ಚಿಕ್ಕಮಗಳೂರು: ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ ಪ್ರಕರಣದ ಬಂಧಿತ ಆರೋಪಿ ಹಾಗೂ ಸಬ್ ಇನ್‍ಸ್ಪೆಕ್ಟರ್ ಅರ್ಜುನ್ ಗೆ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಠಾಣೆಯ ಸಬ್ ಇನ್‍ಸ್ಪೆಕ್ಟರ್ ಅರ್ಜುನ್ ವಿಚಾರಣೆಗೆಂದು ಕರೆತಂದು ಮೇ.10ರಂದು ಯುವಕನಿಗೆ ಮೂತ್ರ ಕುಡಿಸಿ ನೆಲದ ಮೇಲೆ ಬಿದ್ದ ಮೂತ್ರ ನೆಕ್ಕಿಸಿದ್ದರು ಎಂಬ ಆರೋಪ ಎದುರಿಸುತ್ತಿದ್ದರು. ಪ್ರಕರಣ ಸಂಬಂಧ ದಲಿತ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು. ಮೂತ್ರ ಕುಡಿಸಿದ ಆರೋಪದಡಿ ಪಿ.ಎಸ್.ಐ. ಅರ್ಜುನ್ ಮೇಲೂ ಕೇಸ್ ದಾಖಲಾಗಿತ್ತು. ಸರ್ಕಾರ ಪ್ರಕರಣದ ತನಿಖೆಯನ್ನ ಸಿಐಡಿ ಹೆಗಲಿಗೆ ಹಾಕಿತ್ತು. ಅಕ್ಟೋಬರ್ 1ರಂದು ಬೆಂಗಳೂರಿನಲ್ಲಿ ಪಿಎಸ್‍ಐ. ಅರ್ಜುನ್ ನನ್ನ ಬಂಧಿಸಿದ ಸಿ.ಐ.ಡಿ. ಪೊಲೀಸರು ಇಂದು ಚಿಕ್ಕಮಗಳೂರು ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಧೀಶೆ ಪುಷ್ಪಾಂಜಲಿ ಅವರು ಆರೋಪಿ ಅರ್ಜುನ್ ಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.
Advertisement
Advertisement
ಗೋಣಿಬೀಡು ಠಾಣೆಯಲ್ಲಿ ಪಿ.ಎಸ್.ಐ. ಆಗಿದ್ದ ಅರ್ಜುನ್ ಮೇ 10ರಂದು ಮಹಿಳೆಗೆ ಕರೆ ಮಾಡಿದ ವಿಚಾರ ಸಂಬಂಧ ಪುನೀತ್ ಯುವಕನನ್ನ ವಿಚಾರಣೆಗೆ ಕರೆತಂದಿದ್ದರು. ಈ ವೇಳೆ ನನಗೆ ಬಾಯಾರಿಕೆ ಎಂದು ನೀರು ಕೇಳಿದಾಗ ಮತ್ತೊಬ್ಬ ಆರೋಪಿಯ ಮೂತ್ರ ಕುಡಿಸಿ, ನೆಲಕ್ಕೆ ಬಿದ್ದ ಮೂತ್ರವನ್ನ ನೆಕ್ಕಿಸಿದ್ದರು ಎಂದು ಪುನೀತ್ ಆರೋಪಿಸಿದ್ದರು. ಇದನ್ನೂ ಓದಿ: PSI ಮೂತ್ರ ಕುಡಿಸಿದ್ದ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ್ದೇವೆ: ಐಜಿಪಿ ದೇವ್ ಜ್ಯೋತಿ ರೇ
Advertisement
Advertisement
ಘಟನೆ ಸಂಬಂಧ ನೊಂದ ಯುವಕ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದ. ಬಳಿಕ ಅರ್ಜುನ್ ವಿರುದ್ಧವೂ ಗೋಣಿಬೀಡು ಠಾಣೆಯಲ್ಲಿ ಕೇಸ್ ದಾಖಲಾಗಿ, ಸರ್ಕಾರ ಅರ್ಜುನ್ ರನ್ನ ಅಮಾನತು ಮಾಡಿ ಪ್ರಕರಣವನ್ನ ಸಿಐಡಿಗೆ ವಹಿಸಿತ್ತು. ಬಂಧನಕ್ಕೊಳಗಾಗುವ ಆತಂಕದಿಂದ ಅರ್ಜುನ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಕೂಡ ಸಲ್ಲಿಸಿದ್ದರು. ಆದರೆ, ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು, ಅಕ್ಟೋಬರ್ 1ರ ಬುಧವಾರ ರಾತ್ರಿ ಸಿಐಡಿ ಪೊಲೀಸರು ಅರ್ಜುನ್ ರನ್ನ ಬೆಂಗಳೂರಿನಲ್ಲಿ ಬಂಧಿಸಿದ್ದರು. ಇದನ್ನೂ ಓದಿ: ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ – ಪಿಎಸ್‍ಐ ವಿರುದ್ದ ಎಫ್‍ಐಆರ್ ದಾಖಲು