ಮಂಗಳೂರು: ಜಾರ್ಖಂಡ್ ಸರ್ಕಾರ ಪಿಎಫ್‍ಐ ಸಂಘಟನೆಯನ್ನು ನಿಷೇಧಿಸಿದ ಕ್ರಮವನ್ನು ಖಂಡಿಸಿ ದಕ್ಷಿಣ ಕನ್ನಡ ಪಿಎಫ್‍ಐ ಜಿಲ್ಲಾ ಸಮಿತಿ ಇಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದೆ.
ಪ್ರತಿಭಟನೆ ವೇಳೆ ಕೇಂದ್ರ ಮತ್ತು ಜಾರ್ಖಂಡ್ ಸರ್ಕಾರದ ವಿರುದ್ಧ ಹರಿಹಾಯ್ದ ಪ್ರತಿಭಟನಕಾರರು ಸರ್ಕಾರದ ಕ್ರಮದ ವಿರುದ್ಧ ಕಾನೂನು ಹೋರಾಟ ನಡೆಸುವ ಎಚ್ಚರಿಕೆ ನೀಡಿದರು.
Advertisement
Advertisement
ಪಿಎಫ್‍ಐ ಸಂಘಟನೆ ಯಾವುದೇ ರಾಷ್ಟ್ರವಿರೋಧಿ ಕೃತ್ಯವನ್ನು ನಡೆಸಿಲ್ಲ. ಈ ಕುರಿತು ಯಾವುದೇ ಸಾಕ್ಷ್ಯಧಾರಗಳು ಇಲ್ಲ. ಆದರೆ ಜಾರ್ಖಂಡ್ ಸರ್ಕಾರ ಮಾತ್ರ ಕೇಂದ್ರದ ಒತ್ತಡದಿಂದ ಸಂಘಟನೆಯನ್ನ ನಿಷೇಧಿಸಿದೆ ಎಂದು ಆರೋಪಿಸಿದರು.
Advertisement
ದೇಶದಲ್ಲಿ ಬಿಜೆಪಿ ಸರ್ಕಾರ ಸಂವಿಧಾನ ಬದಲಿಸುವ ಹೇಳಿಕೆ ನೀಡುತ್ತಿದೆ. ಮನುಸಂಸ್ಕೃತಿಯನ್ನು ಜಾರಿಗೊಳಿಸಿ ಹುನ್ನಾರವನ್ನು ಮಾಡುತ್ತಿದೆ. ಆರ್ ಎಸ್‍ಎಸ್ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ದೇಶದ ಜಾತ್ಯಾತೀತ ನೀತಿಗೆ ಹೋರಾಟ ನಡೆಸುತ್ತಿರುವ ಪಿಎಫ್‍ಐ ಸಂಘಟನೆ ಗೆ ಇಂತಹ ಕ್ರಮಗಳು ಯಾವುದೇ ಪರಿಣಾಮವನ್ನು ಬೀರುವುದಿಲ್ಲ ಎಂದು ಹೇಳಿದರು.
Advertisement
ಪ್ರತಿಭಟನೆಯಲ್ಲಿ ಪಿಎಫ್‍ಐ ರಾಜ್ಯ ಕಾರ್ಯದರ್ಶಿ ಯಾಸಿರ್ ಹಸನ್, ಎಸ್‍ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ, ದಕ್ಷಿಣ ಕನ್ನಡ ಜಿಲ್ಲಾ ಇಮಾಮ್ಸ್ ಕೌನ್ಸಿಲ್ ಅಧ್ಯಕ್ಷ ರಫೀಕ್ ದಾರಿಮಿ, ಪಿಎಫ್‍ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾದರ್, ಜಿಲ್ಲಾ ಸಮಿತಿ ಸದಸ್ಯ ಸಿರಾಜುದ್ದೀನ್, ದಲಿತ ಮುಖಂಡ ರಾಕೇಶ್ ಮತ್ತಿತರರು ಪಾಲ್ಗೊಂಡಿದ್ದರು.