ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಸರ್ಕಾರವು ರೈತ ವಿರೋಧಿ ಕೃಷಿ ಕಾನೂನು ಕಾಯ್ದೆಯನ್ನು ವಾಪಸ್ ಪಡೆದ ನಂತರವೂ ಮುಂದುವರಿದಿರುವ ಪ್ರತಿಭಟನೆಯನ್ನು ಅಂತ್ಯಗೊಳಿಸಲು ಪ್ರತಿಭಟನಾ ನಿರತ ರೈತರೊಂದಿಗೆ ಮಾತುಕತೆ ನಡೆಸಲು ಆಹ್ವಾನಿಸಲಾಗುತ್ತಿದೆ ಎಂದು ಕೇಂದ್ರ ಪಶುಸಂಗೋಪನೆ ಸಚಿವ ಪುರುಶೋತ್ತಮ್ ರೂಪಾಲಾ ಹೇಳಿದ್ದಾರೆ.
ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಮಾತುಕತೆ ನಡೆಸಲು ಸರ್ಕಾರ ಮುಕ್ತವಾಗಿದೆ. ನಮ್ಮ ನಾಯಕರು ಅವರೊಂದಿಗೆ ಮಾತನಾಡಲು ಆಹ್ವಾನ ನೀಡಲಿದೆ. ಆದರೆ ಯಾವ ದಿನಾಂಕ ಎಂದು ಘೋಷಿಸಲು ಸಾಧ್ಯವಿಲ್ಲ. ಮಾತುಕತೆ ನಡೆಸಿ ಮತ್ತು ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದು ಮಾತ್ರ ನಾನು ಹೇಳಬಲ್ಲೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳ ರದ್ದು ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ
ಬೆಳೆಗಳಿಗೆ ಕನಿಷ್ಟ ಬೆಲೆ ನಿಗದಿಸುವುದರ ಬಗ್ಗೆ ಮಾತನಾಡಿದ ಅವರು, ಎಂಎಸ್ ಸ್ವಾಮಿನಾಥನ್ ಆಯೋಗವು ಶಿಫಾರಸ್ಸಿನಂತೆ ರೈತರು ತಮ್ಮ ಇನ್‍ಪುಟ್ ವೆಚ್ಚದ ಶೇಕಡಾ 50 ರಷ್ಟು ಮತ್ತು ಅದಕ್ಕಿಂತ ಹೆಚ್ಚಿನ ದರವನ್ನು ಪಡೆಯಬಹುದು ಎಂದು ಎಂಎಸ್‍ಪಿ ಮೇಲಿನ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ ಎಂದಿದ್ದಾರೆ. ಇದನ್ನೂ ಓದಿ: ಪ್ರತಿಭಟನೆಯಲ್ಲಿ ಮೃತಪಟ್ಟ ರೈತರ ಬಗ್ಗೆ ದಾಖಲೆಗಳಿಲ್ಲ, ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ: ಕೇಂದ್ರ ಸರ್ಕಾರ