ಮುಂಬೈ: ಮಹಾರಾಷ್ಟ್ರದಲ್ಲಿ (Maharashtra) ಮರಾಠ ಮೀಸಲಾತಿಗೆ (Maratha Reservation) ಆಗ್ರಹಿಸಿ ನಡೆಸಲಾಗುತ್ತಿರುವ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದೆ. ಸೋಮವಾರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (NCP) ಶಾಸಕ ಪ್ರಕಾಶ್ ಸೋಲಂಕೆ (Prakash Solanke) ಅವರ ಬಂಗಲೆಗೆ ಮರಾಠ ಮೀಸಲಾತಿ ಹೋರಾಟಗಾರರು ಬೆಂಕಿ ಹಚ್ಚಿ, ಅಪಾರ ಪ್ರಮಾಣದ ಆಸ್ತಿಯನ್ನು ಧ್ವಂಸಗೊಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋಗಳು ಹರಿದಾಡುತ್ತಿದೆ. ವೀಡಿಯೋದಲ್ಲಿ ಶಾಸಕರ ಬಂಗಲೆಯಲ್ಲಿ ಭಾರೀ ಪ್ರಮಾಣದ ಬೆಂಕಿ ಹೊತ್ತಿಕೊಂಡಿದ್ದು, ಸುತ್ತಲೂ ದಟ್ಟ ಹೊಗೆ ಆವರಿಸಿರುವುದು ಕಂಡುಬಂದಿದೆ.
Advertisement
#WATCH | Beed, Maharashtra: Maratha reservation agitators vandalised and set the residence of NCP MLA Prakash Solanke on fire. pic.twitter.com/8uAfmGbNCI
— ANI (@ANI) October 30, 2023
Advertisement
ಮರಾಠ ಕೋಟಾದ ಹೋರಾಟಗಾರ ಮನೋಜ್ ಜರಂಗೆ ಪಾಟೀಲ್ ಅವರ ಉಪವಾಸ ಸತ್ಯಾಗ್ರಹದ ಬಗ್ಗೆ ಮತ್ತು ಮರಾಠ ಕೋಟಾದ ಬಗ್ಗೆ ಸೋಲಂಕೆ ಅವರು ಟೀಕಿಸಿದ್ದರು. ಆಡಿಯೋ ಕ್ಲಿಪ್‌ನಲ್ಲಿ, ಎನ್‌ಸಿಪಿ ಶಾಸಕ ಮರಾಠ ಮೀಸಲಾತಿ ವಿಷಯವನ್ನು ಮಕ್ಕಳ ಆಟ ಎಂದು ಕರೆದಿದ್ದಾರೆ. ಅವರ ಹೇಳಿಕೆಯ ಆಡಿಯೊ ಕ್ಲಿಪ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬಳಿಕ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬೀದರ್‌ನಲ್ಲಿ ಲೋಕಾ ದಾಳಿ – ಬೆಳ್ಳಂಬೆಳಗ್ಗೆ ಅರಣ್ಯ ಅಧಿಕಾರಿಗೆ ಶಾಕ್
Advertisement
Advertisement
ತಮ್ಮ ನಿವಾಸಕ್ಕೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದ ವೇಳೆ ನಾನು ಅದೇ ಮನೆಯಲ್ಲಿದ್ದೆ. ಅದೃಷ್ಟವಶಾತ್ ನನ್ನ ಕುಟುಂಬದ ಸದಸ್ಯರು ಹಾಗೂ ಸಿಬ್ಬಂದಿಗೆ ಯಾವುದೇ ಗಾಯಗಳಾಗಿಲ್ಲ. ನಾವೆಲ್ಲರೂ ಸುರಕ್ಷಿತರಾಗಿದ್ದೇವೆ. ಆದರೆ ಭಾರೀ ಪ್ರಮಾಣದ ಬೆಂಕಿಯಿಂದಾಗಿ ಅಪಾರ ಪ್ರಮಾಣದ ಆಸ್ತಿ ನಷ್ಟವಾಗಿದೆ ಎಂದು ಸೋಲಂಕೆ ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮ ಮೆಟ್ರೋಗೆ ಬಸವಣ್ಣನವರ ಹೆಸರು ಇಡಬೇಕು: ಎಂ.ಬಿ ಪಾಟೀಲ್
Web Stories