ಕೋಲ್ಕತ್ತಾ: ಪ್ರವಾದಿ ಮೊಹಮ್ಮದ್ ಪೈಗಂಬರ್ ಅವಹೇಳನ ಮಾಡಿದ್ದನ್ನು ಖಂಡಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಹೌರಾ ಪೊಲೀಸರು 70 ಜನರನ್ನು ಬಂಧಿಸಿದ್ದಾರೆ.
ಹಿಂಸಾಚಾರದ ಹಿನ್ನೆಲೆಯಲ್ಲಿ ಹೌರಾ ಜಿಲ್ಲೆಯಲ್ಲಿ ಜೂನ್ 13 ಬೆಳಗ್ಗೆ 6 ಗಂಟೆಯವರಗೆ ಇಂಟರ್‌ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: ಕೋಮು ದ್ವೇಷಭಾಷಣ – ಓವೈಸಿ, ನೂಪುರ್ ಶರ್ಮಾ ವಿರುದ್ಧ FIR
ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸುವಂತೆ ಗೃಹ ಸಚಿವ ಅಮಿತ್ ಶಾ ಅವರನ್ನು ಬಿಜೆಪಿ ಒತ್ತಾಯಿಸಿದೆ. ಬಿಜೆಪಿ ಸಂಸದ ಮತ್ತು ಪಶ್ಚಿಮ ಬಂಗಾಳದ ಬಿಜೆಪಿ ಉಪಾಧ್ಯಕ್ಷ ಸೌಮಿತ್ರಾ ಖಾನ್ ಅವರು ಅಮಿತ್ ಶಾ ಅವರಿಗೆ ರಾಜ್ಯದಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಪ್ರವಾದಿ ವಿರುದ್ಧ ಅವಹೇಳನ – ಕ್ರಮಕ್ಕೆ ಆಗ್ರಹಿಸಿ ದೇಶಾದ್ಯಂತ ಮುಸ್ಲಿಮರ ಪ್ರತಿಭಟನೆ, ಬುರ್ಕಾ ಧರಿಸಿ ಬೀದಿಗಿಳಿದ ಮಹಿಳೆಯರು
ಶುಕ್ರವಾರದ ಪ್ರಾರ್ಥನೆಯ ನಂತರ ಜಮ್ಮುಕಾಶ್ಮೀರ, ದೆಹಲಿ, ಉತ್ತರ ಪ್ರದೇಶ, ತೆಲಂಗಾಣ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನಾಕಾರರು ನೂಪುರ್ ಶರ್ಮಾ ಅವರ ಬಂಧನಕ್ಕೆ ಆಗ್ರಹಿಸಿ ಫಲಕಗಳನ್ನು ಹಿಡಿದುಕೊಂಡು ಪ್ರತಿಭಟಿಸುತ್ತಿದ್ದಾರೆ.