ಬೀದರ್: ಸರ್ಕಾರಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ (Protocol) ಗಾಳಿಗೆ ತೂರಿ, ಬಿಜೆಪಿ ಶಾಸಕರ ಮಾತಿಗೆ ಮಣಿದು ಆರೋಗ್ಯ ಸಚಿವರ ಫೋಟೋ ಕೈಬಿಟ್ಟ ಇಬ್ಬರು ಹಿರಿಯ ಆರೋಗ್ಯಾಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿ ಆದೇಶಿಸಿದೆ.
ಜಿಲ್ಲಾ ಆರೋಗ್ಯಾಧಿಕಾರಿ (DHO) ಡಾ. ಧ್ಯಾನೇಶ್ವರ್ ನೀರಗುಡಿ ಹಾಗೂ ಬಸವಕಲ್ಯಾಣ ತಾಲೂಕು ಆರೋಗ್ಯಾಧಿಕಾರಿ (THO) ಡಾ. ಅಶೋಕ್ ಮೈಲಾರೆ ಅಮಾನತಾದ ಅಧಿಕಾರಿಗಳು. ಕರ್ತವ್ಯಲೋಪ ಹಾಗೂ ಶಿಷ್ಟಾಚಾರ ಉಲ್ಲಂಘನೆಯ ಗಂಭೀರ ಆರೋಪದಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಾದ ಗುರುದತ್ತ ಹೆಗಡೆ ಅವರು ಈ ಅಮಾನತು ಆದೇಶ ಹೊರಡಿಸಿದ್ದಾರೆ.

ಏನಿದು ಘಟನೆ?
ಸೆಪ್ಟೆಂಬರ್ 16ರಂದು ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನೂತನ ಸಾರ್ವಜನಿಕ ಆಸ್ಪತ್ರೆ ಕಟ್ಟಡ ಕಾಮಗಾರಿಯ ಭೂಮಿಪೂಜೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಸ್ಥಳೀಯ ಬಿಜೆಪಿ ಶಾಸಕ ಶರಣು ಸಲಗರ್ ಅವರ ಒತ್ತಡಕ್ಕೆ ಮಣಿದ ಅಧಿಕಾರಿಗಳು, ಅಧಿಕೃತ ವೇದಿಕೆ ಬ್ಯಾನರ್‌ನಲ್ಲಿ ಆರೋಗ್ಯ ಇಲಾಖೆಯ ಸಚಿವರಾದ ಯು.ಟಿ. ಖಾದರ್ ಅವರ ಭಾವಚಿತ್ರವನ್ನು ಹಾಕದೆ ಕೈಬಿಟ್ಟಿದ್ದರು. ಇದನ್ನೂ ಓದಿ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ದಂಡ – 3 ಕಂತಿನಲ್ಲಿ ಪಾವತಿಸಲು 6 ತಿಂಗಳ ಗಡುವು

