– ಶಾಲೆಯ ಸ್ವಚ್ಛತಾ ಸಿಬ್ಬಂದಿಯಿಂದ ಮಕ್ಕಳ ಮೇಲೆ ದೌರ್ಜನ್ಯ
ಮುಂಬೈ: ಇಲ್ಲಿನ ನರ್ಸರಿಯಲ್ಲಿ 4 ವರ್ಷದ ಇಬ್ಬರು ಬಾಲಕಿಯರ ಮೇಲೆ ಸ್ವಚ್ಛತಾ ಸಿಬ್ಬಂದಿ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ಮಹಾರಾಷ್ಟ್ರದ (Maharashtra) ಥಾಣೆಯಲ್ಲಿ ನಡೆದಿದೆ.
Advertisement
ಆಂಗ್ಲ ಮಾಧ್ಯಮ ನರ್ಸರಿಯಲ್ಲಿ ಕೆಲಸ ಮಾಡುತ್ತಿದ್ದ 23 ವಯಸ್ಸಿನ ಸ್ವಚ್ಛತಾ ಸಿಬ್ಬಂದಿ 4 ವರ್ಷದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರನ್ನು ಶೌಚಾಲಯದ ಒಳಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದನ್ನೂ ಓದಿ: ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಲು SIT ಪತ್ರ ಬರೆದಿದೆ: ಸಿದ್ದರಾಮಯ್ಯ
Advertisement
ಘಟನೆ ಖಂಡಿಸಿ ಸಾರ್ವಜನಿಕರು ಹಾಗೂ ಪೋಷಕರು ಮುಂಬೈನ (Mumbai) ಬಾದಲ್‌ಪುರ ಎಂಬಲ್ಲಿ ರೈಲು ಮಾರ್ಗದ ಬಳಿ ಪ್ರತಿಭಟನೆ ನಡೆಸಿದರು. ಮಕ್ಕಳ ಸುರಕ್ಷತೆ ಕಾಪಾಡುವಲ್ಲಿ ನರ್ಸರಿಯಲ್ಲಿ ವಿಫಲಗೊಂಡಿದೆ. ಮಕ್ಕಳಿಗೆ ನರ್ಸರಿಯಲ್ಲಿ ಸರಿಯಾದ ಭದ್ರತೆ ಇಲ್ಲದಿರುವುದಕ್ಕೆ ಈ ಘಟನೆ ಸಂಭವಿಸಿದೆ. ಇದಕ್ಕೆಲ್ಲಾ ಶಾಲೆ ಹೊಣೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಲು SIT ಪತ್ರ ಬರೆದಿದೆ: ಸಿದ್ದರಾಮಯ್ಯ
Advertisement
Advertisement
ಘಟನೆ ಬೆಳಕಿಗೆ ಬರುತ್ತಿದ್ದಂತೆ ಆಡಳಿತ ಮಂಡಳಿಯು, ಪ್ರಾಂಶುಪಾಲರನ್ನು ವಜಾಗೊಳಿಸಿದೆ. ಶಿಕ್ಷಕರು ಹಾಗೂ ದಾದಿಯರನ್ನು ಅಮಾನತು ಮಾಡಿದೆ. ಆದರೆ ವಿದ್ಯಾರ್ಥಿಗಳ ಪೋಷಕರು ಅಷ್ಟಕ್ಕೆ ಸುಮ್ಮನಾಗಿಲ್ಲ. ಇದನ್ನೂ ಓದಿ: ದೇವರಾಜ್ ಅರಸ್ ಅವರಿಗೆ ಮರಣೋತ್ತರ ಭಾರತ ರತ್ನ ನೀಡಲು ಕೇಂದ್ರಕ್ಕೆ ಶಿಫಾರಸು- ಸಿದ್ದರಾಮಯ್ಯ
ನರ್ಸರಿಯಲ್ಲಿ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಯಾವುದೇ ಮಹಿಳಾ ಸಿಬ್ಬಂದಿ ಇರಲಿಲ್ಲ. ಸಿಸಿಟಿವಿ ಕ್ಯಾಮೆರಾಗಳು ಕೈಕೊಟ್ಟಿವೆ ಎಂದು ಪೊಲೀಸ್ ತನಿಖೆಯಲ್ಲಿ ವರದಿಯಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆಗೆ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ (Devendra Fudnavis) ಆದೇಶಿಸಿದ್ದಾರೆ. ಈ ಪ್ರಕರಣವನ್ನು ಫಾಸ್ಟ್ರ‍್ಯಕ್ ನ್ಯಾಯಾಲಯಕ್ಕೆ ವಹಿಸಲು ಇಂದೇ ಪ್ರಸ್ತಾವನೆ ಸಲ್ಲಿಸುವಂತೆ ಥಾಣೆ ಪೊಲೀಸ್ ಆಯುಕ್ತರಿಗೆ ಆದೇಶಿಸಿದ್ದಾರೆ.