ಚಂಡೀಗಢ: ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ ಲೀಕ್ ಪ್ರಕರಣದಿಂದ ವಿವಾದಕ್ಕೆ ಕಾರಣವಾದ ಚಂಡೀಗಢ ವಿಶ್ವವಿದ್ಯಾಲಯದಂತೆ (Chandigarh University) ಈಗ ಮತ್ತೊಂದು ವಿವಿ ಭಾರೀ ಸುದ್ದಿಯಲ್ಲಿದೆ. ಪಂಜಾಬ್‌ನ (Punjab) ಜಲಂಧರ್‌ನಲ್ಲಿರುವ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದ (Lovely Professional University) ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೇರಳ ಮೂಲದ 21 ವರ್ಷದ ವಿದ್ಯಾರ್ಥಿ ಮಂಗಳವಾರ ಸಂಜೆ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬ್ಯಾಚುಲರ್ ಆಫ್ ಡಿಸೈನಿಂಗ್ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದ ಅಗ್ನಿ ಎಸ್. ದಿಲೀಪ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ ಲೀಕ್ ಪ್ರಕರಣ – ಬಾಯ್‌ಫ್ರೆಂಡ್‌ಗೆ ಹೆದರಿ ವೀಡಿಯೋ ಮಾಡಿದ್ಲು ಸಹಪಾಠಿ
Advertisement
Advertisement
ಘಟನೆಯನ್ನು ಖಂಡಿಸಿ ವಿದ್ಯಾರ್ಥಿಗಳು ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಳೀಸರು ತಿಳಿಸಿದ್ದಾರೆ.
Advertisement
ಸದ್ಯ ಪ್ರತಿಭಟನೆಯನ್ನು ನಿಭಾಯಿಸಿದ್ದೇವೆ. ಆತ್ಮಹತ್ಯೆ ಬಗ್ಗೆ ಮೃತನ ಪೋಷಕರಿಗೆ ಮಾಹಿತಿ ನೀಡಿದ್ದೇವೆ. ಅವರ ಹೇಳಿಕೆ ಆಧರಿಸಿ ನಾವು ತನಿಖೆ ಮುಂದುವರಿಸುತ್ತೇವೆ ಎಂದು ಫಗ್ವಾರಾ ಪೊಲೀಸ್ ವರಿಷ್ಠಾಧಿಕಾರಿ ಮುಖ್ತಿಯಾರ್ ರೈ ತಿಳಿಸಿದ್ದಾರೆ. ಇದನ್ನೂ ಓದಿ: ಚಂಡೀಗಢ ವಿವಿ ಬಳಿಕ ಐಐಟಿ ಬಾಂಬೆ- ಹಾಸ್ಟೆಲ್ ಸ್ನಾನಗೃಹದಲ್ಲಿ ಇಣುಕಿದ ಕ್ಯಾಂಟೀನ್ ಸಿಬ್ಬಂದಿ ಬಂಧನ
Advertisement
ಪ್ರತಿಭಟನೆಯಿಂದ ವಿವಿಯಲ್ಲಿ ಯಾವುದೇ ಅಹಿತಕರ ಘಟನೆ ಆಗದಂತೆ ಎಚ್ಚರ ವಹಿಸಲು ಕ್ಯಾಂಪಸ್‌ನಲ್ಲಿ ಹೆಚ್ಚಿನ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.