾದ ಚಕ್ರವರ್ತಿ ಸೂಲಿಬೆಲೆ
Advertisement
ಕಳಸ ಪಟ್ಟಣದಲ್ಲಿ ರೈತ ಸಂಘ ಹಾಗೂ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದ ವೇಳೆ ರೈತರಿಗೆ ಅನುಕೂಲವಾಗಬೇಕು, ತಮಿಳುನಾಡಿಗೆ ನೀರು ಬಿಡುವುದನ್ನು ಕೂಡಲೇ ನಿಲ್ಲಿಸಬೇಕು ಹೋರಾಟಗಾರರು ಆಗ್ರಹಿಸಿ, ಹೋರಾಟಗಾರ ರಾಜು ತನ್ನ ಕೈಕೊಯ್ದುಕೊಂಡು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬಳಿಕ ಜೊತೆಗಿದ್ದ ರೈತ ಸಂಘ ಹಾಗೂ ಇತರೆ ಹೋರಾಟಗಾರರು ರಾಜು ಅವರನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ: ಕಾಫಿನಾಡಲ್ಲಿ ಕಾವೇರಿ ಕಿಚ್ಚು – ಸುರಿವ ಮಳೆಯಲ್ಲೂ ಹಮಾಲಿ ಕಾರ್ಮಿಕರ ಪ್ರತಿಭಟನೆ
Advertisement
Advertisement
ಅಲ್ಲದೇ ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರು (BJP Workers) ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದ್ದಾರೆ.
Web Stories