ಚಿಕ್ಕೋಡಿ: ಹಿಂದೂ (Hindu) ಪದದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಶಾಸಕ ಸತೀಶ್ ಜಾರಕಿಹೊಳಿ (Satish Jarkiholi) ಅವರ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿ, ಅವರಿಗೆ ಬೆಂಬಲ ವ್ಯಕ್ತಪಡಿಸುರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ನಿಪ್ಪಾಣಿ (Nippani) ಪಟ್ಟಣದಲ್ಲಿ ನಡೆದಿದೆ.
ಮಾನವ ಬಂಧುತ್ವ ವೇದಿಕೆ ಹಾಗೂ ದಲಿತಪರ ಕಾರ್ಯಕರ್ತರು ಸತೀಶ್ ತೇಜೋವಧೆ ಮಾಡುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ನಗರದ ಸಂಭಾಜೀ ವೃತ್ತದಲ್ಲಿ ಸತೀಶ್ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಲಾಯಿತು.
Advertisement
Advertisement
ನಿಪ್ಪಾಣಿಯ ಸಂಭಾಜಿ ಚೌಕದಿಂದ ತಹಶೀಲ್ದಾರ್ ಕಚೇರಿಯವರೆಗೆ ಪಾದಯಾತ್ರೆ ಮೂಲಕ ಸತೀಶ್ ಬೆಂಬಲಿಸಿ ಪ್ರತಿಭಟನಾ ರ‍್ಯಾಲಿ ನಡೆಯಿತು. ಬಳಿಕ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಕಾರ್ಯಕರ್ತರು ಮನವಿ ಸಲ್ಲಿಸಿದರು. ಸುಮಾರು 300 ಕ್ಕೂ ಹೆಚ್ಚು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಗುಜರಾತಿನಲ್ಲಿ ನಡೆದಿರುವುದು ಕರ್ನಾಟಕಕ್ಕೂ ಮಾದರಿಯಾಗಬೇಕು: ಲೆಹರ್ ಸಿಂಗ್
Advertisement
Advertisement
ಸತೀಶ್ ಜಾರಕಿಹೊಳಿ ಭಾವಚಿತ್ರ ಕೈಯಲ್ಲಿ ಹಿಡಿದು ಅವರ ಪರ ಘೋಷಣೆ ಕೂಗಿದರು. ಐ ಸ್ಟ್ಯಾಂಡ್ ವಿಥ್ ಸತೀಶ್ ಜಾರಕಿಹೊಳಿ ಎಂಬ ಬರಹದ ಬಿತ್ತಿ ಪತ್ರ ಹಿಡಿದು ಪ್ರತಿಭಟನೆ ನಡೆಸಲಾಯಿತು.
ನವೆಂಬರ್ 6 ರಂದು ನಿಪ್ಪಾಣಿಯಲ್ಲಿ ಬುದ್ಧ ಬಸವ ಅಂಬೇಡ್ಕರ್ ಸಮಾವೇಶದಲ್ಲಿ ಭಾಷಣದ ವೇಳೆ ಹಿಂದೂ ಶಬ್ದದ ಅರ್ಥ ಅಶ್ಲೀಲವಾಗಿದೆ ಎಂದು ಸತೀಶ್ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ಬೆನ್ನಲ್ಲೇ ವ್ಯಾಪಕ ಟೀಕೆ, ಪ್ರತಿಭಟನೆಗಳು ನಡೆದಿವೆ. ಈಗ ಸತೀಶ್ ಜಾರಕಿಹೊಳಿ ಬೆಂಬಲ ಸೂಚಿಸಿ ತೇಜೋವಧೆ ಮಾಡುವವರ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಇದನ್ನೂ ಓದಿ: ರಾಯಚೂರಿನಲ್ಲಿ ಅನಧಿಕೃತ ಶೆಡ್‍ಗಳ ತೆರವು- 200 ಕುಟುಂಬ ಬೀದಿಗೆ