ಉಡುಪಿ, ದ.ಕ, ಶಿವಮೊಗ್ಗದಲ್ಲಿ ಖಾಸಗಿ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿ: ಸುನಿಲ್ ಕುಮಾರ್

Public TV
2 Min Read
SUNIL KUMAR 1

ಉಡುಪಿ: ಸರ್ಕಾರಿ ಬಸ್‌ಗಳೊಂದಿಗೆ (Govt Bus) ಖಾಸಗಿ ಬಸ್‌ಗಳಲ್ಲಿಯೂ (Private Bus) ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯವನ್ನು (Free Travel Facility) ಕಲ್ಪಿಸಬೇಕೆಂದು ಶಾಸಕ ಸುನಿಲ್ ಕುಮಾರ್ (Sunil Kumar) ಆಗ್ರಹಿಸಿದ್ದಾರೆ.

SUNILKUMAR

ಕಾಂಗ್ರೆಸ್ ಗ್ಯಾರಂಟಿಗಳಲ್ಲಿ (Congress Guarantee) ಒಂದಾದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಅನುಷ್ಠಾನಕ್ಕೆ ಬರುವುದಾಗಿ ನೂತನ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ. ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ಸುನಿಲ್ ಕುಮಾರ್ ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿನ ಜನರಿಗೆ ಇರಿಂದ ಅನ್ಯಾಯವಾಗಲಿದೆ ಎಂದು ಹೇಳಿದ್ದಾರೆ.

ಟ್ವೀಟ್‌ನಲ್ಲೇನಿದೆ?
ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಬಹುತೇಕ ಭಾಗಗಳಿಗೆ ಸಾರಿಗೆ ಸಂಪರ್ಕ ಲಭ್ಯವಾಗುವುದು ಖಾಸಗಿ ಬಸ್‌ಗಳ ಮೂಲಕ. ಇಲ್ಲಿ ಸರ್ಕಾರಿ ಬಸ್ ಸೇವೆ ಲಭ್ಯವಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೀಡುವ ಉಚಿತ ಬಸ್ ಸೇವೆಯನ್ನು ಸರ್ಕಾರಿ ಸಾರಿಗೆ ಸಂಸ್ಥೆಗೆ ಮಾತ್ರ ಸೀಮಿತಗೊಳಿಸಲು ನಿರ್ಧರಿಸಿದೆ. ಇದರಿಂದ ಈ ಭಾಗದ ಜನರಿಗೆ ಅನ್ಯಾಯವಾಗಲಿದ್ದು, ಸರ್ಕಾರ ಈ ಮೂರು ಜಿಲ್ಲೆಗಳಲ್ಲಿ ಖಾಸಗಿ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಬೇಕು ಎಂದು ಬರೆದಿದ್ದಾರೆ. ಇದನ್ನೂ ಓದಿ: ರಾಜ್ಯದ ಎಲ್ಲ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ – ರಾಮಲಿಂಗಾರೆಡ್ಡಿ ಭರವಸೆ

ಎಲ್ಲಾ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ ಎನ್ನುವುದು ಕಾಂಗ್ರೆಸ್ ಸರ್ಕಾರದ ಪ್ರಣಾಳಿಕೆಯಾಗಿತ್ತು. ಉಚಿತ ಬಸ್ ಪ್ರಯಾಣ ಗ್ಯಾರಂಟಿ ಜಾರಿಗೆ ಬರುವುದರಲ್ಲಿ ಅನುಮಾನವೇ ಇಲ್ಲ. ಜೂನ್ 1 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಇದನ್ನೂ ಓದಿ: ಆರನೆಯ ಗ್ಯಾರಂಟಿ ಪಕ್ಕಾ: ಪ್ರಿಯಾಂಕ್ ಖರ್ಗೆ

Share This Article