Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಕಲಿ ಕಾಂಗ್ರೆಸ್ ನೀತಿ ವಿರುದ್ಧ ನಾಳೆ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಧರಣಿ: ಬಿ.ವೈ.ವಿಜಯೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಕಲಿ ಕಾಂಗ್ರೆಸ್ ನೀತಿ ವಿರುದ್ಧ ನಾಳೆ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಧರಣಿ: ಬಿ.ವೈ.ವಿಜಯೇಂದ್ರ

Bengaluru City

ನಕಲಿ ಕಾಂಗ್ರೆಸ್ ನೀತಿ ವಿರುದ್ಧ ನಾಳೆ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಧರಣಿ: ಬಿ.ವೈ.ವಿಜಯೇಂದ್ರ

Public TV
Last updated: December 26, 2024 7:28 pm
Public TV
Share
3 Min Read
BY Vijayendra
SHARE

ಬೆಂಗಳೂರು: ಕಾಂಗ್ರೆಸ್ (Congress) ಪಕ್ಷವು ರಾಜ್ಯದ ಜನರ ಕೋಟಿಗಟ್ಟಲೆ ತೆರಿಗೆ ಹಣವನ್ನು ಬಳಸಿಕೊಂಡು ಬೆಳಗಾವಿಯಲ್ಲಿ ಮಹಾಧಿವೇಶನ ಮಾಡಲು ಹೊರಟಿದೆ. ನಕಲಿ ಕಾಂಗ್ರೆಸ್ಸಿನ ಈ ನೀತಿಯ ವಿರುದ್ಧ ಹಾಗೂ ಬೆಳಗಾವಿಯಲ್ಲಿ ಕಾಂಗ್ರೆಸ್ ಮಹಾಧಿವೇಶನವನ್ನು ವಿರೋಧಿಸಿ ನಾಳೆ ಬೆಳಗ್ಗೆ 10:30ಕ್ಕೆ ಬೆಂಗಳೂರಿನ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಧರಣಿ ನಡೆಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದರು.

ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆ-ವಿಧಾನಪರಿಷತ್ತಿನ ಬಿಜೆಪಿ ಸದಸ್ಯರು ಇದರಲ್ಲಿ ಭಾಗವಹಿಸುವರು ಎಂದು ತಿಳಿಸಿದರು. ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಸಂವಿಧಾನಶಿಲ್ಪಿ ಬಾಬಾಸಾಹೇಬ ಅಂಬೇಡ್ಕರ್‌ ಅವರನ್ನು ಹೆಚ್ಚು ಹೆಚ್ಚಾಗಿ ಸ್ಮರಿಸಿಕೊಳ್ಳುತ್ತಿದೆ. ಆದರೆ, ಹಿಂದೆ ಕಾಂಗ್ರೆಸ್ ಪಕ್ಷವು ಅವಕಾಶ ಸಿಕ್ಕಿದಾಗಲೆಲ್ಲ ಬಾಬಾಸಾಹೇಬ ಅಂಬೇಡ್ಕರರನ್ನು ನಿಂದಿಸುತ್ತ, ಅವಮಾನಿಸುತ್ತ ಬಂದಿತ್ತು ಎಂದು ವಿಜಯೇಂದ್ರ ಆಕ್ಷೇಪಿಸಿದರು. ಇದನ್ನೂ ಓದಿ: ಎರಡು ದಿನ ಗಾಂಧಿ ಭಾರತ್ ಕಾರ್ಯಕ್ರಮ; ಬೆಳಗಾವಿಗೆ ಖರ್ಗೆ, ರಾಹುಲ್‌ ಗಾಂಧಿ ಆಗಮನ

