ಬೆಂಗಳೂರು: ಸರ್ಕಾರಿ ಅಧಿಕಾರಿ ಸಮನ್ಸ್ ಕಳುಹಿಸಿದರೆ, ಜವಾಬ್ದಾರಿಯುತ ನಾಗರಿಕನಾಗಿ, ಜನಪ್ರತಿನಿಧಿಯಾಗಿ ಅಲ್ಲಿಗೆ ಬಂದು ಪ್ರಿಯಾಂಕ್ ಖರ್ಗೆ ಉತ್ತರಿಸಬೇಕಿತ್ತು ಎಂದು ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಟ್ವೀಟ್ ದಾಳಿ ನಡೆಸಿದೆ.
ಟ್ವೀಟ್‍ನಲ್ಲಿ ಏನಿದೆ?: ಸರ್ಕಾರಿ ಅಧಿಕಾರಿ ಸಮನ್ಸ್ ಕಳುಹಿಸಿದರೆ, ಜವಾಬ್ದಾರಿಯುತ ನಾಗರಿಕನಾಗಿ, ಜನಪ್ರತಿನಿಧಿಯಾಗಿ ಅಲ್ಲಿಗೆ ಬಂದು ಪ್ರಿಯಾಂಕ್ ಖರ್ಗೆ ಉತ್ತರಿಸಬೇಕಿತ್ತು. ಪ್ರಕರಣದ ಬಗ್ಗೆ ತಿಳಿದಿರುವ ಮಾಹಿತಿಯನ್ನು ಹಂಚಿಕೊಳ್ಳಿ ಎಂದಷ್ಟೇ ಹೇಳಿದ್ದು, ನೀವೇಕೆ? ನನ್ನನ್ನೇ ಆರೋಪಿಯಂತೆ ಬಿಂಬಿಸುತ್ತಿದ್ದಾರೆ? ಎಂದು ಗೋಳಾಡುತ್ತಿದ್ದೀರಿ? ಎಂದು ವಾಗ್ದಾಳಿ ನಡೆಸಿದೆ.
Advertisement
ನೇಮಕಾತಿ ಅಕ್ರಮದ ಕುರಿತಂತೆ ಆರಂಭದಿಂದಲೂ ತನಿಖಾಧಿಕಾರಿಯಂತೆ ವರ್ತಿಸಿದ @PriyankKharge ಅವರು ಈಗ ವಿಚಾರಣೆಗೆ ಕರೆದಾಗ ಸೊಬಗನಂತೆ ವರ್ತಿಸುತ್ತಿದ್ದಾರೆ.
ಇದೆಲ್ಲಾ ಅಕ್ರಮದಲ್ಲಿ ಭಾಗಿಯಾಗಿರುವ ಖರ್ಗೆ ಮನೆತನದ ಅತ್ಯಾಪ್ತರನ್ನು ರಕ್ಷಿಸಲು ಮಾಡುತ್ತಿರುವ ನವರಂಗಿ ಆಟವಲ್ಲದೆ ಮತ್ತೇನು?#CONgressPSIToolkit
— BJP Karnataka (@BJP4Karnataka) April 26, 2022
ನೇಮಕಾತಿ ಅಕ್ರಮದ ಕುರಿತಂತೆ ಆರಂಭದಿಂದಲೂ ತನಿಖಾಧಿಕಾರಿಯಂತೆ ವರ್ತಿಸಿದ ಪ್ರಿಯಾಂಕ್ ಖರ್ಗೆ ಅವರು ಈಗ ವಿಚಾರಣೆಗೆ ಕರೆದಾಗ ಸೊಬಗನಂತೆ ವರ್ತಿಸುತ್ತಿದ್ದಾರೆ. ಇದೆಲ್ಲಾ ಅಕ್ರಮದಲ್ಲಿ ಭಾಗಿಯಾಗಿರುವ ಖರ್ಗೆ ಮನೆತನದ ಅತ್ಯಾಪ್ತರನ್ನು ರಕ್ಷಿಸಲು ಮಾಡುತ್ತಿರುವ ನವರಂಗಿ ಆಟವಲ್ಲದೆ ಮತ್ತೇನು? ಎಂದು ಕಿಡಿಕಾರಿದೆ. ಇದನ್ನೂ ಓದಿ: ರೇವಣ್ಣನಿಗೆ ಶಿಕ್ಷಣ ಅಂದರೆ ಏನು ಅಂತ ಗೊತ್ತಿಲ್ಲ: ಅಶ್ವತ್ಥ್ ನಾರಾಯಣ್
Advertisement
ಸರ್ಕಾರಿ ಅಧಿಕಾರಿ ಸಮನ್ಸ್ ಕಳುಹಿಸಿದರೆ, ಜವಾಬ್ದಾರಿಯುತ ನಾಗರಿಕನಾಗಿ, ಜನಪ್ರತಿನಿಧಿಯಾಗಿ ಅಲ್ಲಿಗೆ ಬಂದು @PriyankKharge ಉತ್ತರಿಸಬೇಕಿತ್ತು.
ಪ್ರಕರಣದ ಬಗ್ಗೆ ತಿಳಿದಿರುವ ಮಾಹಿತಿಯನ್ನು ಹಂಚಿಕೊಳ್ಳಿ ಎಂದಷ್ಟೇ ಹೇಳಿದ್ದು,
ನೀವೇಕೆ ʼನನ್ನನ್ನೇ ಆರೋಪಿಯಂತೆ ಬಿಂಬಿಸುತ್ತಿದ್ದಾರೆʼ ಎಂದು ಗೋಳಾಡುತ್ತಿದ್ದೀರಿ?#CONgressPSIToolkit
— BJP Karnataka (@BJP4Karnataka) April 26, 2022
ಸಿಆರ್‌ಪಿಸಿ ಪ್ರಕಾರ ತನಿಖಾಧಿಕಾರಿಗಳಿಗೆ ಯಾವುದೇ ಪ್ರಕರಣದ ತನಿಖೆ ನಡೆಸುವಾಗ ದಾಖಲೆ ಹಾಗೂ ಸಾಕ್ಷಿಯ ಮೂಲ ಕೇಳುವ ಅಧಿಕಾರವಿದೆ. ಸಿಐಡಿ ಅಧಿಕಾರಿಗಳು ನಿಯಮದ ಪ್ರಕಾರ ನೋಟಿಸ್ ನೀಡಿದ್ದಾರೆ. ಅಧಿಕಾರಿಗಳ ಈ ನಡೆಯನ್ನು ತಪ್ಪು ಎಂದು ಹೇಳಲು ಕಾಂಗ್ರೆಸ್ಸಿಗರೇನು ಸಂವಿಧಾನ ಹಾಗೂ ಕಾನೂನಿಗೆ ಅತೀತರೇ ಎಂದು ವಾಗ್ದಾಳಿ ನಡೆಸಿದೆ. ಇದನ್ನೂ ಓದಿ: ಟಿಆರ್‌ಎಸ್, ಕಾಂಗ್ರೆಸ್ ಕೈಜೋಡಿಸಿದರೂ ಬಿಜೆಪಿಯನ್ನು ಎದುರಿಸಲಾಗಲ್ಲ: ಸಂಸದ