ರಾಯಚೂರು: ಬಾಂಗ್ಲಾದೇಶದ ಹಿಂದೂಗಳ (Bangladesh) ಮೇಲಿನ ದೌರ್ಜನ್ಯ ಹಾಗೂ ಹಿಂದೂ ವಿರೋಧಿ ನೀತಿ ಖಂಡಿಸಿ ರಾಯಚೂರು (Raichuru) ನಗರದ ಅಂಬೇಡ್ಕರ್ ವೃತ್ತದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.ಇದನ್ನೂ ಓದಿ: ಹಾಸನ ಸಮಾವೇಶ ಪಕ್ಷದ ಸಮಾವೇಶ, ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲ ಇಲ್ಲ: ಸುಧಾಕರ್
Advertisement
ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಇಂದು (ಡಿ.04) ಬಾಂಗ್ಲಾದೇಶದ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಹಿಂದೂ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ಮಠಗಳ ಪೀಠಾಧಿಪತಿಗಳು, ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಸೇರಿ ಬಿಜೆಪಿ ಮುಖಂಡರು ಭಾಗವಹಿಸಿದ್ದರು. ವಿವಿಧ ಹಿಂದೂಪರ ಸಂಘಟನೆಗಳ ಮುಖಂಡರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದರು.
Advertisement
Advertisement
ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿ ಬಾಂಗ್ಲಾದೇಶದಲ್ಲಿನ ಹಿಂದೂಗಳಿಗೆ ರಕ್ಷಣೆ ನೀಡುವಂತೆ ಒತ್ತಾಯಿಸಿದರು. ಜೊತೆಗೆ ಬಾಂಗ್ಲಾದೇಶದಲ್ಲಿ ಬಂಧನಕ್ಕೊಳಗಾದ ಹಿಂದೂಗಳ ಬಿಡುಗಡೆಗೆ ಆಗ್ರಹಿಸಿದರು.ಇದನ್ನೂ ಓದಿ: BBK 11: ಶಿಶಿರ್ ಹೆಣ್ಮಕ್ಕಳ ಹಿಂದೆ ಸುತ್ತೋ ಜೊಲ್ಲ ಎಂದ್ರಾ ಚೈತ್ರಾ?- ರಣರಂಗವಾಯ್ತು ದೊಡ್ಮನೆ