ಬೆಳಗಾವಿ: ವಿವಾಹಿತ ಮಹಿಳೆಯ ಜೊತೆ ಘಟಪ್ರಭ ಪೊಲೀಸ್ ಠಾಣೆಯ ಪಿಎಸ್‍ಐ ಅಕ್ರಮ ಸಂಬಂಧ ನಡೆಸುತ್ತಿದ್ದ. ಈ ವಿಷಯ ತಿಳಿದ ಮಹಿಳೆಯ ಪತಿ ಮನನೊಂದು ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ಗೋಕಾಕ್ ತಾಲೂಕಿನಲ್ಲಿ ನಡೆದಿದೆ.
ಲಕ್ಷ್ಮಣ್ ದಳವಾವಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಪಿಎಸ್‍ಐ ದೇವಾನಂದ್ ಹಾಗೂ ಲಕ್ಷ್ಮಣ ಪತ್ನಿ ಮಧ್ಯೆ ಅನೈತಿಕ ಸಂಬಂಧವಿತ್ತು ಎಂಬ ವಿಷಯ ಬಹಿರಂಗವಾದ ಮೇಲೆ ಹಿರಿಯರೆಲ್ಲರು ಸೇರಿ ರಾಜಿ ಪಂಚಾಯಿತಿ ಮಾಡಿದ್ದರು. ಆದರೆ ಪತ್ನಿಯ ಅನೈತಿಕ ಸಂಬಂಧದಿಂದ ಮನನೊಂದಿದ್ದ ಲಕ್ಷ್ಮಣ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಅನೈತಿಕ ಸಂಬಂಧದ ವಿಷಯ ಬೆಳಕಿಗೆ ಬಂದಂತೆ ಪಿಎಸ್‍ಐ ದೇವಾನಂದ್ 4 ದಿನಗಳ ರಜೆ ತೆಗೆದುಕೊಂಡು, ಸರ್ಕಾರಿ ಮೊಬೈಲ್ ಠಾಣೆಯಲ್ಲಿ ಸಿಬ್ಬಂದಿಗಳಿಗೆ ನೀಡಿ ಪರಾರಿಯಾಗಿದ್ದಾರೆ. ಪಿಎಸ್‍ಐ ಅಕ್ರಮ ಸಂಬಂಧ ಪ್ರಕರಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆ ನಡೆಸಲು ಎಸ್‍ಪಿ ಸುಧೀರ್ ಕುಮಾರ್ ರೆಡ್ಡಿ ಆದೇಶಿಸಿದ್ದಾರೆ.
ಸದ್ಯ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮೀರಜ್ ಖಾಸಗಿ ಆಸ್ಪತ್ರೆಯಲ್ಲಿ ಲಕ್ಷ್ಮಣ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೆಯೇ ಗೋಕಾಕ್ ಡಿವೈಎಸ್‍ಪಿ ಡಿ.ಟಿ ಪ್ರಭು ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದ್ದು, ಶೀಘ್ರದಲ್ಲಿ ಪ್ರಕರಣದ ವರದಿ ನೀಡುವಂತೆ ಎಸ್‍ಪಿ ಸೂಚನೆ ನೀಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews