ನವದೆಹಲಿ: ಬಿಜೆಪಿ (BJP) ಸಂಸದ ಹಾಗೂ ಭಾರತದ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆ ವಿರುದ್ಧ ಭಾರತೀಯ ಒಲಿಂಪಿಕ್ಸ್ ಸಂಸ್ಥೆ (IOA) ಅಧ್ಯಕ್ಷೆ ಪಿ.ಟಿ ಉಷಾ (PT Usha) ಅಸಮಾಧಾನ ಹೊರಹಾಕಿದ್ದಾರೆ.
Advertisement
ಕುಸ್ತಿಪಟುಗಳ ಪ್ರತಿಭಟನೆಯಿಂದಾಗಿ ದೇಶದ ಘನತೆಗೆ ಧಕ್ಕೆಯಾಗುತ್ತಿದೆ. ಕ್ರೀಡಾಪಟುಗಳ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ದೂರುಗಳಿಗೆ ನಮ್ಮ ಬಳಿ ಬರಬೇಕಿತ್ತು. ಐಒಎನಲ್ಲಿ ಇದಕ್ಕಾಗಿಯೇ ಸಮಿತಿ ಮಾಡಲಾಗಿದೆ. ಸ್ವಲ್ಪವಾದರೂ ಶಿಸ್ತು ಇರಬೇಕು. ನಮ್ಮ ಬಳಿಗೆ ಬರುವುದನ್ನ ಬಿಟ್ಟು ರಸ್ತೆಗಿಳಿದಿದ್ದಾರೆ. ಇದು ಕ್ರೀಡಾಪಟುಗಳ ಬೆಳವಣಿಗೆಗೆ ಶೋಭೆ ತರುವುದಿಲ್ಲ. ಇಂತಹ ಪ್ರತಿಭಟನೆಗಳಿಂದ ದೇಶದ ಘನತೆಗೆ ಧಕ್ಕೆಯಾಗಲಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನ್ಯಾಯ ಸಿಗೋವರೆಗೂ ಇಲ್ಲೇ ಊಟ, ಇಲ್ಲೇ ನಿದ್ರೆ – ಮತ್ತೆ ಅಖಾಡಕ್ಕಿಳಿದ ಕುಸ್ತಿಪಟುಗಳು
Advertisement
Advertisement
ಉಷಾ ಅವರ ಹೇಳಿಕೆಗೆ ಕುಸ್ತಿಪಟುಗಳಾದ ಭಜರಂಗ್ ಪೂನಿಯಾ (Bajrang Punia), ವಿನೇಶ್ ಫೋಗಾಟ್ (Vinesh Phogat) ಬೇಸರ ವ್ಯಕ್ತಪಡಿಸಿದ್ದಾರೆ. ಉಷಾ ಅವರಿಂದ ಇಂತಹ ಕಠಿಣ ಪ್ರತಿಕ್ರಿಯೆ ನಿರೀಕ್ಷಿಸಿರಲಿಲ್ಲ. ಅವರು ನಮಗೆ ನೆರವು ನೀಡುತ್ತಾರೆ ಅಂದುಕೊಂಡಿದ್ದೆವು ಎಂದು ಪೂನಿಯಾ ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ ಸಂಸದ, WFI ಅಧ್ಯಕ್ಷನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಇಂದು ಸುಪ್ರೀಂ ನಲ್ಲಿ ವಿಚಾರಣೆ
Advertisement
ಏನಿದು ಕೇಸ್?
ರಾಷ್ಟ್ರೀಯ ತರಬೇತುದಾರರು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಡಬ್ಲ್ಯುಎಫ್‌ಐ ಅಧಿಕಾರಿಗಳು ಅಥ್ಲೀಟ್‌ಗಳಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ವಿವಿಧ ಕುಸ್ತಿಪಟುಗಳು ನವದೆಹಲಿಯ ಜಂತರ್ ಮಂತರ್‌ನಲ್ಲಿ ಈ ವರ್ಷದ ಆರಂಭದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಡಬ್ಲ್ಯುಎಫ್‌ಐ ಅಧ್ಯಕ್ಷರನ್ನ ಕೆಲಸದಿಂದ ವಜಾಗೊಳಿಸುವವರೆಗೆ ನಾವು ಯಾವುದೇ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸುವುದಿಲ್ಲ ಎಂದೂ ಘೋಷಿಸಿದ್ದರು. ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಕೇಂದ್ರ ಕ್ರೀಡಾ ಸಚಿವರು ಪ್ರತಿಭಟನಾನಿರತ ಕುಸ್ತಿಪಟುಗಳೊಂದಿಗೆ ಮಾತುಕತೆ ನಡೆಸಿ, ಅಗತ್ಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಅದಾದ ಬಳಿಕ ಕುಸ್ತಿಪಟುಗಳು ಪ್ರತಿಭಟನೆ ಕೈಬಿಟ್ಟಿದ್ದರು. ಇದೀಗ ಮತ್ತೆ ಪ್ರತಿಭಟನೆಗಿಳಿದಿರುವ ಕುಸ್ತಿಪಟುಗಳು ಸುಪ್ರೀಂ ಕೋರ್ಟ್ ಮೊರೆಹೋಗಿದ್ದಾರೆ.