ಬೆಳಗಾವಿ: ರೈತರ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ತರಕಾರಿ ಇಟ್ಟು ಭಾರತೀಯ ಕೃಷಿಕ ಸಮಾಜದ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ರೈತರು ತರಕಾರಿ ಮಾರಾಟ ಮಾಡುವುದರ ಮೂಲಕ ಪ್ರತಿಭಟನೆ ನಡೆಸಿದರು.
Advertisement
ಎಂಎಸ್‍ಪಿ ಕಾನೂನಾತ್ಮಕವಾಗಿ ಖಾತರಿ ಪಡಿಸಲು ತಜ್ಞರ ಸಮಿತಿ ರಚಿಸುವ ವಾಗ್ದಾನವನ್ನು ಮಾಡಿದ ಕೇಂದ್ರ ಸರ್ಕಾರವು ಮರೆತಿದೆ. ಈ ನಿಟ್ಟಿನಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ರೈತ ವಿಶ್ವಾಸ ದ್ರೋಹ ಸಪ್ತಾಹ ಆಚರಿಸಲಾಗುತ್ತಿದೆ. ಇದನ್ನೂ ಓದಿ: ಇಬ್ಬರು, ಮೂವರು ಸಚಿವರನ್ನು ಬಿಟ್ಟು ಎಲ್ರೂ 40% ಕಮಿಷನ್ ಪಡೆಯುತ್ತಿದ್ದಾರೆ: ಎಂ.ಬಿ ಪಾಟೀಲ್
Advertisement
Advertisement
ಕೇಂದ್ರ ಸರ್ಕಾರ ಹಿಂಪಡೆದ ವಿವಾದಿತ ಕೃಷಿ ಕಾನೂನುಗಳನ್ನು ಹಿಂಪಡೆದಿದೆ. ಆದರೆ ಈವರೆಗೂ ರಾಜ್ಯ ಸರ್ಕಾರ ಈ ಕಾನೂನುಗಳನ್ನು ಹಿಂಪಡೆಯದೇ ಮೊಂಡುತನ ಪ್ರದರ್ಶಿಸುತ್ತಿದೆ. ಅಲ್ಲದೇ ನಗರದಲ್ಲಿ ಪ್ರಾರಂಭವಾದ ಖಾಸಗಿ ತರಕಾರಿ ಮಾರುಕಟ್ಟೆ ಸ್ಥಗಿತಗೊಳಿಸಿ ಸರ್ಕಾರಿ ಎಪಿಎಂಸಿ ಉಳಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಇದನ್ನೂ ಓದಿ: ಗೃಹ ಸಚಿವರಿಗೆ ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕೆ ಆಗಲ್ಲ: ಆರ್.ಧ್ರುವನಾರಾಯಣ್
Advertisement
ಭಾರತೀಯ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಸಿದ್ದಗೌಡ ಮೋದಗಿ, ಜಿಲ್ಲಾಧ್ಯಕ್ಷೆ ಶಿವಲೀಲಾ ಮಿಸಾಲೆ, ರಮೇಶ್ ವರಲಿ, ಶಂಕರ್ ಡವಳಿ, ರವಿ ಪಾಟೀಲ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.