rahul gandhi and mallikarjun kharge belagavi

ಜವಾಹರಲಾಲ್ ನೆಹರೂ ಅವರಿಂದ ಹಿಡಿದು ಇವತ್ತಿನವರೆಗೂ ಈ ಕಾಂಗ್ರೆಸ್ ಪಕ್ಷದವರು ಬಾಬಾಸಾಹೇಬ ಅಂಬೇಡ್ಕರರ ಬಗ್ಗೆ ಗೌರವ ಹೊಂದಿರಲಿಲ್ಲ ಎಂಬುದು ಜಗಜ್ಜಾಹೀರಾಗಿದೆ. ಹಿಂದೆ ನೆಹರೂ ಅವರು ಇದ್ದಾಗ ತಾತ್ಕಾಲಿಕ ಸರ್ಕಾರ ರಚಿಸಿದ್ದು, ಬಾಬಾಸಾಹೇಬ ಅಂಬೇಡ್ಕರ್‌ ಅವರು ಮಂತ್ರಿಗಳಾಗಿ ಜನಮೆಚ್ಚುವ ಕೆಲಸ ಮಾಡುತ್ತಿದ್ದರು. ಅವರ ಜನಪ್ರಿಯತೆ- ಪ್ರಭಾವ ಹೆಚ್ಚಾಗುವುದನ್ನು ಗಮನಿಸಿ, ಕಾಂಗ್ರೆಸ್ ಪಕ್ಷದ ಬೇಳೆ ಬೇಯುವುದಿಲ್ಲ ಎಂದು ಹೇಳಿ ಅವರನ್ನು ನಿಂದಿಸುವ, ಹಿಂಸಿಸುವ ಕೆಲಸ ಮಾಡಿದ್ದರು ಎಂದು ಆರೋಪಿಸಿದರು. ಇವರು ಪ್ರಾಮಾಣಿಕರೇ ಇದ್ದರೆ ಬಾಬಾಸಾಹೇಬರು ಸಚಿವ ಸಂಪುಟದಿಂದ ರಾಜೀನಾಮೆ ಕೊಡುವ ಪರಿಸ್ಥಿತಿ ಯಾಕೆ ಬಂತು ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷದವರು ಕೊಟ್ಟ ನೋವಿನಿಂದ ಅವರು ಸಚಿವ ಸಂಪುಟದಿಂದ ಹೊರಕ್ಕೆ ಬರಬೇಕಾಯಿತು ಎಂದು ವಿಜಯೇಂದ್ರ ವಿಶ್ಲೇಷಿಸಿದರು.

ಅಂಬೇಡ್ಕರರ ಸೇವಕರಾಗಿ ಕೆಲಸ ಮಾಡುತ್ತಿದ್ದ ಕಾಜೋಳ್ಕರ್‌ರನ್ನು ಅಂಬೇಡ್ಕರರ ವಿರುದ್ಧ ಸ್ಪರ್ಧಿಸಲು ಲೋಕಸಭಾ ಚುನಾವಣೆಯ ಅಭ್ಯರ್ಥಿ ಮಾಡಿ ಮನೆಮುರುಕತನವನ್ನು ಅಂದಿನ ಕಾಂಗ್ರೆಸ್ ಪಕ್ಷ ಮಾಡಿತ್ತು. ಕಾಂಗ್ರೆಸ್ ಪಕ್ಷದವರು ಲೋಕಸಭಾ ಚುನಾವಣೆಯಲ್ಲಿ ಅಂಬೇಡ್ಕರರನ್ನು ಸೋಲಿಸಿದ್ದೂ ಅಲ್ಲದೆ, ಕಾಜೋಳ್ಕರ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಕೊಟ್ಟ ಅಪಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ ಎಂದು ನುಡಿದರು.
ದೇಶ, ರಾಜ್ಯದಲ್ಲಿ ಇದೀಗ ಇರುವುದು ಅಸಲಿ ಕಾಂಗ್ರೆಸ್ ಪಕ್ಷವಲ್ಲ. ಇದು ನಕಲಿ ಕಾಂಗ್ರೆಸ್ ಪಕ್ಷ. ಮಹಾತ್ಮ ಗಾಂಧೀಜಿ ಮತ್ತು ಡಾ. ಅಂಬೇಡ್ಕರ್ ಅವರ ತತ್ವಗಳನ್ನು ಗಾಳಿಗೆ ತೂರಿದ ಪಕ್ಷ ಕಾಂಗ್ರೆಸ್ ಎಂದ ಅವರು, ಗಾಂಧೀಜಿ ಮತ್ತು ಅಂಬೇಡ್ಕರರ ಹೆಸರು ಹೇಳುವ ನೈತಿಕತೆ, ಯೋಗ್ಯತೆ ಕಾಂಗ್ರೆಸ್ಸಿಗರಿಗೆ ಇಲ್ಲ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: INDIA ಒಕ್ಕೂಟದಿಂದ ಕಾಂಗ್ರೆಸ್‌ ಉಚ್ಚಾಟಿಸಿ – ಆಪ್‌ ಬಂಡಾಯ!

