ಯಾದಗಿರಿ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ಅವರು ರಾಜೀನಾಮೆ ನೀಡಿದ್ದನ್ನು ವಿರೋಧಿಸಿ ಯಾದಗಿರಿಯಲ್ಲಿ (Yadagiri) ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಅಭಿಮಾನಿಯೋರ್ವ ವಿಷದ ಬಾಟಲಿ ಹಿಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಯಾದಗಿರಿಯ ಸುಭಾಷ್ ವೃತ್ತದಲ್ಲಿ ನೂರಾರು ಅಭಿಮಾನಿಗಳು ಸಿದ್ದರಾಮಯ್ಯ ಅವರ ಪರವಾಗಿ ಘೋಷಣೆ ಕೂಗುತ್ತಾ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಭೀಮು ಪೂಜಾರಿ ಎಂಬ ಅಭಿಮಾನಿಯೊಬ್ಬರು ಸಿದ್ದರಾಮಯ್ಯ ರಾಜೀನಾಮೆ ನೀಡಿದ್ರೆ ನನ್ನ ಸಾವಿಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಕಾರಣರಾಗುತ್ತಾರೆಂದು ಹೇಳಿ, ಸಾರ್ವಜನಿಕರ ಎದುರೇ ಕ್ರಿಮಿನಾಶಕದ ಬಾಟಲಿ ಹಿಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನೂ ಓದಿ: ಅಂದು, ಇಂದು, ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ: ಕಾಂಗ್ರೆಸ್ ಟ್ವೀಟ್
ಕೂಡಲೇ ಸ್ಥಳದಲ್ಲಿಯೇ ಇದ್ದ ಇತರೆ ಪ್ರತಿಭಟನಾಕಾರರು ಹಾಗೂ ಸ್ಥಳದಲ್ಲಿದ್ದ ಪೊಲೀಸರು ತಕ್ಷಣವೇ ತಡೆದು, ಬಾಟಲಿಯನ್ನು ವಶಕ್ಕೆ ಪಡೆದಿದ್ದಾರೆ.
