ಹೈದರಾಬಾದ್: ಸಿಕಂದರಾಬಾದ್‌ನ (Secunderabad) ಮುತ್ಯಾಲಮ್ಮ ದೇವಸ್ಥಾನದಲ್ಲಿನ (Muthyalamma Temple) ವಿಗ್ರಹವನ್ನು ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಲಾಗಿದ್ದು, ಸ್ಥಳೀಯರು ಒಬ್ಬ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆಯ ನಂತರ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಪರಿಸ್ಥಿತಿ ಶಾಂತಗೊಳಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಬೆನ್ನಲ್ಲೇ ಇದಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯರು ದೇವಸ್ಥಾನದ ಬಳಿ ಪ್ರತಿಭಟನೆ ನಡೆಸಿದರು. ಇದಕ್ಕೆ ಬಿಜೆಪಿ (BJP) ಮುಖಂಡರೂ ಕೈಜೋಡಿಸಿದರು. ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಮಾಧವಿ ಲತಾ (Madhavi Latha) ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ದುರ್ಗಾದೇವಿ ಮೂರ್ತಿ ವಿರ್ಸಜನೆ| ಮಸೀದಿ ಎದುರು ಹಾಡು ಹಾಕಿದ್ದಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ
Advertisement
Advertisement
ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಸಂವಾದ ನಡೆಸಿದರು. ಇದೊಂದು ನಾಚಿಕೆಗೇಡಿನ ಘಟನೆ ಎಂದಿರುವ ಅವರು, ಕೆಲವರು ಉದ್ದೇಶಪೂರ್ವಕವಾಗಿ ಕೋಮುಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ಬಂಧಿತ ಆರೋಪಿ ಕಳ್ಳತನಕ್ಕಾಗಿ ಇಲ್ಲಿಗೆ ಬಂದಿಲ್ಲ. ಹಿಂದೂ ಸಮಾಜವನ್ನು ಅವಮಾನಿಸಲು ಬಂದಿದ್ದಾರೆ. ಹೈದರಾಬಾದ್‌ನ ವಿವಿಧೆಡೆ ಇಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಕೆಲವರು ಹೈದರಾಬಾದ್‌ನಲ್ಲಿ ಉದ್ವಿಗ್ನತೆಯನ್ನು ಸೃಷ್ಟಿಸಲು ಮತ್ತು ಹೈದರಾಬಾದ್‌ನಲ್ಲಿ ಕೋಮು ಗಲಭೆಗಳನ್ನು ಹೆಚ್ಚಿಸಲು ಉದ್ದೇಶಪೂರ್ವಕವಾಗಿ ಇದನ್ನು ಮಾಡುತ್ತಿದ್ದಾರೆ ಎಂದು ಕಿಶನ್ ರೆಡ್ಡಿ ಹೇಳಿದರು. ಇದನ್ನೂ ಓದಿ: Uttar Pradesh | ದುರ್ಗಾದೇವಿ ಮೂರ್ತಿ ವಿರ್ಸಜನೆ ವೇಳೆ ಕೋಮು ಸಂಘರ್ಷ – ಲಾಠಿ ಚಾರ್ಜ್, 30 ಮಂದಿ ಬಂಧನ
Advertisement
Advertisement
ಕಾಂಗ್ರೆಸ್ ಆಡಳಿತದಲ್ಲಿ ಹಿಂದೂಗಳು ಮತ್ತು ಅವರ ದೇವಾಲಯಗಳು ಸುರಕ್ಷಿತವಾಗಿಲ್ಲ. ಇಂತಹ ಘಟನೆ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ತೆಲಂಗಾಣದಲ್ಲಿ ಹಿಂದೂ ದೇವಾಲಯಗಳ ಮೇಲಿನ ಮತ್ತೊಂದು ದಾಳಿಯಾಗಿದೆ. ರೇವಂತ್ ರೆಡ್ಡಿ ಸರ್ಕಾರವು ಶೀಘ್ರವಾಗಿ ಕ್ರಮವಹಿಸಿ ಅಪರಾಧಿಗಳನ್ನು ಬಂಧಿಸಬೇಕು ಎಂದು ತೆಲಂಗಾಣ ಬಿಜೆಪಿ ವಕ್ತಾರ ತುಳ್ಳ ವೀರೇಂದ್ರ ಗೌಡ್ ಹೇಳಿದರು. ಮಾಜಿ ಸಚಿವ ಹಾಗೂ ಬಿಆರ್‌ಎಸ್ ಶಾಸಕ ತಲಸಾನಿ ಶ್ರೀನಿವಾಸ್ ಯಾದವ್ ಕೂಡ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ: ಸ್ನೇಹಮಯಿ ಕೃಷ್ಣಗೆ ರಕ್ಷಣೆ ಕೊಡಲು ನಾವು ಬದ್ಧ – ಎಂ.ಬಿ ಪಾಟೀಲ
ಅಕ್ಟೋಬರ್ 12 ರಂದು ಹೈದರಾಬಾದ್‌ನಲ್ಲಿ ಇದೇ ರೀತಿಯ ಘಟನೆ ವರದಿಯಾಗಿತ್ತು. ಹೈದರಾಬಾದ್‌ನ ಬೇಗಂ ಬಜಾರ್‌ನ ನಾಂಪಲ್ಲಿ ವಸ್ತು ಪ್ರದರ್ಶನ ಮೈದಾನದಲ್ಲಿ ಪೂಜಾ ಮಂಟಪದಲ್ಲಿ ದುರ್ಗಾ ಮಾತೆಯ ವಿಗ್ರಹಕ್ಕೆ ಹಾನಿ ಮಾಡಿದ ಆರೋಪದ ಮೇಲೆ ಒಬ್ಬನನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ವ್ಯಕ್ತಿಯು ಹಸಿವಿನಿಂದ ಬಳಲುತ್ತಿದ್ದ ನಿರಾಶ್ರಿತ ವ್ಯಕ್ತಿಯಾಗಿದ್ದು, ಆಹಾರಕ್ಕಾಗಿ ಹುಡುಕುತ್ತಿರುವಾಗ ವಿಗ್ರಹಕ್ಕೆ ಹಾನಿ ಮಾಡಿದ್ದಾನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರಕ್ಕೆ ಭಯೋತ್ಪಾದಕರೇ ಬಿಗ್ ಬಾಸ್, ಸಿದ್ದರಾಮಯ್ಯ ಮುಸಲ್ಮಾನರ ಬಿಗ್ ಬಾಸ್: ಅಶೋಕ್ ಲೇವಡಿ