chalavadi narayanaswamy 1

ಇವರು ಇವತ್ತು ಬಾಬಾಸಾಹೇಬರ ಬಗ್ಗೆ ಉದ್ದುದ್ದ ಭಾಷಣ ಬಿಗಿಯುತ್ತಿದ್ದಾರೆ. ಬಾಬಾಸಾಹೇಬರ ಬಲಗೈ ಬಂಟ ಜೋಗೇಂದರ್ ನಾಥ್ ಮಂಡಲ್ ಪಶ್ಚಿಮ ಬಂಗಾಲದಲ್ಲಿ ಚುನಾವಣೆಯಲ್ಲಿ ಗೆದ್ದು ಬಂದಿದ್ದರು. ನಂತರ ಆ ಕ್ಷೇತ್ರವನ್ನು ಅಂಬೇಡ್ಕರರಿಗೆ ಬಿಟ್ಟುಕೊಟ್ಟು, ರಾಜ್ಯಸಭೆಗೆ ಬರುತ್ತಾರೆ. ಮುಂದೆ ಬಾಬಾಸಾಹೇಬರು ಅದೇ ಕ್ಷೇತ್ರದಿಂದ ಗೆದ್ದು, ಸಂಸತ್ ಪ್ರವೇಶಿಸಿದ್ದರು. ಬಾಬಾಸಾಹೇಬರು ಗೆದ್ದು ಬಂದ ಪಶ್ಚಿಮ ಬಂಗಾಲದ ಇದೇ ಕ್ಷೇತ್ರವನ್ನು ಭಾರತ ವಿಭಜನೆ ಆಗಿ ಪಶ್ಚಿಮ ಪಾಕಿಸ್ತಾನ ಆಗುವ ವೇಳೆ ಪಶ್ಚಿಮ ಪಾಕಿಸ್ತಾನಕ್ಕೆ ಕೊಟ್ಟಿದ್ದರು. ಇದು ಕಾಂಗ್ರೆಸ್ಸಿನ ದುಷ್ಟತನ ಎಂದು ವಿಶ್ಲೇಷಣೆ ಮಾಡಿದರು. ಕಾಂಗ್ರೆಸ್ ಪಕ್ಷದವರಿಗೆ ಈ ದೇಶದ ಬಗ್ಗೆ, ಅಖಂಡತೆ, ಸಮಗ್ರತೆ ಬಗ್ಗೆ ಬದ್ಧತೆ ಇಲ್ಲ. ದೇಶ ಒಡೆಯುವ ಕೆಲಸವನ್ನು ಕಾಂಗ್ರೆಸ್ಸಿಗರೇ ಮಾಡಿದ್ದಾರೆ ಎಂದು ಹೇಳಿದರು. ಬಾಬಾ ಸಾಹೇಬರಿಗೆ ಸಂಬಂಧಿಸಿದ 5 ಪ್ರಮುಖ ಸ್ಥಳಗಳನ್ನು ಪ್ರಧಾನಿ ನರೇಂದ್ರ ಮೋದಿಜೀ ಅವರು ಪಂಚತೀರ್ಥಗಳನ್ನಾಗಿ ಅಭಿವೃದ್ಧಿ ಪಡಿಸಿದ್ದಾರೆ ಎಂದು ವಿವರಿಸಿದರು.

