ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಹಮ್ಮಿಕೊಂಡಿದ್ದ ಜಂತರ್ ಮಂತರ್ ಪ್ರತಿಭಟನೆ ಶುರುವಾಗೋದಕ್ಕೆ ಮುನ್ನವೇ ಮೂವರು ಮಾಜಿ ಸಿಎಂ ಸೇರಿ 2,000ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಿಜೆಪಿಗೆ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಮೂವರು ಪ್ರಮುಖ ಮಾಜಿ ಮುಖ್ಯಮಂತ್ರಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರಲ್ಲಿ ಅರವಿಂದ್ ಕೇಜ್ರಿವಾಲ್ (ದೆಹಲಿ ಮಾಜಿ ಸಿಎಂ), ಮಮತಾ ಬ್ಯಾನರ್ಜಿ (ಪಶ್ಚಿಮ ಬಂಗಾಳದ ಮಾಜಿ ಸಿಎಂ) ಮತ್ತು ಪಿಣರಾಯಿ ವಿಜಯನ್ (ಕೇರಳದ ಮಾಜಿ ಸಿಎಂ) ಸೇರಿದ್ದಾರೆ.
ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಹಾಗೂ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರು ಮುಂಬೈನಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ತಲುಪಿದ ತಕ್ಷಣವೇ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರತಿಭಟನೆ ಹತ್ತಿಕ್ಕುವ ನಿಟ್ಟಿನಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ – ಜಂತರ್ ಮಂತರ್ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ
ನಗರದಾದ್ಯಂತ ಬಿಗಿ ಭದ್ರತೆ
ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲು ಪೊಲೀಸರು ಅನುಮತಿ ನಿರಾಕರಿಸಿದ್ದು, ಮುಂಜಾಗ್ರತಾ ಕ್ರಮವಾಗಿ ದೆಹಲಿ, ಸಿಆರ್ಪಿಎಫ್, ಬಿಎಸ್ಎಫ್ ಮತ್ತು ಆರ್ಎಎಫ್ ಸೇರಿದಂತೆ 20,000ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ನಗರದ ಹಲವೆಡೆ ಕಟ್ಟೆಚ್ಚರ ವಹಿಸಲಾಗಿದೆ.
ದೇಶದಲ್ಲಿ ಇತ್ತೀಚೆಗೆ ನಡೆದ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರೀ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತರು ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಈ ಬೃಹತ್ ಜಂತರ್ ಮಂತರ್ 2.0 ಚಳವಳಿಯನ್ನು ಆಯೋಜಿಸಲಾಗಿದೆ. ಕಾಂಗ್ರೆಸ್, ಎಎಪಿ ಹಾಗೂ ತೃಣಮೂಲ ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳ ನಾಯಕರು ಸೇರಿದಂತೆ ಅನೇಕರು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.ಇದನ್ನೂ ಓದಿ: ಫ್ಲೈದುಬೈ ವಿಮಾನದಲ್ಲಿ ಭಾರತೀಯ ಕ್ಯಾಪ್ಟನ್ಗೆ ಚೂರಿ ಇರಿದ ಓಮಾನಿ ಪೈಲಟ್ – ಕೇಸ್ ದಾಖಲಿಸಿದ ಎನ್ಐಎ!

