ಬೆಂಗಳೂರು: ನಮಗೆ ಬರಬೇಕಾದ ಹಕ್ಕನ್ನು ಕೇಳಲು ನಾಳೆ ದೆಹಲಿಯಲ್ಲಿ ಹೋರಾಟ ಮಾಡುತ್ತಿರುವುದಾಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ದೆಹಲಿ ಪ್ರತಿಭಟನೆಯನ್ನು (Delhi Protest) ಸಮರ್ಥನೆ ಮಾಡಿಕೊಂಡು ಬಿಜೆಪಿ ವಿರುದ್ಧ ಕಿಡಿಕಾರಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ಹೋರಾಟ ಮಾಡುತ್ತಿದ್ದೇವೆ. ನಮಗೆ ಬರಬೇಕಾದ ಹಕ್ಕನ್ನು ಕೇಳುತ್ತಿದ್ದೇವೆ. ಬೇರೆ ಬೇರೆ ಸಚಿವರು ಹೋಗಿ ಭೇಟಿ ಮಾಡುವ ಪ್ರಯತ್ನ ಮಾಡಿದರು. ಕೃಷ್ಣ ಭೈರೇಗೌಡ ಸೇರಿ ಹಲವು ಸಚಿವರು ಹೋದರೂ ಪ್ರಯೋಜನ ಆಗಿಲ್ಲ. ಬಿಜೆಪಿಯವರು (BJP) ರಾಜಕೀಯ ಮಾಡುತ್ತಿದ್ದಾರೆ. ಹೀಗಾಗಿ ನಾಳೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದರು. ಇದನ್ನೂ ಓದಿ: ಯಡಿಯೂರಪ್ಪರಿಂದ ಭಾರತ್ ಬ್ರ್ಯಾಂಡ್ ಅಕ್ಕಿ ವಿತರಣೆಗೆ ಚಾಲನೆ
Advertisement
Advertisement
ಸಿಎಂ ಸಿದ್ದರಾಮಯ್ಯ ನಿನ್ನೆ ಸವಿಸ್ತಾರವಾಗಿ ಹೇಳಿದ್ದಾರೆ. ಯಾಕೆ ಹೋಗ್ತಾ ಇದ್ದೀವಿ? ಏನು ಕಾರಣ? ಎಷ್ಟು ದುಡ್ಡು ಬರಬೇಕು ಅಂತ ಹೇಳಿದ್ದಾರೆ. ನಮ್ಮ ಹಕ್ಕು ಪಡೆಯಲು ನಾಳೆ ಕೇಂದ್ರ ಸರ್ಕಾರದ ಗಮನ ಸೆಳೆಯೋಕೆ ಪ್ರತಿಭಟನೆ ಮಾಡುತ್ತಿದ್ದೇವೆ. ಬರ ಪರಿಹಾರ ಇಲ್ಲಿಯವರೆಗೆ ಸಿಕ್ಕಿಲ್ಲ. ಸಿಎಂ, ಕೃಷ್ಣ ಭೈರೇಗೌಡ ಹೋದರೂ ಪರಿಹಾರ ಸಿಕ್ಕಿಲ್ಲ. ಅಂತಿಮವಾಗಿ ಸಿಎಂ, ಡಿಸಿಎಂ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಆಭ್ಯರ್ಥಿಯಾಗಿ ಸ್ಪರ್ಧಿಸಲು ವಿಶ್ವನಾಥ್ ಸಿದ್ಧತೆ
Advertisement
Advertisement
ನಾಳೆ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಕೌಂಟರ್ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ರಾಜಕೀಯವಾಗಿ ಹೇಳಬೇಕು. ರಿಯಾಲಿಟಿಗೆ ಬಿಜೆಪಿಯವರು ಬರಬೇಕು. ಬಿಜೆಪಿಯವರು ಅಧಿಕಾರದಲ್ಲಿ ಇದ್ದಾಗ ಸಾಕಷ್ಟು ಪ್ರಯತ್ನ ಮಾಡಿದರೂ ಪರಿಹಾರ ಸಿಕ್ಕಿಲ್ಲ. ಕಾಂಗ್ರೆಸ್ ಸರ್ಕಾರ ಅಲ್ಲ ಕರ್ನಾಟಕ ನಾಡಿಗೆ ಬರಬೇಕು. 10 ವರ್ಷಗಳಲ್ಲಿ ಬಹಳಷ್ಟು ಆಗಿದೆ. ಬರಗಾಲ, ಪ್ರವಾಹದ ಸಂದರ್ಭದಲ್ಲಿ ಆಗಿದೆ. ಪ್ರತಿಭಟನೆ ಮಾಡುತ್ತೇವೆ ಕಾದು ನೋಡೋಣ ಎಂದು ಹೇಳಿದರು. ಇದನ್ನೂ ಓದಿ: ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪದ ನಾಗರಿಕ ಸಂಹಿತೆ ಮಸೂದೆ ಮಂಡನೆ