ಹಿಂದಿನಿಂದ ಕಾಂಗ್ರೆಸ್ಸಿನ ಓಲೈಕೆ ರಾಜಕೀಯ- ಛಲವಾದಿ ನಾರಾಯಣಸ್ವಾಮಿ
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಅಂಬೇಡ್ಕರರನ್ನು ತುಚ್ಛವಾಗಿ ನೋಡಿದ್ದ ಕಾಂಗ್ರೆಸ್ ಪಕ್ಷವು 370ನೇ ವಿಧಿ ಮೂಲಕ ಅವತ್ತೇ ಓಲೈಕೆ ರಾಜಕಾರಣ ಮಾಡಿತ್ತು ಎಂದು ಟೀಕಿಸಿದರು. ಇದನ್ನು ಯೇ ದೇಶ್ ಮೇ ದೋ ಸಂವಿಧಾನ್, ದೋ ನಿಶಾನ್ ನಹಿ ಚಲೇಗಾ ಎಂದು ಆಗಲೇ ಶ್ಯಾಮಪ್ರಸಾದ ಮುಖರ್ಜಿ ಅವರು ಖಂಡಿಸಿದ್ದರು ಎಂದು ವಿಜಯೇಂದ್ರ ವಿವರಿಸಿದರು. ಇದನ್ನೂ ಓದಿ: ಬಿಜೆಪಿಗೆ 2,244 ಕೋಟಿ, ಕಾಂಗ್ರೆಸ್‌ಗೆ 289 ಕೋಟಿ – ಯಾವ ಪಕ್ಷಕ್ಕೆ ಎಷ್ಟು ದೇಣಿಗೆ ಸಿಕ್ಕಿದೆ?

TAGGED:B.Y vijayendrabjpcongressಕಾಂಗ್ರೆಸ್ತಮಿಳುನಾಡುಬಿ.ವೈ.ವಿಜಯೇಂದ್ರಬಿಜೆಪಿ
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

Rasikh Salam Dar and Virat Kohli
Bengaluru City

75 ರನ್‌ಗಳಿಗೆ 8 ವಿಕೆಟ್‌ ಪತನ| ಆರ್‌ಸಿಬಿ ಬೌಲರ್‌ಗಳ ಮುಂದೆ ಲಕ್ನೋ ಪಲ್ಟಿ – ಮೊದಲ ಸ್ಥಾನಕ್ಕೆ ಜಿಗಿದ ಬೆಂಗಳೂರು

Public TV
By Public TV
23 minutes ago
Turkey School Shooting By Student
Crime

ಟರ್ಕಿಯ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ – 9 ಮಂದಿ ದುರ್ಮರಣ, ದಾಳಿಕೋರ ಸಾವು

Public TV
By Public TV
31 minutes ago
ballot paper counting india
Bengaluru City

ಈಗ ಅಧಿಕೃತ – ಕರ್ನಾಟಕದಲ್ಲಿ ಇನ್ಮುಂದೆ ಇವಿಎಂ ಬದಲು ಬ್ಯಾಲೆಟ್‌ ಪೇಪರ್‌

Public TV
By Public TV
52 minutes ago
GBA
Bengaluru City

ಜಿಬಿಎ ಚುನಾವಣೆ – ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ರಾಜ್ಯ ಸರ್ಕಾರ

Public TV
By Public TV
1 hour ago
Love with Nadaf Bhumika commits suicide Bagalkote Town
Bagalkot

ನದಾಫ್‌ ಜೊತೆ ಪ್ರೀತಿ – ಮನೆಯಲ್ಲೇ ಭೂಮಿಕಾ ಆತ್ಮಹತ್ಯೆ

Public TV
By Public TV
2 hours ago
Yogesh Gowda Sister Akkamma
Dharwad

ನಮ್ಮ ತಮ್ಮನ ಸಾವಿನ ಪ್ರಕರಣ ಎಲ್ಲಾ ರಾಜಕಾರಣಿಗಳಿಗೆ ತಕ್ಕ ಪಾಠವಾಗಬೇಕು: ಯೋಗೇಶ್ ಗೌಡ ಸಹೋದರಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?