ಇದನ್ನೂ ಓದಿ: ವಿಧಾನ ಪರಿಷತ್‌ನಲ್ಲಿ ಬಹುಮತ ಬಂದ್ರೆ ಬಿಜೆಪಿ ತಂದಿದ್ದ ಭೂ ಕಂದಾಯ ಕಾಯ್ದೆ ರದ್ದು ಮಾಡ್ತೀನಿ: ಸಿದ್ದರಾಮಯ್ಯ
ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shindhe) ಕೂಡ ಈ ಘಟನೆಯ ಬಗ್ಗೆ ಗಮನ ಹರಿಸಿ, ಈ ಪ್ರಕರಣವನ್ನು ನಾನು ಗಂಭೀರವಾಗಿ ಪರಿಗಣಿಸಿದ್ದೇನೆ. ಇದರ ಬಗ್ಗೆ (ಎಸ್‌ಐಟಿ) ತನಿಖೆ ನಡೆಯುತ್ತಿದೆ. ಇದನ್ನು ನಾನು ಸುಮ್ಮನೇ ಬಿಡುವುದಿಲ್ಲ. ಸರಿಯಾದ ಕ್ರಮ ಕೈಗೊಳ್ಳುತ್ತೇನೆ ಎಂದರು. ಇದನ್ನೂ ಓದಿ: ಶತಮಾನ ಕಂಡ ಸರ್ಕಾರಿ ಶಾಲೆ ಕಿಡಿಗೇಡಿಗಳಿಂದ ಧ್ವಂಸ
ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಮಹಾರಾಷ್ಟ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ನಾಯಕ ವಿಜಯ್ ವಾಡೆತ್ತಿವಾರ್ (Vijay Namdevrao Wadettiwar) ಆರೋಪಿಸಿದ್ದಾರೆ. ಈ ಘಟನೆಯು ಮಹಾರಾಷ್ಟçಕ್ಕೆ ನಾಚಿಗೇಡಿನ ಸಂಗತಿಯಾಗಿದೆ. ಎಲ್ಲರೂ ಈ ಘಟನೆಯನ್ನು ವಿಚಾರಣೆಗೆ ಒಳಪಡಿಸಿ ತಪ್ಪಿತಸ್ಥರನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸಾಮಾಜಿಕ ನ್ಯಾಯದ ಪರ ಇರೋದಕ್ಕೆ ನನ್ನ ವಿರುದ್ಧ ಬಿಜೆಪಿ ಷಡ್ಯಂತ್ರ: ಸಿದ್ದರಾಮಯ್ಯ
ಇಲ್ಲಿ ಯಾವುದೇ ರಾಜಕೀಯ ಮಾಡಬಾರದು. ಆದಷ್ಟು ಬೇಗ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ (Uddhav Thackeray) ಒತ್ತಾಯಿಸಿದ್ದಾರೆ. ಹತ್ತು ವರ್ಷಗಳ ಹಿಂದೆ, ದೆಹಲಿಯಲ್ಲಿ ಸಂಭವಿಸಿದ ನಿರ್ಭಯಾ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಬಹಳ ಸಮಯದ ನಂತರ ಶಿಕ್ಷೆಯಾಯಿತು. ನ್ಯಾಯ ವಿಳಂಬ ಆಗಬಾರದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಲವ್ ಪ್ರಪೋಸ್ ನಿರಾಕರಿಸಿದ್ದಕ್ಕೆ ಪುತ್ತೂರಿನಲ್ಲಿ ಅನ್ಯಕೋಮಿನ ವಿದ್ಯಾರ್ಥಿನಿಗೆ ಅಪ್ರಾಪ್ತನಿಂದ ಚಾಕು ಇರಿತ